
ಹಾಸನ: (ನ್ಯೂಸ್ ಮಲ್ನಾಡ್ ವರದಿ) ಮಾ. 15 ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…

ಹೌದು, ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರ ಶಿರಾಡಿ ಘಾಟಿಯಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಯನ್ನು ಜೂ. 30 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಕನಿಷ್ಠ ಒಂದು ತಿಂಗಳು ಶಿರಾಡಿ ಘಾಟಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲು ಪ್ರಸ್ತಾವನೆ ಸಲ್ಲಿಸಿದೆ. ಇದಕ್ಕೆ ಸ್ಪಂದಿಸಿ ಹಾಸನ ಜಿಲ್ಲಾಡಳಿತ ಮಾ. 15 ರಿಂದ ಎಪ್ರಿಲ್ ಅಂತ್ಯದವರೆಗೆ ಶಿರಾಡಿಯಲ್ಲಿ ವಾಹನ ಸಂಚಾರ ನಿರ್ಬಂಧಿಸುವ ಸಾಧ್ಯತೆಯಿದೆ.

ಸಂಸದ ಶ್ರೇಯಸ್ ಪಟೇಲ್ ಗುರುವಾರ ಕಾಮಗಾರಿ ಪರಿವೀಕ್ಷಣೆ ನಡೆಸಿದ ವೇಳೆ ಕಾಮಗಾರಿಯನ್ನು ಪೂರ್ಣಗೊಳಿಸಲು ತ್ವರಿತವಾಗಿ ಅಡಚಣೆಯಾಗದಂತೆ ಶಿರಾಡಿ ಘಾಟಿಯಲ್ಲಿ ಕನಿಷ್ಠ ಒಂದು ತಿಂಗಳು ವಾಹನ ಸಂಚಾರವನ್ನು ನಿರ್ಬಂಧಿಸುವಂತೆ ಜಿಲ್ಲಾಡಳಿತವನ್ನು ಕೋರಲಾಗಿದೆ.
ಇದನ್ನೂ ಓದಿ: ತೋಟಗಾರಿಕೆ ಇಲಾಖೆಯಲ್ಲಿ ತರಬೇತಿಗೆ ಅರ್ಜಿ ಸಲ್ಲಿಕೆ ಆರಂಭ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?
ಚತುಷ್ಪಥ ಕಾಂಕ್ರೀಟ್ ರಸ್ತೆ ನಿರ್ಮಿಸುತ್ತಿರುವುದರಿಂದ ಒಂದು ಪಥಕ್ಕೆ ಕಾಂಕ್ರೀಟ್ ಹಾಕಿದಾಗ ಅದರ ಕ್ಯೂರಿಂಗ್‌ಗೆ 25 ದಿನಗಳು ಬೇಕು. ಹಾಗಾಗಿ ಈ ವೇಳೆ ವಾಹನ ಸಂಚಾರ ನಿಷೇಧ ಮಾಡಬೇಕಾಗುತ್ತದೆ ಎಂದು ಸಕಲೇಶಪುರ ಉಪ ವಿಭಾಗಾಧಿಕಾರಿ ಶ್ರುತಿ ಸಂಸದರಿಗೆ ಮನವರಿಕೆ ಮಾಡಿಕೊಟ್ಟರು.
ಶಿರಾಡಿ ಘಾಟಿಯಲ್ಲಿ ವಾಹನಗಳ ಸಂಚಾರಕ್ಕೆ ಬದಲಿ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸಂಚಾರ ನಿಷೇಧಿಸುವ ದಿನಾಂಕ ನಿಗದಿ ಪಡಿಸಲಾಗುವುದು ಎಂದರು.
ಇದನ್ನೂ ಓದಿ: ವಿಶ್ವದ ಮೊದಲ CNG ಸ್ಕೂಟರ್ ಬಿಡುಗಡೆಗೆ ಸಿದ್ದ; ಮೈಲೇಜ್ ಕೇಳಿ ಶಾಕ್ ಆದ ಜನ…













