ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಕಾಂಚಿನಗರದ ನಿವಾಸಿ ಯುವಕ ಸಚಿನ್ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಶಿಶು ಅಭಿವೃದ್ಧಿ ಯೋಜನಾಧಿಕಾರಿಯ ದೂರಿನ ಅನ್ವಯ, ಬಾಲಕಿಯ ಹೇಳಿಕೆ ಆಧರಿಸಿ ಸಚಿನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: 36,000 ಸ್ಕಾಲರ್ ಶಿಪ್ ನೇರ ವಿದ್ಯಾರ್ಥಿಗಳ ಖಾತೆಗೆ; ಜಸ್ಟ್ ಈ ರೀತಿ ಅರ್ಜಿ ಸಲ್ಲಿಸಿ

ಘಟನೆಯ ವಿವರ:
ಎಸ್ಎಸ್ಎಲ್ಸಿ ಬಾಲಕಿಯು ಪರೀಕ್ಷೆಯಲ್ಲಿ ಅನುತೀರ್ಣಳಾಗಿದ್ದು, ಮನೆಯಲ್ಲೇ ಇದ್ದುದರಿಂದ ಆಕೆಯನ್ನು ಮತ್ತೆ ಶಾಲೆಗೆ ತೆರಳುವಂತೆ ಪ್ರೇರೇಪಿಸಲು ಶಿಶು ಅಭಿವೃದ್ಧಿ ಯೋಜನೆಯ ಮೇಲ್ವಿಚಾರಕರ ತಂಡ ಬಾಲಕಿಯ ಮನೆಗೆ ತೆರಳಿತ್ತು. ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕರ ಜೊತೆ ಬಾಲಕಿ ಸರಿಯಾಗಿ ಪ್ರತಿಕ್ರಿಯಿಸದೆ ಇದ್ದುದರಿಂದ ಬಾಲಕಿ ಮತ್ತು ಅವಳ ತಾಯಿಯನ್ನು ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆಪ್ತ ಸಮಾಲೋಚನೆ ಮಾಡಿದಾಗ ಆಕೆ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಬಾಲಕಿಯ ಆರೋಗ್ಯ ತಪಾಸಣೆ ನಡೆಸಿದಾಗ ಆಕೆ 2 ತಿಂಗಳ ಗರ್ಭಿಣಿಯಾಗಿರುವುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಶಾಕ್; ಇನ್ಮುಂದೆ ಈ ದಿನದಂದು ಬರೋಲ್ಲ ಹಣ…!












