ಸಂಸೆಯ ಎಸ್‌ಡಿಎಮ್‌ ಐ.ಟಿ.ಐ ಸಂಸ್ಥೆಗೆ AITT ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

ಸಂಸೆ: (ನ್ಯೂಸ್‌ ಮಲ್ನಾಡ್‌ ವರದಿ) ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ (ಎಸ್‌ಡಿಎಮ್‌ ಐ.ಟಿ.ಐ, ಸಂಸೆ) ಇತ್ತೀಚೆಗೆ ಪ್ರಕಟಗೊಂಡ ಅಖಿಲ ಭಾರತ ವೃತ್ತಿ ಪರೀಕ್ಷೆ (AITT) ಯಲ್ಲಿ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಸಂಸ್ಥೆಯ ಈ ಅಭೂತಪೂರ್ವ ಯಶಸ್ಸಿಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸ್ಥಳೀಯ ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿ, ಆಡಳಿತ ಮಂಡಳಿ ಮತ್ತು ಬೋಧಕ ವರ್ಗಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣ, ಶಿಸ್ತು ಮತ್ತು ಉದ್ಯೋಗಮುಖಿ ತರಬೇತಿ ನೀಡುತ್ತಿರುವ ಎಸ್‌ಡಿಎಮ್‌ ಐ.ಟಿ.ಐ ಸಂಸೆ, ಈ ಬಾರಿಯೂ ತನ್ನ ಸಾಧನೆಯ ಪರಂಪರೆಯನ್ನು ಮುಂದುವರಿಸಿದೆ. ಸಂಸ್ಥೆಯ ಈ ಸಾಧನೆ ಇಡೀ ಭಾಗಕ್ಕೆ ಹೆಮ್ಮೆಯ ವಿಷಯವಾಗಿದೆ ಎಂದು ಸ್ಥಳೀಯ ಪ್ರಮುಖರು ಅಭಿಪ್ರಾಯಪಟ್ಟಿದ್ದಾರೆ.

ಪ್ರತಿಭಾವಂತ ವಿದ್ಯಾರ್ಥಿಗಳನ್ನು ಉದ್ಯೋಗ ಮಾರುಕಟ್ಟೆಗೆ ಸಿದ್ಧಗೊಳಿಸುವಲ್ಲಿ ಸಂಸ್ಥೆಯ ಕಾರ್ಯವೈಖರಿ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳ ಯಶಸ್ಸಿಗೆ ಕಾರ್ಯದರ್ಶಿಗಳು, ಪ್ರಾಂಶುಪಾಲರು, ತರಬೇತಿ ಅಧಿಕಾರಿಗಳು ಹಾಗೂ ಸಮಸ್ತ ಸಿಬ್ಬಂದಿ ವರ್ಗದವರ ನಿರಂತರ ಶ್ರಮ ಮತ್ತು ಪ್ರೀತಿಪೂರ್ವಕ ಮಾರ್ಗದರ್ಶನವೇ ಕಾರಣವಾಗಿದೆ ಎಂದು ಪೋಷಕರು ತಿಳಿಸಿದ್ದಾರೆ.

ಈ ಬಾರಿಯ ಫಲಿತಾಂಶದಲ್ಲಿ ಸಂಸ್ಥೆಯ ಎಲ್ಲಾ ಟ್ರೇಡ್‌ಗಳು ಶೇ.100 ಫಲಿತಾಂಶ ದಾಖಲಿಸಿವೆ. ಎಲೆಕ್ಟ್ರಿಷಿಯನ್ (ಪ್ರಥಮ ಮತ್ತು ದ್ವಿತೀಯ ವರ್ಷ), ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ (ಪ್ರಥಮ ಮತ್ತು ದ್ವಿತೀಯ ವರ್ಷ), ಫಿಟ್ಟರ್ (ಪ್ರಥಮ ಮತ್ತು ದ್ವಿತೀಯ ವರ್ಷ), ಮೆಕ್ಯಾನಿಕ್ ಮೋಟರ್ ವೆಹಿಕಲ್ (ಪ್ರಥಮ ಮತ್ತು ದ್ವಿತೀಯ ವರ್ಷ), ಮೆಕ್ಯಾನಿಕ್ ಡೀಸೆಲ್ ಹಾಗೂ ವೆಲ್ಡರ್ ವಿಭಾಗಗಳು ಪೂರ್ಣ ಪ್ರಮಾಣದ ಯಶಸ್ಸು ಸಾಧಿಸಿವೆ.

ಸಾಧನೆಗೈದ ಎಲ್ಲಾ ವಿದ್ಯಾರ್ಥಿಗಳಿಗೆ ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದು, ಎಸ್‌ಡಿಎಮ್‌ ಐ.ಟಿ.ಐ ಸಂಸೆ ಸಂಸ್ಥೆ ಮುಂದಿನ ದಿನಗಳಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.