ಗಣೇಶ ಚತುರ್ಥಿಯಂದು ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ | ಯೆಲ್ಲೋ ಅಲರ್ಟ್​ ಘೋಷಣೆ

ಕರ್ನಾಟಕದ ಐದು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆಪ್ಟೆಂಬರ್ 22 ರವರೆಗೂ ಮಳೆ ಮುಂದುವರೆಯಲಿದೆ.

 

ಇದನ್ನೂ ಓದಿ; HSRP ನಂಬರ್ ಪ್ಲೇಟ್ ಕಡ್ಡಾಯಗೊಳಿಸಿದ ಸಾರಿಗೆ ಇಲಾಖೆ; ಏನಿದು HSRP? ಅಳವಡಿಕೆ ಹೇಗೆ?

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ವಿಜಯನಗರದಲ್ಲಿ ಮಳೆಯಾಗಳಿದೆ.

 

ಕರಾವಳಿಯ ಬಹುತೇಕ ಕಡೆಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇರುತ್ತದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ; ಭಾರತೀಯ ಸ್ಟೇಟ್ ಬ್ಯಾಂಕ್‌ನಲ್ಲಿ ತರಬೇತಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Nipah Virus: ಕೇರಳಿಗರಿಂದ ಕಾಫಿನಾಡಿಗರಲ್ಲಿ ಹೆಚ್ಚಿದ ನಿಫಾ ವೈರಸ್

 Nipah Virus: ಚಿಕ್ಕಮಗಳೂರು:  (ನ್ಯೂಸ್ ಮಲ್ನಾಡ್ ವರದಿ) ಕೇರಳದಲ್ಲಿ ನಿಫಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ, ಮೈಸೂರು, ಚಾಮರಾಜನಗರ ಸೇರಿದಂತೆ ಕಾಫಿನಾಡಿನಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದೆ.

ಏನಿದು ನಿಫಾ ವೈರಸ್:
ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ನಿಫಾ ಒಂದು ಝೂನೋಟಿಕ್ ವೈರಸ್ – ಅಂದರೆ ಇದು ಪ್ರಾಣಿಗಳಿಂದ ಮನುಷ್ಯರಿಗೆ ಹರಡಬಹುದಾದ ವೈರಸ್ ಆಗಿದೆ. ಇದು ತೀವ್ರವಾದ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ ಮತ್ತು ಅನೇಕ ಸಂದರ್ಭಗಳಲ್ಲಿ ಮೆದುಳಿನ ಮೇಲೂ ದಾಳಿ ಮಾಡುತ್ತದೆ. ಇದರಿಂದ ಸಾವುಗಳೂ ಸಂಭವಿಸುತ್ತದೆ.

 

ಹಾಗಾದರೆ ನಿಫಾ ವೈರಸ್ ಹೇಗೆ ಹರಡುತ್ತದೆ:
ಪ್ಟೆರೋಪಸ್ ಎಂಬ ಜಾತಿಯ ಬಾವಲಿಗಳ ಮಲ, ಮೂತ್ರ ಅಥವಾ ಲಾಲಾರಸದಿಂದ ಕಲುಷಿತಗೊಂಡಿರುವ ಹಣ್ಣಿನ ಸೇವನೆಯಿಂದ ನಿಫಾ ವೈರಸ್ ಹರಡುತ್ತದೆ ಎಂದು ಭಾವಿಸಲಾಗಿದೆ. ಬಾವಲಿಗಳು ಸೇವಿಸಿದ ಕೊಳೆತ ಹಣ್ಣುಗಳನ್ನು ಸೇವಿಸುವ ಹಂದಿಗಳಿಂದ ಈ ವೈರಸ್ ಮಾನವರಿಗೂ ಹರಡಬಹುದು. ನಂತರ ನಿಫಾ ವೈರಸ್ ಸೋಂಕಿತ ವ್ಯಕ್ತಿಗಳೊಂದಿಗಿನ ನಿಕಟ ಸಂಪರ್ಕದಿಂದಲೂ ಹರಡುತ್ತದೆ. ಈ ಬಗ್ಗೆ ಇನ್ನೂ ಅಧ್ಯಯನಗಳು ನಡೆಯುತ್ತಲೇ ಇವೆ.

ಕಾಫಿನಾಡಿನಲ್ಲಿ ಈ ವೈರಸ್ ಗೆ ( Nipah Virus:) ಭಯ ಯಾಕೆ?;
ಕೇರಳ ರಾಜ್ಯದ ಪ್ರವಾಸಿಗರು ದಿನ ನಿತ್ಯ ಪ್ರವಾಸಿತಾಣಗಳಿಗೆ ಆಗಮಿಸುತ್ತಿದ್ದಾರೆ. ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಕಚೇರಿ ಸಮೀಪದ ನಗರಸಭೆ ಆವರಣದ ಮರಗಳಲ್ಲಿರುವ ನೂರಾರು ಸಂಖ್ಯೆಯಲ್ಲಿ ಬಾವಲಿಗಳು ವಾಸಿಸುತ್ತಿವೆ. ಹೀಗಾಗಿ ಚಿಕ್ಕಮಗಳೂರು ನಗರದ ಹೃದಯ ಭಾಗದಲ್ಲಿ ನಿಫಾ ವೈರಸ್ ಹರಡುವ ಆತಂಕ ಎದುರಾಗಿದೆ.

ನಿಫಾ ವೈರಸ್ ಗೆ ಕಾಫಿನಾಡಿನಲ್ಲಿ ಮುಜಾಗ್ರತ ಕ್ರಮ ಏನು?
ಕಾಫಿನಾಡಿನಲ್ಲೂ ನಿಫಾ ವೈರಸ್ ಆತಂಕ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತವು ಹೈ ಅಲರ್ಟ್ ಆಗಿದ್ದು, ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ನಿಫಾ ವಾರ್ಡ್ ತೆರೆದಿದೆ. ಒಟ್ಟು ಆರು ಹಾಸಿಗೆಯ ವಾರ್ಡ್ ತೆರೆದು ಸಿದ್ಧತೆ ಮಾಡಿಕೊಂಡಿದೆ. ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯವುಳ್ಳ ಹೈಟೆಕ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಜಿಲ್ಲೆಯಲ್ಲಿ ಈವರೆಗೂ ಒಂದೇ ಒಂದು ನಿಫಾ ಪ್ರಕರಣ ಕೂಡ ದಾಖಲಾಗಿಲ್ಲ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.