ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ಶಿರಾಳಕೊಪ್ಪದಲ್ಲಿ ಸಿಡಿಮದ್ದು ಸ್ಫೋಟಗೊಂಡು ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ. ಶಿರಾಳಕೊಪ್ಪದ ಬಸ್ ಸ್ಟ್ಯಾಂಡ್ ಬಳಿ ಈ ಘಟನೆ ನಡೆದಿದ್ದು, ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ; ಬಾಳೆಹೊನ್ನೂರಿನ ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಕಿಡಿಗೇಡಿಗಳು!; ಭಕ್ತರೆನಿಸಿಕೊಂಡವರೆ ಹೀಗೆ ಮಾಡಿದ್ರಾ? ಏನಿದು ವಿವಾದ?

ಶಿರಾಳಕೊಪ್ಪದಲ್ಲಿ ನಡೆಯುವ ಸಂತೆಗಾಗಿ ಹಾವೇರಿ ಮೂಲದ ಉಮೇಶ್ ಹಾಗೂ ರೂಪ ದಂಪತಿ ಬ್ಯಾಗ್ ವೊಂದರಲ್ಲಿ ಸಿಡಿಮದ್ದು ತಂದಿದ್ದರು. ಅಂಗಡಿ ಬಳಿ ಇಟ್ಟಿದ್ದ ಸಿಡಿಮದ್ದು ಏಕಾಏಕಿ ಸ್ಫೋಟಗೊಂಡಿದೆ. ಈ ವೇಳೆ ಸಮೀಪದಲ್ಲಿದ್ದ ಇಬ್ಬರು ಗಾಯಗೊಂಡಿದ್ದರು.
ಇದನ್ನೂ ಓದಿ; ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ; ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ; ಈ ರೀತಿ ಚೆಕ್ ಮಾಡಿ
ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಿಡಿಮದ್ದು ತಂದಿದ್ದ ದಂಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಘಟನೆ ಕುರಿತು ಎಸ್ಪಿ ಹೇಳಿದ್ದೇನು?:
ಶಿರಾಳಕೊಪ್ಪ ಸಂತೆಗೆ ಆಗಮಿಸಿದ್ದ ಉಮೇಶ್ ಮತ್ತು ರೂಪ ದಂಪತಿ ಬೆಡ್ ಶೀಟ್ ಖರೀದಿಸಿದ್ದರು. ಸಂತೆಯಲ್ಲಿದ್ದ ಅಂಗಡಿಯೊಂದರ ಮಾಲೀಕ ದಂಪತಿಗೆ ಪರಿಚಯವಿದ್ದ. ಈ ಹಿನ್ನೆಲೆ ತಮ್ಮ ಬಳಿ ಇದ್ದ ಬ್ಯಾಗ್ ಅನ್ನು ಅಂಗಡಿಯಲ್ಲಿ ಇಟ್ಟು ಸಂತೆಗೆ ಹೋಗಿದ್ದರು. ಕೆಲವು ಹೊತ್ತಿನ ಬಳಿಕ ಬ್ಯಾಗಿನಲ್ಲಿದ್ದ ವಸ್ತು ಸ್ಪೋಟಗೊಂಡಿದೆ. ಪ್ರಾಥಮಿಕ ತನಿಖೆ ವರದಿ ಪ್ರಕಾರ ಕಾಡು ಹಂದಿಗೆ ಬಳಸಲು ತಂದಿದ್ದ ಸಿಡಿಮದ್ದು ಸ್ಪೋಟಗೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಸ್.ಪಿ. ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.
ನಕ್ಸಲರ ಗುಂಪಿನ ಮೇಲೆ ಆನೆ ದಾಳಿ! | ಚಿಕ್ಕಮಗಳೂರಿನ ಮೂಡಿಗೆರೆಯ ನಕ್ಸಲ್ ಅಂಗಡಿ ಸುರೇಶ್ ಬಂಧನ!
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಮೋಸ್ಟ್ ವಾಂಟೆಡ್ ನಕ್ಸಲ್ ಸುರೇಶ್ ನನ್ನು ಕೇರಳದ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಕಾಡಾನೆ ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನಕ್ಸಲ್ ಸುರೇಶ್ ಗೆ ಕಣ್ಣೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಿಚಾರ ತಿಳಿದು ದಾಳಿ ನಡೆಸಿದ ಪೊಲೀಸರು ಸುರೇಶ್ ನನ್ನು ಬಂಧಿಸಿದ್ದಾರೆ.
ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಅಂಗಡಿ ಗ್ರಾಮದ ಸುರೇಶ್, ಕಳೆದ 10 ವರ್ಷಗಳಿಂದ ನಕ್ಸಲ್ ಆಗಿದ್ದಾನೆ. ಸುರೇಶ್ ಮಾಹಿತಿ ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆಯನ್ನು ಕೂಡ ಪೊಲೀಸ್ ಇಲಾಖೆ ಮಾಡಿತ್ತು. ಸುರೇಶ್ ವಿರುದ್ಧ ಚಿಕ್ಕಮಗಳೂರು ಉಡುಪಿಯ ಶಿವಮೊಗ್ಗ ಜಿಲ್ಲೆಯಲ್ಲಿ ಕೇಸ್ ದಾಖಲಾಗಿದ್ದು, 10 ಕ್ಕೂ ಅಧಿಕ ಪ್ರಕರಣಗಳಲ್ಲಿ ಸುರೇಶ್ ಪೊಲೀಸರಿಗೆ ಬೇಕಾಗಿರುವ ಆರೋಪಿ. ಸದ್ಯ ಕೇರಳ ಪೊಲೀಸರ ವಶದಲ್ಲಿರುವ ಸುರೇಶ್ ನನ್ನು ಚಿಕ್ಕಮಗಳೂರಿಗೆ ಕರೆತರಲಿದ್ದಾರೆ.












