Shri Dharmasthala Manjunatheshwara Industrial Training Institute ಸಂಸ್ಥೆ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ನಂತರ ಮುಂದಿನ ಶಿಕ್ಷಣ ಹಾಗೂ ಉದ್ಯೋಗದ ಬಗ್ಗೆ ಚಿಂತಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಆರ್ಥಿಕವಾಗಿ ಹಿಂದುಳಿದ ಪೋಷಕರಿಗೆ ಆಶಾಕಿರಣವಾಗಿ ಮೂಡಿಬಂದಿದೆ. ಮೂರು ದಶಕಗಳಿಗೂ ಹೆಚ್ಚು ಕಾಲ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಈ ಸಂಸ್ಥೆಯಲ್ಲಿ 2026-27ನೇ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದೆ.
ಸಂಸ್ಥೆಯು ಕೇವಲ ಶಿಕ್ಷಣಕ್ಕೆ ಸೀಮಿತವಾಗದೇ, ವಿದ್ಯಾರ್ಥಿಗಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿಕೊಡುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳ ಆರ್ಥಿಕ ನೆರವಿಗಾಗಿ ಪ್ರಸಕ್ತ ಸಾಲಿನಲ್ಲಿ 60 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ₹1,000 ರಂತೆ ಎರಡು ವರ್ಷಗಳ ಅವಧಿಗೆ ಒಟ್ಟು ₹20,000 ವಿದ್ಯಾರ್ಥಿವೇತನ ನೀಡಲಾಗುತ್ತಿದೆ.

ಇದಲ್ಲದೆ, ಸಂಸ್ಥೆಯಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ಈಗಾಗಲೇ ವಾರ್ಷಿಕ ₹2.40 ಲಕ್ಷಕ್ಕೂ ಅಧಿಕ ವೇತನದೊಂದಿಗೆ ವಿವಿಧ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆದಿದ್ದು, ಜುಲೈ ಪರೀಕ್ಷೆಯ ನಂತರ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ವೋಲ್ವೋ, ಮಾರುತಿ ಸುಜುಕಿ, ಟಾಟಾ, ಇಸ್ರೋ, ರೈಲ್ವೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಈ ಸಂಸ್ಥೆಯ ಹಳೆ ವಿದ್ಯಾರ್ಥಿಗಳು ಸೇವೆ ಸಲ್ಲಿಸುತ್ತಿರುವುದು ಸಂಸ್ಥೆಯ ಶೇ.100 ಉದ್ಯೋಗಾವಕಾಶಕ್ಕೆ ಸಾಕ್ಷಿಯಾಗಿದೆ.

ಸಂಸ್ಥೆಯಲ್ಲಿ ಇಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವಾಹನ, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಮೆಕ್ಯಾನಿಕ್ ಡೀಸೆಲ್ ಹಾಗೂ ವೆಲ್ಡರ್ (MIG & TIG) ಸೇರಿದಂತೆ ವಿವಿಧ ತಾಂತ್ರಿಕ ಕೋರ್ಸ್‌ಗಳು ಲಭ್ಯವಿವೆ.
ಅನುಭವಸ್ಥ ಬೋಧಕ ವರ್ಗ, ಸುಸಜ್ಜಿತ ಪ್ರಾಯೋಗಿಕ ಕಾರ್ಯಗಾರ, ಬಾಲಕರಿಗೆ ವಸತಿ ನಿಲಯ ಮತ್ತು ಮೆಸ್ ವ್ಯವಸ್ಥೆ, ಕಂಪ್ಯೂಟರ್ ಶಿಕ್ಷಣ, ವಾಹನ ಚಾಲನಾ ತರಬೇತಿ, ಮಲ್ಟಿಸ್ಕಿಲ್ ತರಬೇತಿ ಹಾಗೂ ಕೈಗಾರಿಕಾ ಭೇಟಿ ಕಾರ್ಯಕ್ರಮಗಳು ಸಂಸ್ಥೆಯ ವಿಶೇಷತೆಗಳಾಗಿವೆ. ಪ್ರತಿ ತಿಂಗಳು ಪರೀಕ್ಷೆ ನಡೆಸಿ ಎಸ್‌ಎಂಎಸ್ ಮೂಲಕ ಪೋಷಕರಿಗೆ ವಿದ್ಯಾರ್ಥಿಗಳ ಪ್ರಗತಿ ವರದಿ ಕಳುಹಿಸುವ ವ್ಯವಸ್ಥೆಯೂ ಇದೆ.
ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿರುವ ಈ ಸಂಸ್ಥೆ, ಎಸ್‌ಎಸ್‌ಎಲ್‌ಸಿ ಪಾಸಾದ ಅಥವಾ ಪಿಯುಸಿಯಲ್ಲಿ ಕಡಿಮೆ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ಕೌಶಲ ಕಲಿಸಿ ಸ್ವಾವಲಂಬಿ ಬದುಕಿನ ದಾರಿ ತೋರಿಸುತ್ತಿದೆ. ಸೀಮಿತ ಸೀಟುಗಳ ಅವಕಾಶವಿರುವುದರಿಂದ ಆಸಕ್ತ ವಿದ್ಯಾರ್ಥಿಗಳು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 94499 27748 | 94802 99119 | 78923 57617 ಈ ನಂಬರ್ ಗೆ ಕರೆ ಮಾಡಿ. (ಸಂಸೆ ಪೋಸ್ಟ್ ಕಳಸ ತಾಲೂಕು ಚಿಕ್ಕಮಗಳೂರು)
















