ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಬೈಕಿಗೆ ಅಪಘಾತ ಮಾಡಿ ಕಾರು ನಿಲ್ಲಿಸದೇ ಹೋದ ಚಾಲಕನನ್ನು ಪ್ರಶ್ನಿಸಿದ್ದಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮಾನಗಾರಿನಲ್ಲಿ ನಡೆದಿದೆ.
ಇದನ್ನೂ ಓದಿ: ಫಿಶ್ ಪ್ರಿಯರೇ ಎಚ್ಚರ…!; ಈ ಮೀನುಗಳನ್ನು ತಿಂದ್ರೆ ಆರೋಗ್ಯಕ್ಕಿದೆ ಕುತ್ತು!

ಏನಿದು ಘಟನೆ:
ಉಡುಪಿಯಿಂದ ಕೊಪ್ಪಕ್ಕೆ ಖಾಸಗಿ ಕಾರ್ಯಕ್ರಮಕ್ಕೆಂದು ಕಾರಿನಲ್ಲಿ ಬಂದಿದ್ದ ಅನ್ಯಕೋಮಿನ ಉಡುಪಿ ಮೂಲದ ಕುಟುಂಬವು, ಕಾರ್ಯಕ್ರಮ ಮುಗಿಸಿ ಉಡುಪಿಗೆ ವಾಪಸ್ ಹೋಗುವಾಗ ಹರಿಹರಪುರ ಬಳಿ ಕಾರು ಹಾಗೂ ಬೈಕಿನ ನಡುವೆ ಸಣ್ಣ ಅಪಘಾತ ಸಂಭವಿಸಿದೆ.
ಕಾರು ಬೈಕಿಗೆ ಡಿಕ್ಕಿಯಾದರೂ ಚಾಲಕ ಕಾರು ನಿಲ್ಲಿಸದೇ ಹೋಗಿದ್ದು, ಹರಿಹರಪುರ ಯುವಕರು ಶೃಂಗೇರಿಯ ಕೆಲ ಯುವಕರಿಗೆ ಕರೆ ಮೂಲಕ ಮಾಹಿತಿ ತಿಳಿಸಿದ್ದಾರೆ. ನಂತರ ಸ್ಥಳಿಯ ಯುವಕರು ಶೃಂಗೇರಿಯಲ್ಲಿ ಕಾರು ಅಡ್ಡ ಹಾಕಿ ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಪೋಷಕರ ಗಮನಕ್ಕೆ; ವಿವಿಧ ವಸತಿ ಶಾಲೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ!; ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ ನೋಡಿ
ಈ ವೇಳೆ ಶೃಂಗೇರಿ ಯುವಕರು ಕಾರಿನಲ್ಲಿದ್ದ ಉಡುಪಿ ಮೂಲದ ಕುಟುಂಬದವರ ಮೇಲೆ ಅವಾಚ್ಯ ಶಬ್ದ ಬಳಕೆ ಹಾಗೂ ಕೊಲೆ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಶೃಂಗೇರಿ ಯುವಕರ ಮೇಲೂ ಕೂಡ ಹಲ್ಲೆ ಮಾಡಿದ್ದಾರೆ ಎಂದು ಪ್ರತ್ಯಿರೋಪ ಮಾಡಲಾಗಿದೆ. ಈ ಸಂದರ್ಭದಲ್ಲಿ ಪೊಲೀಸರ ಮಧ್ಯ ಪ್ರವೇಶದಿಂದ ಪರಿಸ್ಥಿತಿ ತಿಳಿಗೊಂಡಿದ್ದು, ಹಲ್ಲೆಗೊಳಗಾದ ಉಡುಪಿ ಮೂಲದವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಈ ಪ್ರಕರಣ ಕುರಿತು ಕೊಪ್ಪ ಹಾಗೂ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ದಾಖಲಾಗಿದ್ದು, ಎಸ್ಪಿ ವಿಕ್ರಂ ಅಮಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: PM ಕಿಸಾನ್ ಯೋಜನೆಯ 19 ನೇ ಕಂತಿನ ಹಣ ಬಿಡುಗಡೆ!; ಹಣ ಬಾರದೇ ಇದ್ರೆ ಈ ರೀತಿ ಮಾಡಿ












