ಕೊಪ್ಪ: ಶಾಲಾ ವಾಹನ ಅಪಘಾತ: ಚಾಲಕ ಸಾವು, ಮಕ್ಕಳಿಗೆ ಗಾಯ

ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ತಾಲೂಕಿನ ಅಮ್ಮಡಿ ಸಮೀಪ ಕೊಪ್ಪ–ತೀರ್ಥಹಳ್ಳಿ ರಸ್ತೆಯಲ್ಲಿ ಕೊಪ್ಪ ನಾರ್ಬರ್ಟ್ ಶಾಲೆಯ ವಾಹನ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ವಾಹನದ ಚಾಲಕ ಮೃತಪಟ್ಟಿದ್ದಾರೆ. ಮೃತ ಚಾಲಕನನ್ನು ಲಕ್ಷ್ಮಣ್ ಬಸವಾನಿ ಎಂದು ಗುರುತಿಸಲಾಗಿದೆ.

ಸಂಜೆ ಶಾಲೆ ಮುಗಿದ ಬಳಿಕ ಮಕ್ಕಳನ್ನು ಮನೆಗೆ ಕರೆದೊಯ್ಯುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಚಾಲಕ ವಾಹನದೊಳಗೆ ಸಿಲುಕಿಕೊಂಡಿದ್ದು, ಅವರನ್ನು ಹೊರತೆಗೆಯಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ. ಆದರೆ ದುರದೃಷ್ಟವಶಾತ್ ಚಾಲಕ ಮೃತಪಟ್ಟಿದ್ದಾರೆ. ವಾಹನದಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.