ಬಣಕಲ್: (ನ್ಯೂಸ್ ಮಲ್ನಾಡ್ ವರದಿ) ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಚುನಾವಣೆಗೆ ಮತದಾರರ ಪಟ್ಟಿಗೆ ಅರ್ಹ ಮತದಾರರು ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದ್ದು ಮತದಾರರು ಸದುಪಯೋಗ ಪಡಿಸಿಕೊಂಡು ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಮೂಡಿಗೆರೆ ಉಪ ತಹಸೀಲ್ದಾರ್ ಸಂತೋಷ್ ಕುಮಾರ್ ಹೇಳಿದರು.
ಇದನ್ನೂ ಓದಿ; 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ

ಕೊಟ್ಟಿಗೆಹಾರ, ಬಣಕಲ್ ನಲ್ಲಿ ಮತದಾರರ ವಿಶೇಷ ನೋಂದಣಿ ಅಭಿಯಾನದಲ್ಲಿ ಜನಜಾಗೃತಿ ಮೂಡಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಗೆ ಹೆಸರು ನೋಂದಾವಣೆಗೆ ಆಯಾ ಹೋಬಳಿ ಕೇಂದ್ರದ ನಾಡಾ ಕಚೇರಿ ಹಾಗೂ ತಾಲ್ಲೂಕು ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ ಹೆಸರು ನೋಂದಾಯಿಸಲು ಅವಕಾಶವಿದೆ. ಈಗಾಗಲೇ ಮತದಾರರ ಪಟ್ಟಿ ಸಿದ್ದತೆ ಮಾಡಲಾಗುತ್ತಿದ್ದು ಇನ್ನೂ ಮತದಾರರ ಪಟ್ಟಿಗೆ ಸೇರದವರು ಇದರ ಸದುಪಯೋಗ ಪಡೆದುಕೊಳ್ಳಬೇಕು.
ಇದನ್ನೂ ಓದಿ; ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
ಅರ್ಜಿ ಭರ್ತಿ ಮಾಡಿ ಹೆಸರು ನೋಂದಾವಣಿಗೆ ನವೆಂಬರ್ 6 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ 18 ರಲ್ಲಿ ಪದವೀಧರರು ಹಾಗೂ ನಮೂನೆ 19 ರಲ್ಲಿ ಶಿಕ್ಷಕರು ಅರ್ಜಿಗಳನ್ನು ಭರ್ತಿ ಮಾಡಿ ತಹಸೀಲ್ದಾರ್ ರವರಿಗೆ ಸಲ್ಲಿಸಬೇಕು. ಸರ್ಕಾರಿ ಪದವಿ ಪೂರ್ವ ಶಿಕ್ಷಕರ ಕುರಿತು ದೃಢೀಕರಣವನ್ನು ಆಯಾ ಶೈಕ್ಷಣಿಕ ಸಂಸ್ಥೆ ಮುಖ್ಯಸ್ಥರು, ಖಾಸಗಿ ಪಿಯು ಶಿಕ್ಷಕರ ದೃಢೀಕರಣವನ್ನು ಡಿಡಿಪಿಐ ಹಾಗೂ ಪದವಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಶಿಕ್ಷಕರ ದೃಢೀಕರಣವನ್ನು ಮಾಡಬೇಕು.
ಅರ್ಜಿಯೊಂದಿಗೆ ಪದವೀದರ/ಶಿಕ್ಷಕರ ಚುನಾವಣಾ ಚೀಟಿ (ಎಪಿಕ್ ಕಾರ್ಡ್) ಮತ್ತು ಆಧಾರ್ ಪ್ರತಿಯನ್ನು ಕಡ್ಡಾಯವಾಗಿ ನೀಡಬೇಕು. ಹೆಚ್ಚಿನ ಮಾಹಿತಿಗೆ ತಾಲ್ಲೂಕು ಕಚೇರಿ ಅಥವಾ ನಾಡಾ ಕಚೇರಿಯಲ್ಲಿ ಮಾಹಿತಿ ಪಡೆಯಬಹುದು ಎಂದರು.
ಈ ಸಂದರ್ಭದಲ್ಲಿ ಉಪ ತಹಸೀಲ್ದಾರ್ ಇಂದೂಕುಮಾರ್, ಗ್ರಾಮ ಸಹಾಯಕ ಅಣ್ಣಪ್ಪ, ಸ್ಥಳೀಯರಾದ ಟಿ.ಎ.ಖಾದರ್, ಸಂಜಯ್ ಗೌಡ, ಮೊಯಿದ್ದೀನ್, ಎ.ಎನ್.ನಾಗೇಶ್, ಗಿರೀಶ್, ಸೋಮೇಶ್, ದೇವೇಂದ್ರ ಮತ್ತಿತರರು ಇದ್ದರು. ವರದಿ- ತನು ಕೊಟ್ಟಿಗೆಹಾರ
ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಅಮಾನತು
ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ನಗರಸಭೆ ಅಧ್ಯಕ್ಷ ವರಸಿದ್ದಿ ವೇಣುಗೋಪಾಲ್ ಅವರನ್ನು ಬಿಜೆಪಿ ಪಕ್ಷದಿಂದ ಅಮಾನತು ಮಾಡಿ ಜಿಲ್ಲಾದ್ಯಕ್ಷ ಎಚ್ ಸಿ ಕಲ್ಕುರುಡಪ್ಪ ಆದೇಶ ಹೊರಡಿಸಿದ್ದಾರೆ.
ರಾಜೀನಾಮೆ ವಾಪಸ್ ಪಡೆದಿದ್ದ ವೇಣುಗೋಪಾಲ್:
ಕಳೆದ ನಾಲ್ಕು ತಿಂಗಳಿನಿಂದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರದಲ್ಲಿ ಬಿಜೆಪಿ ನಗರಸಭೆ ಸದಸ್ಯರು ಹಾಗೂ ಅಧ್ಯಕ್ಷರ ನಡುವೆ ಜಟಾಪಟಿ ನಡೆಯುತ್ತಿದ್ದು, ಪಕ್ಷದ ನಾಯಕರ ಸೂಚನೆ ಮೇರೆಗೆ ಎಡರನೇ ಬಾರಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ವರಸಿದ್ದಿ ವೇಣುಗೋಪಾಲ್ ಇತ್ತೀಚೆಗೆ ರಾಜೀನಾಮೆ ವಾಪಸ್ ಪಡೆದು ಯಾರ ಕಣ್ಣಿಗೂ ಬೀಳದೆ ಕಣ್ಮರೆಯಾಗಿದ್ದರು.












