ಕಸ್ತೂರಿರಂಗನ್ ವರದಿ ಕುರಿತು ಸರ್ವಪಕ್ಷಗಳಿಂದ ಸಿಎಂಗೆ ಮನವಿ ಸಲ್ಲಿಸಲು ಶಾಸಕ ಟಿ.ಡಿ.ರಾಜೇಗೌಡ ಮನವಿ

ಶೃಂಗೇರಿ:(ನ್ಯೂಸ್ ಮಲ್ನಾಡ್ ವರದಿ) ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ ಅವರಿಗೆ ನೇರವಾಗಿ ಮನವಿ ಸಲ್ಲಿಸಲು ವಿವಿಧ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಬಿಜೆಪಿ, ಜೆಡಿಎಸ್, ಕಮ್ಯುನಿಸ್ಟ್ ಪಕ್ಷ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಎನ್‌ಜಿಒಗಳು, ರೋಟರಿ, ಲಯನ್ಸ್ ಕ್ಲಬ್‌ಗಳು, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿ (DSS) ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಮನವಿಗಳನ್ನು ಸಲ್ಲಿಸಬಹುದು.

ಮನವಿ ಸಲ್ಲಿಸಲು ಅನುಕೂಲವಾಗುವಂತೆ ಕಾರ್ಯಕ್ರಮದ ವೇದಿಕೆಯ ಪಕ್ಕದಲ್ಲಿ ಪ್ರತ್ಯೇಕ ಕೌಂಟರ್ ವ್ಯವಸ್ಥೆ ಮಾಡಲಾಗುತ್ತದೆ.

ಕಸ್ತೂರಿರಂಗನ್ ವರದಿ ಕುರಿತು ಮನವಿ ಸಲ್ಲಿಸಲು ಇಚ್ಛಿಸುವ ಎಲ್ಲಾ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಶಾಸಕ ಟಿ.ಡಿ. ರಾಜೇಗೌಡ ಮನವಿ ಮಾಡಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.