ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಜೋಗ ಜಲಪಾತದಲ್ಲಿ ವಿವಿಧ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಮೂರು ತಿಂಗಳು ಜಲಪಾತಕ್ಕೆ ಪ್ರವಾಸಿಗರ ಭೇಟಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಮತ್ತು ಜೋಗ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಆದೇಶಿಸಿದ್ದಾರೆ.
ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಮತ್ತು ಪ್ರವಾಸಿಗರಿಗೆ ಮೂಲ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಜನವರಿ 1 ರಿಂದ ಮಾರ್ಚ್ 15ರ ವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಭಂದಿಸಲಾಗಿದೆ.
ಜೋಗ ಜಲಪಾತದಲ್ಲಿ ಸಮಗ್ರ ಅಭಿವೃದ್ಧಿಗೆ 150 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಸದ್ಯ ಕಾಮಗಾರಿ ಬಿರುಸಿನಿಂದ ನಡೆಯುತ್ತಿದೆ. ಅಲ್ಲದೆ, ಕಾಮಗಾರಿ ನಡೆಯುತ್ತಿರುವುದರಿಂದ ಪ್ರವಾಸಿಗರು ದಿನನಿತ್ಯ ಕಿರಿಕಿರಿ ಅನುಭವಿಸತ್ತಿದ್ದು, ಟ್ರಾಫಿಕ್ ಜಾಮ್ ಸೇರಿ ವಿವಿಧ ಸಮಸ್ಯೆಗಳು ಎದುರಿಸುವಂತಾಗಿದೆ. ಹೀಗಾಗಿ ಪ್ರವಾಸಿರಗರಿಗೆ ತೊಂದರೆಯಾಗದಂತೆ ಜ.1 ರಿಂದ ಮಾ.15ರ ವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶ ನಿರ್ಭಂದಿಸಿ ಜಿಲ್ಲಾಧಿಕಾರಿ ಮತ್ತು ಜೋಗ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೇಮಂತ್ (ಪ್ರಭಾರಿ ಜಿಲ್ಲಾಧಿಕಾರಿ) ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ; ಅಂದು ಚಿಕ್ಕಮಗಳೂರು ಎಸಿ, ಇಂದು ಮಠದ ಸ್ವಾಮೀಜಿ!












