ಹಾಸನ: (ನ್ಯೂಸ್ ಮಲ್ನಾಡ್ ವರದಿ) ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಬೇಡಿಗನಹಳ್ಳಿ ಗೇಟ್ ಸಮೀಪ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ಶ್ರವಣಬೆಳಗೊಳ ಹೋಬಳಿಯ ದಡಿಘಟ್ಟ ಗ್ರಾಮದ ನಿವಾಸಿ ಜಗದೀಶ್ (56) ಎಂದು ಗುರುತಿಸಲಾಗಿದೆ.
ಜಗದೀಶ್ ಅವರು ಚನ್ನರಾಯಪಟ್ಟಣದ ಕಡೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ, ಹಿಂಬದಿಯಿಂದ ಬಂದ ಕಾರು ಡಿಕ್ಕಿ ಹೊಡೆದಿದೆ .
ಅಪಘಾತದ ಪರಿಣಾಮ ಜಗದೀಶ್ ಅವರು ರಸ್ತೆಗೆ ಬಿದ್ದು ತಲೆ, ಬಲಗಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಗಂಭೀರ ಗಾಯಗಳಾಗಿ ಮೃತಪಟ್ಟಿದ್ದಾರೆ.

ಈ ಸಂಬಂಧ ಮೃತರ ಪುತ್ರ ಅಭಿನಾಶ್ ಅವರು ನೀಡಿದ ದೂರಿನ ಮೇರೆಗೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















