ಶೃಂಗೇರಿ: ಪಹಲ್ಗಾಮ್ನಲ್ಲಿ 26 ಭಾರತೀಯರ ಬಲಿ ಪಡೆದು, ಹೆಣ್ಣು ಮಕ್ಕಳ ಸಿಂಧೂರ ಅಳಿಸಿದ್ದ ಉಗ್ರರಿಗೆ ‘ಆಪರೇಷನ್ ಸಿಂಧೂರ’ದ ಮೂಲಕ ತಕ್ಕ ಶಾಸ್ತಿ ಮಾಡಲಾಗಿದೆ.
ಇದನ್ನೂ ಓದಿ: 9ನೇ ತರಗತಿ ವಿದ್ಯಾರ್ಥಿಗಳಿಗೆ ಸಿಗಲಿದೆ 2,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ

ಆಪರೇಷನ್ ಸಿಂಧೂರ ಯಶಸ್ಸಿಗೆ, ಸೈನಿಕರ ಒಳಿತಿಗೆ, ದೇಶದ ಸುರಕ್ಷತೆಗಾಗಿ ಪ್ರಾರ್ಥಿಸಿ, ಅಡ್ಡಗದ್ದೆಯ ಮಂಡಲದವರು ಕೆಲವಳ್ಳಿ ಹರಿಹರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಇದನ್ನೂ ಓದಿ: ಗ್ರಾಮೀಣ ಕೃಷಿಯೇತರ ಆಸ್ತಿಗೆ ಇ-ಸ್ವತ್ತು ಕಡ್ಡಾಯ; ಇಲ್ಲಿದೆ ಸಂಪೂರ್ಣ ಮಾಹಿತಿ
ಪಾಕಿಸ್ತಾನದ ಮೇಲೆ ಭಾರತೀಯ ಸೈನಿಕರು ನಡೆಸುತ್ತಿರುವ ಯುದ್ಧದಲ್ಲಿ ಜಯಗಳಿಸಲಿ. ಭಾರತದ ಹೊರಗಿನ ಮತ್ತು ಒಳಗಿನ ಯಾವ ಕೆಟ್ಟ ಶಕ್ತಿಗಳು ಕೂಡ ಕೇಡುಂಟು ಮಾಡದಿರಲಿ ಎಂದು ಪ್ರಾರ್ಥಿಸಿ ಎಂದು ಅಡ್ಡಗದ್ದೆಯ ಮಂಡಲದವರು ಕೆಲವಳ್ಳಿ ಹರಿಹರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದರು.
ಇದನ್ನೂ ಓದಿ: ಆಧಾರ್ ಕೇಂದ್ರದಲ್ಲಿ ಜಾಬ್ ಆಫರ್; ಆಕರ್ಷಕ ಸಂಬಳ
ಭಾರತೀಯ ಸೇನೆಗೆ 10 ಲಕ್ಷ ರೂ ದೇಣಿಗೆ ನೀಡಿದ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ:
ಪಾಕಿಸ್ತಾನದ ಉಗ್ರರ ಸದ್ದಡಗಿಸಲು ಭಾರತೀಯ ಸೇನೆಗೆ ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದಿಂದ 10 ಲಕ್ಷ ರೂ. ದೇಣಿಗೆ ನೀಡಲಾಗಿದೆ.
ಜಿಲ್ಲೆಯ ಕಳಸ ತಾಲೂಕಿನ ಆದಿಶಕ್ತ್ಯಾತ್ಮಕ ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಕೇಂದ್ರ ಸಚಿವ ಗಜೇಂದ್ರ ಸಿಂಗ್ ಅವರಿಗೆ ಈ ಹಣವನ್ನು ಹಸ್ತಾಂತರ ಮಾಡಲಾಗಿದೆ. ಕ್ಷೇತ್ರದ 5 ನೇ ಧರ್ಮಕರ್ತರ ಕಂಚಿನ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಧರ್ಮಕರ್ತ ಭೀಮೇಶ್ವರ ಜೋಶಿಯವರು ಚೆಕ್ ಹಸ್ತಾಂತರಿಸಿದರು.












