ಆಲ್ದೂರು: ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗೆ SDPI ಸಿದ್ದತೆ

ಆಲ್ದೂರು: (ನ್ಯೂಸ್ ಮಲ್ನಾಡ್ ವರದಿ) ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದಿಂದ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷರಾದ ಮುಸ್ತಫ ಆಲ್ದೂರು ರವರು ತಿಳಿಸಿದರು.


ಇದನ್ನೂ ಓದಿ: ಪ್ರತಿ ತಿಂಗಳು 1,000 ಸ್ಕಾಲರ್ಶಿಪ್; 9th – 2PUC ವರೆಗೆ ಅರ್ಜಿ ಸಲ್ಲಿಸಿ


ಆಲ್ದೂರಿನ ಪಕ್ಷದ ಕಚೇರಿಯಲ್ಲಿ ನಡೆದ ಆಲ್ದೂರು ಗ್ರಾಮ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷವೂ ಜಿಲ್ಲಾದ್ಯಾಂತ ಸಾಮಾಜಿಕ ಚಟುವಟಿಕೆಗಳನ್ನು ನಡೆಸುತ್ತಿದೆ. ಜನಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಾ ಜನರ ವಿಶ್ವಾಸವನ್ನು ಗಳಿಸುತ್ತಿದೆ. ಈಗಾಗಲೇ ಹೋರಾಟ ರಂಗದಲ್ಲಿ ಗುರುತಿಸುತ್ತಿರುವ ನಮ್ಮ ಸದಸ್ಯರು ಸಕ್ರಿಯ ರಾಜಕಾರದಲ್ಲಿ ತೊಡಗಿಕೊಳ್ಳಬೇಕಾದರೆ ಪ್ರತಿ ಚುನಾವಣೆಯಲ್ಲೂ ಸ್ಪರ್ಧಿಸಬೇಕೆಂದು ಕರೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ ಮೂಡಿಗೆರೆ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಶರೀಫ್ ಮಾತಾನಾಡಿ, ಈಗಾಗಲೇ ಆಲ್ದೂರು ಗ್ರಾಮ ಪಂಚಾಯತಿಯಲ್ಲಿ ಪಕ್ಷದ ಬೆಂಬಲದಿಂದ ಗೆದ್ದಿರುವ ಆರೀಫ್ ಹುಸೇನ್ ರವರು ತಮ್ಮ ಅಲ್ಪಾವಧಿಯಲ್ಲಿ ಜನರ ಮನಸ್ಸನ್ನು ಗೆಲ್ಲುವಂಥಹ ಅಭಿವೃದ್ದಿ ಕಾರ್ಯ ಮಾಡುತ್ತಿದ್ದಾರೆ. ಮುಂಬರುವ ನಮ್ಮ ಚುನಾವಣೆಗಳಲ್ಲಿ ಅವರ ಅಭಿವೃದ್ಧಿ ಕಾರ್ಯಗಳ ವಿವರಗಳನ್ನು ಆಲ್ದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪ್ರತಿ ಮನೆ ಮನೆಗೂ ಮುಟ್ಟಿಸುವ ಮೂಲಕ ಪಕ್ಷವನ್ನು ಪರಿಚಯಿಸಬೇಕು ಎಂದು ತಿಳಿಸಿದರು.


ಇದನ್ನೂ ಓದಿ: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್; ಸರ್ಕಾರದಿಂದ ಮಹತ್ವದ ಘೋಷಣೆ!


ಆಲ್ದೂರು ಗ್ರಾಮ ಸಮಿತಿ ಅಧ್ಯಕ್ಷ ಸಮಿಉಲ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ SDPI ಮೂಡಿಗೆರೆ ವಿಧಾನಸಭಾ ಸಹ ಕಾರ್ಯದರ್ಶಿ ಮನ್ಸೂರ್, ಗ್ರಾಮ ಸಮಿತಿ ಕಾರ್ಯದರ್ಶಿ ರಿಯಾಜ್, ಆಲ್ದೂರು ಗ್ರಾಮ ಪಂಚಾಯತ್ ಸದಸ್ಯ ಆರಿಫ್ ಹುಸೇನ್, ಗ್ರಾಮ ಸಮಿತಿ ಸದಸ್ಯರು ಮತ್ತು ಬ್ರಾಂಚ್ ಪದಾಧಿಕಾರಿಗಳು ಹಾಗೂ ಯುವ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.


ಇದನ್ನೂ ಓದಿ: ಈ ಜಿಲ್ಲೆಯ ಅಂಗನವಾಡಿ ಹುದ್ದೆಗೆ ಅರ್ಜಿ ಸಲ್ಲಿಸಿದ್ದೀರಾ?; ಹಾಗಾದರೆ ತಾತ್ಕಾಲಿಕ ಆಯ್ಕೆ ಪಟ್ಟಿ ಇಲ್ಲಿದೆ ನೋಡಿ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.