ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮಾರುತಿ ಓಮ್ನಿ ಹಾಗೂ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಂಚಾಲೆ ಗ್ರಾಮದ ಬಳಿ ನಡೆದಿದೆ. ಅಜೇಯ (21) ಮೃತ ದುರ್ದೈವಿ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ

ಅಪಘಾತಕ್ಕೀಡಾದ ಓಮ್ನಿ ಕಾರು ಜೋಗದಿಂದ ಶಿವಮೊಗ್ಗಕ್ಕೆ ಹೊರಟಿದ್ದು, ಇಂಡಿಕಾ ಕಾರು ಆನಂದಪುರದಿಂದ ಸಾಗರ ಕಡೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಂಡಿಕಾ ಕಾರು ಚಾಲಕ ಹಾಗೂ ಮಾರುತಿ ಓಮ್ನಿಯಲ್ಲಿದ್ದ ಯುವಕನಿಗೆ ತೀವ್ರ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಅಪ್ಡೇಟ್ ಮಾಡಲು ಇದೇ ಕೊನೆ ದಿನ..!
ಸ್ಥಳಕ್ಕೆ ಆನಂದಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: 10 ನೇ ತರಗತಿಯಲ್ಲಿ ಪಾಸ್ ಆಗಿದ್ದೀರಾ?; ಹಾಗಿದ್ರೆ ತಿಂಗಳಿಗೆ 3,500 ಸ್ಕಾಲರ್ ಶಿಪ್ ಗೆ ಈಗಲೇ ಅರ್ಜಿ ಸಲ್ಲಿಸಿ
ಎನ್.ಆರ್ ಪುರ: 30ಕ್ಕೂ ಹೆಚ್ಚು ಮಂಗಗಳ ಮಾರಣಹೋಮ
ಎನ್. ಆರ್. ಪುರ: (ನ್ಯೂಸ್ ಮಲ್ನಾಡ್ ವರದಿ) 30 ಮಂಗಗಳನ್ನು ಕೊಂದು ರಸ್ತೆಗೆ ತಂದು ಎಸೆದು ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್. ಆರ್. ಪುರ ತಾಲೂಕಿನ ದ್ಯಾವಣ ಬಳಿ ನಡೆದಿದೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; ನೀವಿನ್ನೂ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ…?; ಹಾಗಿದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ
ಬಾಳೆಹಣ್ಣಿಗೆ ಜ್ಞಾನ ತಪ್ಪುವ ಔಷಧವಿಟ್ಟು, ಜ್ಞಾನ ತಪ್ಪಿದ ಬಳಿಕ ತಲೆಗೆ ಹೊಡೆದು ಕೊಂದಿದ್ದು, 30 ಮಂಗಗಳ ತಲೆಯಲ್ಲೂ ಒಂದೇ ರೀತಿ ಗಾಯವಾಗಿ ರಕ್ತಸುರಿದು ಸಾವನ್ನಪ್ಪಿದೆ ಎನ್ನಲಾಗಿದೆ. 16 ಗಂಡು, 14 ಹೆಣ್ಣು, 4 ಮರಿಗಳ ಮಾರಣ ಹೋಮ ನಡೆದಿದ್ದು, ಸ್ಥಳಕ್ಕೆ ಡಿ.ಎಫ್.ಓ, ಆರ್.ಎಫ್.ಓ, ಪಿ.ಎಸ್.ಐ. ಪಶುಸಂಗೋಪನೆ, ಪಶುವೈದ್ಯ, ಪಂಚಾಯಿತಿ, ಆಶಾಕಾರ್ಯರ್ತೆಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಗಗಳ ಮಾರಣ ಹೋಮಕ್ಕೆ ಪ್ರಾಣಿಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಗಳ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
ಈ ಕುರಿತು ಎನ್.ಆರ್.ಪುರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












