ಅಜ್ಜಂಪುರ: (ನ್ಯೂಸ್ ಮಲ್ನಾಡ್ ವರದಿ) ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಾಗವಂಗಲ ಗ್ರಾಮದಲ್ಲಿ 20.01.2026 ರಂದು ಸಂಜೆ 7.30 ಗಂಟೆಯ ಸಮಯದಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿರುವ ಕುರಿತು ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ನಾಗವಂಗಲ ಗ್ರಾಮದ ಕುಮಾರ ಅವರ ಚಿಲ್ಲರೆ ಅಂಗಡಿ ಮುಂಭಾಗ ಸಾರ್ವಜನಿಕರಿಗೆ ಮದ್ಯ ಮಾರಾಟ ಹಾಗೂ ಸೇವನೆಗೆ ಸಹಕಾರ ನೀಡುತ್ತಿದ್ದ ಆರೋಪದ ಮೇಲೆ ಕುಮಾರ್ ಎನ್.ಎಂ. ವಿರುದ್ಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸ್ಥಳ ಪರಿಶೀಲನೆಯ ವೇಳೆ 90 ಎಂ.ಎಲ್. ಗಾತ್ರದ 6 ಖಾಲಿ ರಾಜವಿಸ್ಕಿ ಪೌಚ್‌ಗಳು, ಅರ್ಧ ಲೀಟರ್ ಸಾಮರ್ಥ್ಯದ ಒಂದು ಖಾಲಿ ನೀರಿನ ಬಾಟಲಿ ಹಾಗೂ ಮದ್ಯ ಸೇವನೆಗೆ ಬಳಸಿದ್ದ ಎರಡು ಖಾಲಿ ಪ್ಲಾಸ್ಟಿಕ್ ಲೋಟಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆರೋಪಿತನ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಈ ಕಾರ್ಯಚರಣೆಯಲ್ಲಿ ಅಜ್ಜಂಪುರ ಪಿಎಸ್ಐ ಗಜೇಂದ್ರ ಎನ್. ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು.













