ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಗೆ 20 ವರ್ಷ ಸಜೆ ಮತ್ತು 50,000 ದಂಡ ವಿಧಿಸಲಾಗಿದೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಮೂಡಿಗೆರೆ ತಾಲೂಕು ಕುಂದೂರು ಗ್ರಾಮದ ಭಟ್ರುಗದ್ದೆ ವಾಸಿ ಯೋಗೇಂದ್ರ (23) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಹಿನ್ನೆಲೆಯಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್.ಟಿ.ಎಸ್.ಸಿ.-1, ಆರೋಪಿಗೆ 20 ವರ್ಷ ಸಜೆ ಮತ್ತು ರೂ. 50,000/- ದಂಡ ವಿಧಿಸಿದೆ. ಕರ್ನಾಟಕ ಸಂತ್ರಸ್ತ ಪರಿಹಾರ ಯೋಜನೆ-2011 ರ ಅಡಿಯಲ್ಲಿ ನೊಂದ ಬಾಲಕಿಗೆ ರೂ. 1,00,000/- ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ
ಮೂಡಿಗೆರೆ ವೃತ್ತದ ಅಂದಿನ ಸಿಪಿಐ ಸೋಮೇಗೌಡ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಭರತ್ ಕುಮಾರ್ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದು, ಎ.ಎಸ್.ಐ. ಯತೀಶ್ ಎಸ್ ನ್ಯಾಯಾಲಯದ ಕರ್ತವ್ಯ ಮತ್ತು ಸಿ.ಪಿ.ಸಿ. ಮನು ಕೆ. ಎಸ್. ತನಿಖಾ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು.












