ಅವೈಜ್ಞಾನಿಕ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದ ಶೃಂಗೇರಿ ತುಂಬಾ ಧೂಳುಮಯ

ಶೃಂಗೇರಿ – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಸುತ್ತಿದ್ದು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಪಟ್ಟಣದ ಸುತ್ತಮುತ್ತ ಬರೇ ಧೂಳು ತುಂಬಿಕೊಂಡಿದೆ. ವಾಹನ ಸವಾರರಿಗೆ ಹಾಗೂ ಸುತ್ತಮುತ್ತಲಿನ ಮನೆಯವರು ಧೂಳಿನಿಂದ ಬೇಸತ್ತಿದ್ದಾರೆ. ಇದು ಹೀಗೆಯೇ ಮುಂದುವರೆದಲ್ಲಿ ಆರೋಗ್ಯ ಸಮಸ್ಯೆಗಳು ಸಹ ಕಂಡುಬರುವ ಸಾಧ್ಯತೆಯಿದೆ.

 

ಇದನ್ನೂ ಓದಿ; ಗ್ರಾಹಕರೇ ಗಮನಿಸಿ; ಡಿ.31ರೊಳಗೆ ತಪ್ಪದೇ ಈ ಕೆಲಸ ಮಾಡಿ;ಇಲ್ಲಾಂದ್ರೆ ಹೊಸ ವರ್ಷದಿಂದ ಸಬ್ಸಿಡಿ ಆಸೆ ಬಿಡಿ!

ನಿಯಮದ ಪ್ರಕಾರ ಕಾಮಗಾರಿ ಸಂದರ್ಭದಲ್ಲಿ ನೀರನ್ನು ಹಾಕುವ (Sprinkling ) ಮೂಲಕ ಧೂಳನ್ನು ನಿಯಂತ್ರಣ ಮಾಡಬೇಕು, ಆದರೆ ಗುತ್ತಿಗೆ ಪಡೆದ ಕಂಪನಿಯು ಸರಿಯಾಗಿ ನೀರನ್ನು ಸಿಂಪಡಣೆ ಮಾಡದೆ ಅಸಡ್ಡೆ ತೋರುತ್ತಿರುವ ಕಾರಣ ವಿಪರೀತ ವಾಯುಮಾಲಿನ್ಯ ಉಂಟಾಗಿದೆ.

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದ ಹೆಸರಲ್ಲಿ ಜನರಿಗೆ ಉಚಿತವಾಗಿ ರೋಗ ಭಾಗ್ಯವನ್ನು ನೀಡುತ್ತಿದ್ದಾರೆ. ಸುತ್ತಮುತ್ತ ಹತ್ತಾರು ಗ್ರಾಮಗಳಿದ್ದು, ಸಾವಿರಾರು ಜನ ತಿರುಗಾಡುತ್ತಾರೆ. ಕಳೆದ ಒಂದು ತಿಂಗಳಿಂದ ಜನ ಧೂಳಿನಿಂದ ಬೇಸತ್ತಿದ್ದಾರೆ. ಸಂಬಂಧಪಟ್ಟ ಇಲಾಖೆ, ಸ್ಥಳೀಯ ಜನಪ್ರತಿನಿಧಿಗಳು ನಿದ್ದೆಯಲ್ಲಿ ಇದ್ದಂತೆ ಕಾಣುತ್ತಿದೆ. ಕೂಡಲೇ ಈ ಸಮಸ್ಯೆ ಸರಿಪಡಿಸಬೇಕು. ಅಲ್ಲದೆ ಅಧಿಕಾರಿಗಳು ಗುತ್ತಿಗೆ ಕಂಪೆನಿಯ ಮೇಲೂ ಕ್ರಮ ಕೈಗೊಳ್ಳಬೇಕು. – ಆಶ್ವಿನ್ ಗೌಡ, ಸಾಮಾಜಿಕ ಕಾರ್ಯಕರ್ತ

ಇದನ್ನೂ ಓದಿ; ಟಾಟಾ ಎಲೆಕ್ಟ್ರಿಕ್ ಕಾರುಗಳ ಮೇಲೆ ವರ್ಷಾಂತ್ಯದ ಭಾರಿ ಡಿಸ್ಕೌಂಟ್ ಆಫರ್; ಯಾವ ಇವಿಗೆ ಎಷ್ಟಿದೆ ನೋಡಿ

ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಂಬಂಧಪಟ್ಟ ಪ್ರಾಧಿಕಾರ ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

 

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಭಾರೀ ದುರಂತ, ಮಣ್ಣಿನಡಿಯಲ್ಲಿ ಸಿಲುಕಿದ ಕಾರ್ಮಿಕರು

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹಿನ್ನಲೆ ಜೆಸಿಬಿಯಿಂದ ಮಣ್ಣು ತೆಗೆಯುವ ವೇಳೆ ನಾಲ್ವರು ಕಾರ್ಮಿಕರ ಮೇಲೆ ಮಣ್ಣು ಕುಸಿದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ನಡೆದಿದೆ.

 

ನೆಮ್ಮಾರು ಸಮೀಪದ ತನಿಕೋಡು ಚೆಕ್ ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ವೇಳೆ ಈ ಅವಘಡ ನಡೆದಿದೆ. ಜೆಸಿಬಿ ಯಂತ್ರ ಬಳಸಿದಾಗ ರಸ್ತೆಯ ತಡೆಗೋಡೆ ಸಮೀಪ ನಾಲ್ವರು ಕಾರ್ಮಿಕರು ಕೆಲಸ ಮಾಡುವಾಗ ಎಕಾಏಕಿ ಮಣ್ಣು ಕುಸಿದಿದೆ. ತಕ್ಷಣವೇ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಿದ್ದು, ಸ್ವಲ್ವ ಸಮಯದ ವೇಳೆ ಮತ್ತೊಬ್ಬ ಕಾರ್ಮಿಕನ ರಕ್ಷಣೆ ಮಾಡಲಾಗಿದೆ. ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಸತತ ಒಂದು ಗಂಟೆ ಕಾಲ ಮೂರು ಜೆಸಿಬಿ ಮೂಲಕ ಕಾರ್ಯಾಚಾರಣೆ ಮಾಡಲಾಗಿತ್ತು. ಆದರೆ ಒಂದೂವರೆ ಗಂಟೆಗಳ ಕಾಲ ಮಣ್ಣಿನಡಿಯಲ್ಲಿ ಸಿಲುಕಿದ ಕಾರಣ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು  ರಾಜ್ ಕಮಲ್ ಗುತ್ತಿಗೆ ಕಂಪೆನಿಗೆ ಸೇರಿದ ಜೆಸಿಬಿ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ, ಆಂಬುಲೆನ್ಸ್ ಹಾಗೂ ಶೃಂಗೇರಿ ಪೊಲೀಸರು ಭೇಟಿ ನೀಡಿ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.