ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) ಅಪ್ರಾಪ್ತೆ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಈ ಕಾರ್ಡ್ ಇದ್ರೆ ಸರ್ಕಾರದಿಂದ ಸಿಗಲಿವೆ ಈ ಸೌಲಭ್ಯಗಳು

ಎನ್. ಆರ್. ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನೆಕೊಪ್ಪ ನಿವಾಸಿ ಶಶಾಂಕ್ ತನ್ನ ಸಂಬಂಧಿಕರ ಮಗಳನ್ನೇ ಈ ಕೃತ್ಯಕ್ಕೆ ಬಳಸಿಕೊಂಡಿದ್ದು ಬೆಳಕಿಗೆ ಬಂದಿದೆ.
ಅಪ್ರಾಪ್ತೆ ಈಗ ಏಳು ತಿಂಗಳ ಗರ್ಭಿಣಿಯಾಗಿದ್ದು ಕಾಲೇಜ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ವಿಷಯ ಹೊರಬಾರಬಾರದಂತೆ ಆರೋಪಿ ಬಹಳಷ್ಟು ಪ್ರಯತ್ನಪಟ್ಟಿದ್ದು ಕೊನೆಗೂ ಕೃತ್ಯ ಬಹಿರಂಗವಾಗಿದೆ.
ಇದನ್ನೂ ಓದಿ: ಲೇಬರ್ ಕಾರ್ಡ್ಗೆ ರೂ.60,000 ಸಹಾಯಧನ: ಸರ್ಕಾರದ ವಿಶೇಷ ಯೋಜನೆ
ಪೋಷಕರು ನೀಡಿದ ದೂರು ಆಧರಿಸಿ ಮೂರು ದಿನದ ಹಿಂದೆಯೇ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿ ಹೆಸರು ಉಲ್ಲೇಖಿಸದ ಕಾರಣ (ಹೆಸರು ಹೇಳದಂತೆ ಒತ್ತಡ ಹೇರಲಾಗಿತ್ತು ಎಂದು ತಿಳಿದು ಬಂದಿದೆ) ಬಂಧಿಸಲು ಸಾಧ್ಯವಾಗಲಿಲ್ಲ ಎನ್ನಲಾಗಿದೆ.
ಆರೋಪಿ ಹೆಸರನ್ನು ಸಂತ್ರಸ್ತೆ ತಿಳಿಸಿದ ಹಿನ್ನೆಲೆಯಲ್ಲಿ ಇದೀಗ ಪೋಕ್ಸೋ ಪ್ರಕರಣ ದಾಖಲಿಸಿ ಶಶಾಂಕ್ ನನ್ನು ಬಂಧಿಸಿ, ನ್ಯಾಯಾಂಗ ವಂಶಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30,000 ಹುದ್ದೆಗಳಿಗೆ ಅರ್ಜಿ ಆಹ್ವಾನ; 18,000 ದಿಂದ 22,000 ಸಂಬಳ, 10th ವಿದ್ಯಾರ್ಹತೆ












