ಹಾಸನ: (ನ್ಯೂಸ್ ಮಲ್ನಾಡ್ ವರದಿ) 40 ವರ್ಷವಾದರೂ ಮದುವೆ ಮಾಡಲಿಲ್ಲ ಎಂದು ತಾಯಿಯೊಂದಿಗೆ ಜಗಳವಾಡಿದ ಮಗ ಆಕೆಯನ್ನು ಕಲ್ಲಿನಿಂದ ಹೊಡೆದು ಕೊಂದಿರುವ ಘಟನೆ ಶ್ರವಣಬೆಳಗೊಳದಲ್ಲಿ ಸಂಭವಿಸಿದೆ. ಗಂಗಮ್ಮ (62) ಮೃತ ತಾಯಿ. ಉಮಾಶಂಕರ ಕೊಲೆ ಆರೋಪಿ.
ಇದನ್ನೂ ಓದಿ: ಆಸ್ತಿ ನೋಂದಣಿ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇನ್ಮುಂದೆ ಆಸ್ತಿ ರಿಜಿಸ್ಟ್ರೇಷನ್ ಗೆ ಈ ದಾಖಲೆಗಳು ಕಡ್ಡಾಯ!

ಗಂಗಮ್ಮ ಮಗನಿಗೆ ಹಲವೆಡೆ ವಧುವನ್ನು ನೋಡುತ್ತಿದ್ದರು. ಈತ ಕಳೆದ ವರ್ಷ ಕುಂಭಮೇಳಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ. ಹೀಗಾಗಿ ಆತನಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಈ ವಿಚಾರವಾಗಿ ತಾಯಿಯೊಂದಿಗೆ ಜಗಳವಾಡಿ ಹಲ್ಲೆ ಮಾಡಿದ್ದ. ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಿಲ್ಲ.

ಇದನ್ನೂ ಓದಿ: 6 ರಾಶಿಗೆ ಪ್ರಗತಿಯ ಹಾದಿ ತೆರೆಯಲಿದೆ.. ಭರ್ಜರಿ ಲಕ್!
ಶ್ರವಣಬೆಳಗೊಳ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
















