ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಆನ್ ಲೈನ್ ಟ್ರೇಡಿಂಗ್ ನಲ್ಲಿ ಅತಿ ಹೆಚ್ಚು ಲಾಭ ಮಾಡಿಕೊಡುವುದಾಗಿ ನಂಬಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ 32.45 ಲಕ್ಷ ರೂ. ವಂಚಿಸಿದ್ದು, ಈ ಕುರಿತು ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ; ಮಹಿಳಾ ದಿನಾಚರಣೆ ದಿನ ಪ್ರಧಾನಿ ಮೋದಿ ಭರ್ಜರಿ ಗಿಫ್ಟ್; LPG ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ಏನಿದು ಘಟನೆ:
ಶಿವಮೊಗ್ಗದ ವ್ಯಕ್ತಿಯೊಬ್ಬರು ಇನ್ ಸ್ಟಾಗ್ರಾಂನಲ್ಲಿ ಟ್ರೇಡಿಂಗ್ ನ ಲಿಂಕ್ ವೊಂದನ್ನು ಕ್ಲಿಕ್ ಮಾಡಿದಾಗ ವಾಟ್ಸಾಪ್ ಗ್ರೂಪ್ ಒಂದಕ್ಕೆ ಸೇರಿದ್ದರು. ನಿಮಿಷ ಗುಪ್ತಾ ಎಂಬ ಹೆಸರಿನಲ್ಲಿ ಚಾಟಿಂಗ್ ಮಾಡಿದ್ದು, ಮೊಬೈಲ್ ನಲ್ಲಿ ಒಂದು ಆ್ಯಪ್ ಡೌನ್ ಲೋಡ್ ಮಾಡುವಂತೆ ಸೂಚಿಸಲಾಗಿದೆ. ನಂತರ ಆ ಆ್ಯಪ್ ಗೆ ಹಣ ಹೂಡಿಕೆ ಮಾಡಬೇಕು, ಹೆಚ್ಚು ಲಾಭಾಂಶ ಬರಲಿದ್ದು, ಶೇ.20 ರಷ್ಟು ಕಮಿಷನ್ ನೀಡಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಅದರಂತೆ ವ್ಯಕ್ತಿ ಹೂಡಿಕೆ ಮಾಡಿದ್ದರು. ಕೊನೆಗೆ ವಂಚನೆಗೊಳಗಾಗಿದ್ದು ತಿಳಿದಿದೆ.
ಇದನ್ನೂ ಓದಿ; RDPR ಇಲಾಖೆಯಿಂದ ಉದ್ಯೋಗ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೇಮಕಾತಿ; ಓಂಬುಡ್ಸ್ ಪರ್ಸನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಈ ಕುರಿತು ಶಿವಮೊಗ್ಗದ ಸಿಇಎನ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೂಡಿಗೆರೆ: KSRTC ಬಸ್ ನಲ್ಲಿ ಬ್ರೇಕ್ ಫೇಲ್ : ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಕೆ.ಎಸ್.ಆರ್.ಟಿ.ಸಿ ಬಸ್ ನಲ್ಲಿ ಬ್ರೆಕ್ ಫೈಲ್ ಆಗಿ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಇದನ್ನೂ ಓದಿ; ಮಹಿಳೆಯರಿಗೆ 15,000 ಸಿಗುವ ಮತ್ತೊಂದು ಬಂಪರ್ ಯೋಜನೆ!; ಇಲ್ಲಿದೆ ಮಾಹಿತಿ
ಇದನ್ನೂ ಓದಿ; ಕೊನೆಗೂ ಅಂತ್ಯ ಕಂಡ ಶೃಂಗೇರಿಯ ಪೋಕ್ಸೋ ಪ್ರಕರಣ; ಬಾಲಕಿಯ ತಾಯಿ ಹಾಗೂ ಮೂವರು ಕಾಮಾಂಧರು ಫಿಕ್ಸ್ : 49 ಆರೋಪಿಗಳಿಗೆ ರಿಲೀಫ್
ಇನ್ನು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಂತೋಷ್ ಅವರ ಸಮಯ ಪ್ರಜ್ಞೆಗೆ ಬಣಕಲ್ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಸಿದ್ದಿಕ್ ಹಾಗೂ ಬಸ್ಸಿನ ಪ್ರಯಾಣಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.












