ಚಿಕ್ಕಮಗಳೂರು: ಶ್ರೀಗಂಧ ಮರ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಚಿಕ್ಕಮಗಳೂರು: (ನ್ಯೂಸ್‌ ಮಲ್ನಾಡ್‌ ವರದಿ) ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಆಂಜನೇಯ (25), ಸುಬ್ರಮಣ್ಯ (25) ಹಾಗೂ ಸಂಜಯ್ (20) ಬಂಧಿತ ಆರೋಪಿಗಳು.

ಇದನ್ನೂ ಓದಿ: ವರ್ಷದ ಮೊದಲ ಸೂರ್ಯಗ್ರಹಣ ಯಾವಾಗ?; ಯಾವ ರಾಶಿಗೆ ಶುಭ, ಯಾರಿಗೆ ಅಶುಭ?

ನಗರ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಶ್ರೀಗಂಧದ ಮರಗಳ ಕಳವು ಪ್ರಕರಣಗಳನ್ನು ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ಸುಮಾರು 5 ಲಕ್ಷ ರೂ. ಮೌಲ್ಯದ 93 ಕೆಜಿ ಶ್ರೀಗಂಧವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳಿಂದ 93 ಕೆಜಿ ಶ್ರೀಗಂಧ, ಜೊತೆಗೆ ಕೃತ್ಯಕ್ಕೆ ಬಳಸಿದ್ದ ಕೆಎ 18 ಇಎನ್ 6681 ನೋಂದಣಿ ಸಂಖ್ಯೆಯ ಕೆಟಿಎಂ ಬೈಕ್ (ಅಂದಾಜು ಮೌಲ್ಯ 2 ಲಕ್ಷ ರೂ.) ಅನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ: ಸೂರ್ಯನಂತೆ ಹೊಳೆಯಲಿದೆ ಈ ರಾಶಿಯರ ಅದೃಷ್ಟ!; ಯಾವ ರಾಶಿಯವರಿಗೆ ಅದೃಷ್ಟ?

ಶ್ರೀಗಂಧ ಕಳವು ಪ್ರಕರಣಗಳನ್ನು ಶೀಘ್ರ ಪತ್ತೆ ಹಚ್ಚುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಾನ್ಯ ಜಿತೇಂದ್ರ ಕುಮಾರ್ ದಯಾಮ ಐಪಿಎಸ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸಿ.ಟಿ. ಜಯಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿತ್ತು. ಉಪವಿಭಾಗ ಪೊಲೀಸ್ ಉಪಾಧೀಕ್ಷಕ ನಾಗರಾಜು ಎ.ಆರ್., ಸಿಪಿಐ ವಿಜಯ್ ಕುಮಾರ್ ಬಿರಾದಾರ್, ಬಸವನಹಳ್ಳಿ ಠಾಣೆಯ ಪಿಎಸ್ಐಗಳಾದ ಕೀರ್ತಿ ಕುಮಾರ್ ಹಾಗೂ ಅಜರುದ್ದೀನ್ ಮತ್ತು ಸಿಬ್ಬಂದಿಗಳಾದ ರವೀಂದ್ರ, ಲಿಂಗಮೂರ್ತಿ ಹಾಗೂ ಮಧುಸೂಧನ್ ಅವರನ್ನು ಒಳಗೊಂಡ ತಂಡವು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಯಿತು.

ಇದನ್ನೂ ಓದಿ: ಅಂಚೆ ಇಲಾಖೆ ಜೊತೆಗೂಡಿ ಸ್ವಂತ ಉದ್ಯಮ ಆರಂಭಿಸಿ; 20,000 ರೂ. ದಿಂದ 80,000 ರೂ.ವರೆಗೆ ಗಳಿಸಿ!

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.