
ಕೊಟ್ಟಿಗೆಹಾರ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಾಳೂರು ಗ್ರಾಮದಲ್ಲಿರುವ ಒಂದನೇ ತರಗತಿಯಿಂದ ಏಳನೇ ತರಗತಿ ಸರ್ಕಾರಿ ಪ್ರಾಥಮಿಕ ಶಾಲೆ ಈಗ ಶಿಕ್ಷಕರಿಲ್ಲದೆ ಬಾಲಕರ ಭವಿಷ್ಯವನ್ನೇ ಹೀನಾಯಗೊಳಿಸುತ್ತಿದೆ.
ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ

ಶಾಲೆಯ ಏಕೈಕ ಶಿಕ್ಷಕಿ ಆರೋಗ್ಯದ ಸಮಸ್ಯೆಯಿಂದ ದೀರ್ಘ ರಜೆಗೆ ತೆರಳಿದ ಬಳಿಕ ಶಾಲೆಯಲ್ಲಿ ಯಾವುದೇ ಶಿಕ್ಷಕರಿಲ್ಲದೆ ಪಾಠ ನಡೆಯದೇ ಇರುವ ಸ್ಥಿತಿ ಉಂಟಾಗಿದೆ. ಈ ಹಿಂದೆ ಸುಮಾರು 30ಕ್ಕೂ ಹೆಚ್ಚು ಮಕ್ಕಳು ಹಾಜರಿದ್ದ ಶಾಲೆಯಲ್ಲಿ, ಈಗ ಶಿಕ್ಷಕರ ಕೊರತೆಯಿಂದಾಗಿ ಮಕ್ಕಳ ಸಂಖ್ಯೆ 10 ರಷ್ಟಿಗೆ ಕುಸಿದಿದೆ. ಶಿಕ್ಷಣದ ಕೊರತೆಯಿಂದ ಪೋಷಕರು ತಮ್ಮ ಮಕ್ಕಳನ್ನು ಇತರ ಶಾಲೆಗಳಿಗೆ ಕಳಿಸಲು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: ಆಸ್ತಿ ಮಾಲೀಕರಿಗೆ ಸಿಹಿಸುದ್ದಿ; ಜನಸೇವಕ ಮೂಲಕ ಮನೆಯಿಂದಲೇ ಇ-ಖಾತೆ ಪಡೆಯಲು ಅವಕಾಶ!
ಇದೆ ರೀತಿಯಲ್ಲಿ ಮುಂದುವರೆದರೆ ಶಾಲೆ ಮುಚ್ಚುವ ಸ್ಥಿತಿ ಎದುರಾಗಬಹುದು. ನಮ್ಮ ಮಕ್ಕಳಿಗೆ ಈ ಪರಿಸ್ಥಿತಿ ತುಂಬಾ ಅನ್ಯಾಯವಾಗಿದೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮವಿಲ್ಲದೆ ನಿರ್ಲಕ್ಷ್ಯವಾಯಿತು ಎಂದು ಗ್ರಾಮಸ್ಥರು ಹೇಳುತ್ತಿದ್ದಾರೆ.
ಶಾಲೆಯಲ್ಲಿ ಬೋಧಕರ ನಿಯೋಜನೆಯ ಕೊರತೆಯಿಂದ ಇಲ್ಲಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಈ ಸಮಸ್ಯೆಗೆ ಶೀಘ್ರ ಪರಿಹಾರ ದೊರೆಕದಿದ್ದರೆ, ಈ ಸರಕಾರಿ ಶಾಲೆಯ ಮುಚ್ಚಲು ಕಾರಣವಾಗಲಿದೆ ಎಂಬ ಆತಂಕ ಗ್ರಾಮಸ್ಥರಲ್ಲಿ ವ್ಯಕ್ತವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ತುರ್ತಾಗಿ ಗಮನಹರಿಸಿ, ಶಿಕ್ಷಕರ ನಿಯೋಜನೆ ಮಾಡುವಂತೆ ಗ್ರಾಮಸ್ಥರು ಹಾಗೂ ಪೋಷಕರು ಒತ್ತಾಯಿಸುತ್ತಿದ್ದಾರೆ. (ವರದಿ- ತನು ಕೊಟ್ಟಿಗೆಹಾರ)
ಇದನ್ನೂ ಓದಿ: ಎಸ್ಎಸ್ಎಲ್ಸಿ, ಪಿಯುಸಿ ಪಾಸ್ ಆದವರಿಗೆ ಉದ್ಯೋಗವಕಾಶ; 15,000 ಸಂಬಳ













