ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಎಸ್. ರಘುನಾಥ್ ಆಯ್ಕೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ಅಧ್ಯಕ್ಷ ಸ್ಥಾನಕ್ಕಾಗಿ ಭಾನುವಾರ ನಡೆದಿದ್ದ ಚುನಾವಣೆಯಲ್ಲಿ ಎಸ್.ರಘುನಾಥ್ ಗೆಲುವು ಸಾಧಿಸಿದ್ದು, ತಮ್ಮ ಪ್ರತಿಸ್ಪರ್ಧಿ ಭಾನುಪ್ರಕಾಶ್ ಅವರನ್ನು ಹಿಂದಿಕ್ಕಿದ್ದಾರೆ.


ನ್ನೂ ಓದಿ: ಆದಿತ್ಯ ಯೋಗದಿಂದ ನಾಳೆಯಿಂದ ಈ 5 ರಾಶಿಗೆ ಎಲ್ಲವೂ ಶುಭ


ರಘುನಾಥ್ 13399 ಮತಗಳನ್ನು ಪಡೆದು ಅಭೂತಪೂರ್ವ ಗೆಲುವು ಸಾಧಿಸಿದ್ದು, ಪ್ರತಿಸ್ಪರ್ಧಿಯಾಗಿದ್ದ ಭಾನುಪ್ರಕಾಶ್ ಶರ್ಮ 11235 ಮತ ಪಡೆದು, 2164 ಮತಗಳ ಅಂತರದಲ್ಲಿ ರಘುನಾಥ ಗೆಲುವಿನ ನಗೆ ಬೀರಿದ್ದಾರೆ.


ನ್ನೂ ಓದಿ: SC-ST ವಿದ್ಯಾರ್ಥಿಗಳಿಗೆ ಸಿಗಲಿದೆ 50,000 ಸ್ಕಾಲರ್‌ ಶಿಪ್


ಫಲಿತಾಂಶ ಹೊರಬಿದ್ದ ನಂತರ ಮಾತನಾಡಿದ ರಘುನಾಥ್, ರಾಜ್ಯದಲ್ಲಿ 45ಲಕ್ಷ ಬ್ರಾಹ್ಮಣರಿದ್ದು, ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಪೌರೋಹಿತ್ಯ, ಅಡುಗೆ ಕೆಲಸ, ಅರ್ಚಕ ವೃತ್ತಿ ಮಾಡುವವರೇ ಹೆಚ್ಚಾಗಿದ್ದು, ಅಂತಹವರ ಮಕ್ಕಳಿಗೆ ಶಿಕ್ಷಣ, ಉದ್ಯೋಗದಲ್ಲಿ ಹೆಚ್ಚಿನ ಅವಕಾಶ ಸಿಗಬೇಕು.

ವೃತ್ತಿ ಭಾಂದವರು ಆರ್ಥಿಕವಾಗಿ ಸದೃಢರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ ನಿಟ್ಟಿನಲ್ಲಿ ವಿವಿಧ ಯೋಜನೆಗಳನ್ನು ರೂಪಿಸಲಾಗುವುದು. ಒಟ್ಟಾರೆ ವಿಪ ಸಮುದಾಯದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಎಂದು ಹೇಳಿದರು.


ನ್ನೂ ಓದಿ: ಖಾಸಗಿ ಶಾಲೆಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್;  ಏನದು? ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.