ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಜಮೀನು ಹದ್ದು ಬಸ್ತಿಗೆ ಸಂಬಂಧಿಸಿದಂತೆ ಲಂಚಕ್ಕೆ ಬೇಡಿಕೆ ಇಟ್ಟ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ತಾಲೂಕು ಕಛೇರಿಯಲ್ಲಿರುವ ರಮೇಶಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಸರ್ವೇಯರ್.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಸಿಕ್ತಿದ್ದಂತೆ ಅಕೌಂಟ್ ಗೆ ಬಂತು ಹಣ; ನಿಮ್ಮ ಖಾತೆಗೆ ಬಂದಿಲ್ವಾ? ಚೆಕ್ ಮಾಡೋದು ಹೇಗೆ?

ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಸರ್ವೇ ನಂಬರ್ 302 ಮತ್ತು 303 ರಲ್ಲಿ ಒಂದು ಎಕರೆ ಜಮೀನನ್ನು ಹದ್ದು ಬಸ್ತು ಮಾಡಲು ಹೊನ್ನಪ್ಪ ಯು.ಆರ್ ತಾಲೂಕು ಕಚೇರಿ ಸರ್ವೆ ಇಲಾಖೆಯಿಂದ ದೂರವಾಣಿ ಕರೆ ಮಾಡಿದ ವ್ಯಕ್ತಿ ಆರಂಭದಲ್ಲಿ ಕಚೇರಿಯಲ್ಲಿ ಬಂದು ತಮ್ಮನ್ನು ಕಾಣುವಂತೆ ತಿಳಿಸಿದ್ದರು ಎನ್ನಲಾಗಿದೆ. ನಂತರ ಜಮೀನಿಗೆ ಸರ್ವೆಗೆ ಬಂದ ಸಂದರ್ಭದಲ್ಲಿ ಸರ್ವೇಯರ್ ರಮೇಶ್ ಒಂದು ಸಾವಿರ ನಿನಗೆ ಜಾಸ್ತಿ, 1 ಲಕ್ಷ ನನಗೆ ಕಡಿಮೆ, ಎಷ್ಟಾದರು ಕೊಡು ಎಂದು ಹೇಳಿದ್ದಾರೆ. ನಂತರ 1,000 ರೂ.ಗಳಿಗೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.
ಆಗ ಲಂಚ ನೀಡಲು ಇಷ್ಟವಿಲ್ಲದ ಹೊನ್ನಪ್ಪ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು, ಆರೋಪಿ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲಿ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ದಾಳಿಯಲ್ಲಿ ಇನ್ಸ್ಪೆಕ್ಟರ್ ಅನಿಲ್ ರಾಥೋಡ್, ಸಿಬ್ಬಂದಿಗಳಾದ ಅನಿಲ್ ನಾಯಕ್, ಮುಜಬ್, ಲೋಕೇಶ್, ವೇದಾವತಿ ಪ್ರಕಾಶ್ ಪಾಲ್ಗೊಂಡಿದ್ದರು
ಕೊಪ್ಪ: ವೈದ್ಯರ ಆತ್ಮಹತ್ಯೆ ಯತ್ನಕ್ಕೆ ಕಾರಣ ಏನು?
ಕೊಪ್ಪ: (ನ್ಯೂಸ್ ಮಲ್ನಾಡ್ ವರದಿ) ವೈಯಕ್ತಿಕ ಕಾರಣದಿಂದ ನೊಂದಿದ್ದ ಹಾಗೂ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿಯ ನೋಟಿಸ್ನಿಂದ ಬೇಸತ್ತ ಪ್ರಸೂತಿ ವೈದ್ಯರೊಬ್ಬರು ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿ ವರದಿಯಾಗಿದೆ.
ಕೊಪ್ಪ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಪ್ರಸೂತಿ ತಜ್ಞರಾಗಿ ಕರ್ತವ್ಯದಲ್ಲಿದ್ದ ವೈದ್ಯ ಡಾ.ಸಂದೀಪ್ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದಲ್ಲಿರುವ ತನ್ನ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದ ವೈದ್ಯನನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.
ವೈದ್ಯ ಡಾ.ಸಂದೀಪ್ ಮದ್ಯವ್ಯಸನದ ದಾಸನಾಗಿದ್ದು, ಕರ್ತವ್ಯದ ವೇಳೆಯಲ್ಲೂ ಮದ್ಯಪಾನ ಮಾಡಿಕೊಂಡಿರುತ್ತಿದ್ದರು ಎಂದು ಆರೋಪಿಸಲಾಗಿದೆ. ಮದ್ಯಪಾನ ವ್ಯಸನಿಯಾಗಿದ್ದ ಡಾ.ಸಂದೀಪ್ ಪದೇಪದೇ ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಈ ಕಾರಣಕ್ಕೆ ಕೊಪ್ಪ ತಾಲೂಕು ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಗಾನವಿ ಅವರು ಡಾ.ಸಂದೀಪ್ ಅವರಿಗೆ ಹಲವು ಬಾರಿ ನೋಟಿಸ್ ನೀಡಿದ್ದರೆಂದು ತಿಳಿದು ಬಂದಿದೆ.
ಈ ಮಧ್ಯೆ ಡಾ.ಸಂದೀಪ್ ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದು ಬಂದಿದ್ದು, ಇದರಿಂದ ಬೇಸತ್ತ ಅವರು ಮಂಗಳವಾರ ಬೆಳಗ್ಗೆ ಬಾಳೆಹೊನ್ನೂರಿನಲ್ಲಿರುವ ತಮ್ಮ ಮನೆಯಲ್ಲಿ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದು ಬಂದಿದೆ. ಸದ್ಯ ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೈದ್ಯ ಡಾ.ಸಂದೀಪ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.












