
ಬಾಳೆಹೊನ್ನೂರು: (ನ್ಯೂಸ್ ಮಲ್ನಾಡ್ ವರದಿ) ವೈನ್ಸ್ ಶಾಫ್ ಸೇರಿದಂತೆ ಒಟ್ಟು ನಾಲ್ಕು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿರುವ ಘಟನೆ ಬಾಳೆಹೊನ್ನೂರು ಪಟ್ಟಣದಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಪವನ್ ಪ್ರಾವಿಷನ್ ಸ್ಟೋರ್, ಎನ್.ಆರ್.ಪುರ ರಸ್ತೆಯ ಕಲ್ಮಕ್ಕಿ ವೈನ್ಸ್, ಪ್ರಭು ಪ್ರಾವಿಷನ್ ಸ್ಟೋರ್ ಹಾಗೂ ಬಾಳೆಹೊನ್ನೂರು ಕಾಫಿ ಲಿಂಕ್ಸ್ ಎಂಬ 4 ಅಂಗಡಿಗಳಲ್ಲಿ ಬೀಗ ಒಡೆಯದೆ ಬಾಗಿಲನ್ನು ಆಯುಧದಿಂದ ಮೀಟಿ ಒಳ್ಳ ನುಗ್ಗಿ ನಗದು ಸೇರಿದಂತೆ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ಜೊತೆಗೆ ಅಂಗಡಿಗಳಲ್ಲಿದ್ದ ಸಿಸಿಟಿವಿ ಡಿವಿಆರ್ ಗಳನ್ನು ಸಹ ಕಳ್ಳರು ಹೊತ್ತೊಯ್ದಿದ್ದಾರೆ.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
ಸ್ಥಳಕ್ಕೆ ಕೊಪ್ಪ ಡಿವೈಎಸ್ಪಿ ಬಾಲಾಜಿ ಸಿಂಗ್, ಎನ್.ಆರ್.ಪುರ ಸಿಪಿಐ ಗುರು ಕಾಮತ್, ಪಿಎಸ್‌ಐ ರವೀಶ್ ಭೇಟಿ ನೀಡಿ ಪರಿಶೀಲಿಸಿದ್ದು, ಘಟನಾ ಸ್ಥಳಕ್ಕೆ ಚಿಕ್ಕಮಗಳೂರಿನಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಕಲೆ ಹಾಕಿದ್ದಾರೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ













