ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ ಸೇರಿದಂತೆ 12 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಎದ್ದಿದ್ದು, ಈ ಕುರಿತು ಅಕ್ಟೋಬರ್ 21ರ ಬೆಳಗ್ಗೆ 11 ಗಂಟೆಯಿಂದ ಸಾಗರ ತಾಲೂಕು ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ; ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 2975 ಹುದ್ದೆ, 10th ವಿದ್ಯಾರ್ಹತೆ; ಈಗಲೇ ಅರ್ಜಿ ಸಲ್ಲಿಸಿ

ಶರಾವತಿ, ಚಕ್ರಾ, ವಾರಾಹಿ, ಸಾವೆಹಕ್ಲು, ತುಂಗಾ, ಭದ್ರಾ ಅಣೆಕಟ್ಟೆಗಳಿಗೆ ಭೂಮಿ ತ್ಯಾಗ ಮಾಡಿದ ರೈತರಿಗೆ ಸರ್ಕಾರಗಳು ಸೂಕ್ತ ಪರಿಹಾರ ನೀಡುವಲ್ಲಿ ವಿಫಲವಾಗಿವೆ. ಹೀಗಾಗಿ 12 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ ಸ್ಥಾಪನೆಯ ಕೂಗು ಎದ್ದಿದೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಹೋರಾಟಗಾರರಾದ ದಿನೇಶ್ ಸಿರಿವಾಳ, ರೈತರತ್ತ ಸರ್ಕಾರಗಳಿಗೆ ನಿರ್ಲಕ್ಷ್ಯ ಭಾವವಿದೆ. ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದವರು ಮಲೆನಾಡಿಗರನ್ನು ಬ್ರಿಟೀಷರಿಗಿಂತಲು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ. ಹೀಗಾಗಿ ಮಲೆನಾಡಿಗೆ ಪ್ರತ್ಯೇಕ ರಾಜ್ಯದ ರೂಪುರೇಷೆ ಸಿದ್ಧಪಡಿಸುವ ಅನಿವಾರ್ಯತೆ ಇದೆ ಎಂದರು.
ಇದನ್ನೂ ಓದಿ; ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್ ಆಫರ್; 1170 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ
ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರು ಪಾದಯಾತ್ರೆ ಮಾಡಿ ಎರಡು ವರ್ಷ ತುಂಬಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರಿಗೆ ಸಮಸ್ಯೆಯ ಬಗ್ಗೆ ಅರಿವೇ ಇಲ್ಲ. ಬಿ. ಎಸ್ ಯಡಿಯೂರಪ್ಪ ಅವರು ಸಭೆ ನಡೆಸಿ, ಕೇಂದ್ರದ ಹಂತದಲ್ಲಿ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿದ್ದರು. ಅವರು ತಮ್ಮ ಕರ್ತವ್ಯ ಮರೆತಿದ್ದಾರೆ. ಇದೆಲ್ಲದಕ್ಕೂ ಈ ಹೋರಾಟದಲ್ಲಿ ಉತ್ತರ ಕಂಡುಕೊಳ್ಳಲಿದ್ದೇವೆ ಎಂದರು.
ಇನ್ನು , ಸಮಾಜ ಸೇವಾ ಕಾರ್ಯಕರ್ತ ವಿ. ಜಿ ಶ್ರೀಕಾರ ಮಾತನಾಡಿ, ಮುಳುಗಡೆ ಸಂತ್ರಸ್ತರ ಸಮಸ್ಯೆ ಸಂಬಂಧ ಕಾರ್ಯಪಡೆ (ಟಾಸ್ಕ್ ಫೋರ್ಸ್) ರಚಿಸುವವರಿಗೆ ಹೋರಾಟ ನಿಲ್ಲುವುದಿಲ್ಲ. ಆಶ್ವಾಸನೆಯ ಸುತ್ತೋಲೆ ಹೊರಡಿಸಿದರೆ, ಹೋರಾಟ ಹಿಂಪಡೆಯಲು ಸಾಧ್ಯವಿಲ್ಲ. ಸರ್ಕಾರದಿಂದ ಅಧಿಕೃತ ಆದೇಶವಾಗಬೇಕು ಎಂದರು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?













