ತನಿಕೋಡು–ಮಾಳ ಗೇಟ್ ರಸ್ತೆ ಅಭಿವೃದ್ಧಿಗೆ ₹14.20 ಕೋಟಿ ಅನುದಾನಕ್ಕೆ ಅನುಮೋದನೆ

ತನಿಕೋಡು–ಮಾಳ ಗೇಟ್ ವಿಭಾಗದ ರಾಷ್ಟ್ರೀಯ ಹೆದ್ದಾರಿ ಎನ್‌ಎಚ್-169 ರಸ್ತೆಯ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಈ ವಿಭಾಗದ ಕಿಮೀ 123.80 ರಿಂದ 153.00ರವರೆಗೆ ವಿಶೇಷ ದುರಸ್ತಿ ಕಾಮಗಾರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ₹14.20 ಕೋಟಿ ಅನುದಾನಕ್ಕೆ ಹಣಕಾಸು ಅನುಮೋದನೆ ನೀಡಿದೆ.

ಈ ಕುರಿತು ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಕಾಮಗಾರಿಯನ್ನು EPC (Engineering, Procurement and Construction) ಮಾದರಿಯಲ್ಲಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ. 2026-27 ಮತ್ತು 2027-28ನೇ ಹಣಕಾಸು ವರ್ಷಗಳಲ್ಲಿ ಹಂತ ಹಂತವಾಗಿ ಕಾಮಗಾರಿ ಪೂರ್ಣಗೊಳ್ಳುವ ಗುರಿ ಹೊಂದಲಾಗಿದೆ.

ತನಿಕೋಡು–ಮಾಳ ಗೇಟ್ ರಸ್ತೆ ಬಹುಕಾಲದಿಂದ ಹದಗೆಟ್ಟ ಸ್ಥಿತಿಯಲ್ಲಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ರಸ್ತೆ ದುರಸ್ತಿ ಮತ್ತು ಅಭಿವೃದ್ಧಿಗೆ ಅನುದಾನ ಒದಗಿಸುವಂತೆ ಸ್ಥಳೀಯರು ಹಲವು ಬಾರಿ ಮನವಿ ಸಲ್ಲಿಸಿದ್ದರು. ಇದೀಗ ಕೇಂದ್ರ ಸರ್ಕಾರದಿಂದ ಅನುದಾನ ಮಂಜೂರಾಗಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಜನರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದಕ್ಕೆ ಸಾರ್ವಜನಿಕರು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ತನಿಕೋಡು–ಮಾಳ ಗೇಟ್ ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ದೊರೆತಿರುವ ಈ ಅನುಮೋದನೆ, ಮಲೆನಾಡು ಭಾಗದ ಸಂಪರ್ಕ ವ್ಯವಸ್ಥೆ ಬಲಪಡಿಸುವ ದಿಸೆಯಲ್ಲಿ ಮಹತ್ವದ ಬೆಳವಣಿಗೆ ಎಂದು ಪರಿಗಣಿಸಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.