ಶೃಂಗೇರಿ: ರಸ್ತೆಯಲ್ಲಿ ವಾಹನ ನಿಲ್ಲಿಸಿದ್ದಕ್ಕೆ ಕಿರಿಕ್ | ಪ್ರವಾಸಿಗರ ಮೇಲೆ ಹಲ್ಲೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)ಕಾರು ಪಾರ್ಕಿಂಗ್ ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್ ಪೇದೆಯ ಮೇಲೆ ಹಲ್ಲೆ ಮಾಡಿದ್ದ ಶೃಂಗೇರಿ ಯುವಕನನ್ನು ಬಂಧಿಸಲಾಗಿದೆ. ಶೃಂಗೇರಿ ಪಟ್ಟಣದ ಸ್ಪರ್ಶಿತ್ ಬಂಧಿತ ಆರೋಪಿ.


ಇದನ್ನೂ ಓದಿ: ರೈತರ ಗಮನಕ್ಕೆ; ಈ ಕೆಲಸ ಮಾಡದಿದ್ದರೆ ಖಾತೆಗೆ ಬರಲ್ಲ ಪಿಎಂ ಕಿಸಾನ್ ಯೋಜನೆಯ ಹಣ; ತಕ್ಷಣವೇ ಈ ರೀತಿ ಮಾಡಿ


ಏನಿದು ಘಟನೆ:
ಶೃಂಗೇರಿ ಪ್ರವಾಸಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ಬೆಂಗಳೂರಿನ ರಾಜಗೋಪಾಲನಗರ ಠಾಣೆಯ ಪೇದೆ ರಾಜೇಗೌಡ, ಪತ್ನಿ ಕುಸುಮ ಹಾಗೂ ಅಣ್ಣ-ಅತ್ತಿಗೆ ಉಳಿಯಲು ಲಾಡ್ಜ್ ಕೇಳಲು ಹೋಗಿದ್ದ ವೇಳೆ ಸ್ಕೂಟಿಯಲ್ಲಿ ಬಂದ ಇಬ್ಬರು ಹಾಗೂ ದೇವಾಲಯದ ಮುಂಭಾಗವಿದ್ದ ಮತ್ತಿಬ್ಬರಿಂದ ದೇವಸ್ಥಾನದ ಮುಂಭಾಗ ನಿಲ್ಲಿಸಿದ್ದ ಕಾರ್ ತೆಗೆಯುವಂತೆ ಖ್ಯಾತೆ ತೆಗೆದಿದ್ದಾರೆ. ಅಲ್ಲದೆ ಕಬ್ಬಿಣದ ರಾಡ್ ನಿಂದ ಪೇದೆ ರಾಜೇಗೌಡ ಅವರಿಗೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆ ತಪ್ಪಿಸಲು ಬಂದ ಪೇದೆ ರಾಜೇಗೌಡ ಅಣ್ಣ ಉಮೇಶ್ ಮೇಲೂ ಕೂಡ ಹಲ್ಲೆ ಮಾಡಿ ಎಲ್ಲರನ್ನೂ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ; ಗ್ರಾಮ ಆಡಳಿತ ಅಧಿಕಾರಿ ಸೇರಿ 5 ಇಲಾಖೆಗಳ ಹುದ್ದೆಗೆ ಪರೀಕ್ಷೆ ಪ್ರಕಟ


ಈ ಸಂಬಂಧ ಹಲ್ಲೆ ಮಾಡಿರುವ ನಾಲ್ವರು ಯುವಕ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿತ್ತು. ಇದೀಗ ಹಲ್ಲೆ ಮಾಡಿದ್ದ ಓರ್ವ ಆರೋಪಿ ಸ್ಪರ್ಶಿತ್ ನನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಬಿಪಿಎಲ್‌, ಅಂತ್ಯೋದಯ ಕಾರ್ಡ್ ದಾರರಿಗೆ ಶಾಕ್; ಅನ್ನಭಾಗ್ಯ ನಗದು ವರ್ಗಾವಣೆ ಸ್ಥಗಿತ


ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಹಿಂಬದಿ ಇದ್ದ ಯುವತಿ ನಾಲಿಗೆ ಕಟ್

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಹಾಗೂ ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ ನಡೆದಿದೆ. ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಇದ್ದ ಯುವತಿ ನಾಲಿಗೆ ಕಟ್ ಆಗಿದೆ. ಶಿವರಾಜ್ (26) ಸ್ಥಳದಲ್ಲೇ ಮೃತಪಟ್ಟ ದುರ್ದೈವಿ ಹಾಗೂ ಲಾವಣ್ಯ (20) ನಾಲಿಗೆ ಕಳೆದುಕೊಂಡ ಯುವತಿ.

ಶಿವರಾಜ್ ಹಾಗೂ ಲಾವಣ್ಯ ಅರಸೀಕೆರೆ ತಾಲೂಕಿನ ಬಂದೂರು ಮೂಲದವರಾಗಿದ್ದು, ನಾಲಿಗೆ ಕಳೆದುಕೊಂಡ ಯುವತಿ ಲಾವಣ್ಯ ಚಿಕ್ಕಮಗಳೂರಿನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಳು.

ಘಟನೆ ಕುರಿತು ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.