ಚಿಕ್ಕಮಗಳೂರು: ಶ್ರೀರಾಮಸೇನೆ ಜಿಲ್ಲಾದ್ಯಕ್ಷ ರಂಜಿತ್ ಶೆಟ್ಟಿ ಅರೆಸ್ಟ್​

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ದತ್ತಜಯಂತಿಯ ಕೊನೆಯ ದಿನವಾದ ಇಂದು ಶ್ರೀರಾಮ ಸೇನೆ ಚಿಕ್ಕಮಗಳೂರು ತಾಲೂಕಿನ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆ ಮಾಡುವುದಾಗಿ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ನಾಗೇನಹಳ್ಳಿ ಗ್ರಾಮದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ದರ್ಗಾದ ಸುತ್ತ 200 ಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

 

ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಶ್ರೀರಾಮಸೇನೆ ಜಿಲ್ಲಾದ್ಯಕ್ಷ ಪೊಲೀಸ್ ವಶಕ್ಕೆ:
ಚಿಕ್ಕಮಗಳೂರು ಶ್ರೀರಾಮಸೇನೆ ಜಿಲ್ಲಾದ್ಯಕ್ಷ ರಂಜಿತ್ ಶೆಟ್ಟಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ದರ್ಗಾದಲ್ಲಿ ದತ್ತಜಯಂತಿ ಆಚರಿಸುತ್ತೇವೆ ಎಂದಿದ್ದ ಶ್ರೀರಾಮಸೇನೆ, ಮುಂಜಾಗೃತ ಕ್ರಮವಾಗಿ ಜಿಲ್ಲಾಧ್ಯಕ್ಷನನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ. ನಾಗೇನಹಳ್ಳಿಗೆ ತೆರಳಲು ಸಿದ್ದತೆ ನಡೆಸಿದ್ದನ್ನು ಗಮನಿಸಿದ ಪೊಲೀಸರು ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ವಿಭಾಗದ ಅಧ್ಯಕ್ಷ ರಂಜಿತ್ ಶೆಟ್ಟಿಯನ್ನು ಚಿಕ್ಕಮಗಳೂರು ನಗರದ ಗುರುನಾಥ ಥಿಯೇಟರ್ ಸಮೀಪದ ಅವರ ಮನೆಯಿಂದ ಅವರನ್ನು ಪೊಲೀಸರು ಕರೆದೊಯ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಲ್ಲದೇ ಗದಗ ಜಿಲ್ಲೆಯಿಂದ ನಾಗೇನಹಳ್ಳಿ ದರ್ಗಾಕ್ಕೆ ತೆರಳಲು ಆಗಮಿಸಿ ಶ್ರೀರಾಮಸೇನೆ ನಾಲ್ಕಾರುಷ ಮುಖಂಡರನ್ನು ಸಹಾ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ಬ್ಯಾಂಕ್‌ ಆಫ್‌ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮೋದ್ ಮುತಾಲಿಕ್ ಹಾಗೂ ಗಂಗಾಧರ ಕುಲಕರ್ಣಿಗೂ ನಿರ್ಬಂಧ:
ಚಿಕ್ಕಮಗಳೂರು ಜಿಲ್ಲೆಗೆ ಪ್ರವೇಶಿಸದಂತೆ ಶ್ರೀರಾಮ ಸೇನೆ ಸ್ಥಾಪಕ ಪ್ರಮೋದ್ ಮುತಾಲಿಕ್, ಶ್ರೀರಾಮ ಸೇನೆ ಮುಖಂಡ ಗಂಗಾಧರ್ ಕುಲಕರ್ಣಿ ಅವರಿಗೆ ನಿಷೇಧ ಹೇರಲಾಗಿದೆ.

 

ಚಿಕ್ಕಮಗಳೂರು: ಬಜರಂಗದಳ ಕಾರ್ಯಕರ್ತರಿಂದ ಪೊಲೀಸರ ಮೇಲೆ ಹಲ್ಲೆಗೆ ಯತ್ನ | 7 ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರು: (ನ್ಯೂಸ್ ಮಲ್ನಾಡ್ ವರದಿ) ಶೋಭಾಯಾತ್ರೆ ವೇಳೆ ಬಜರಂಗದಳದ ಕಾರ್ಯಕರ್ತರು ಪೊಲೀಸರ ಮೇಲೆ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದಲ್ಲಿ ನಡೆದಿದೆ.

 

ಇದನ್ನೂ ಓದಿ; ರಾಜ್ಯದ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಸಿ.ಎಂ; 106 ತಾಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆಗೆ ಮರುಚಾಲನೆ

ಆಲ್ದೂರು ಪಟ್ಟಣದಲ್ಲಿ ಶೋಭಾ ಯಾತ್ರೆ ವೇಳೆ ಮಸೀದಿ ಮುಂದೆಯೇ ಪಟಾಕಿ ಹಚ್ಚಿದ ಕಾರ್ಯಕರ್ತರನ್ನು ತಡೆಯಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮಸೀದಿ ಮುಂದೆ ಪಟಾಕಿ ಸಿಡಿಸದಂತೆ ಪೊಲೀಸರ ಸೂಚನೆ ಇದ್ದರೂ, ವಿರೋಧದ ನಡುವೆಯೂ ಪಟಾಕಿ ಸಿಡಿಸಿದ್ದಾರೆ. ಇದನ್ನು ತಡೆಯಲು ಹೋದ ಪೊಲೀಸರಿಗೆ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ; ರೈತರೇ ಗಮನಿಸಿ; ಮೊಬೈಲ್ ಆ್ಯಪ್ ಮೂಲಕ ಬೆಳೆ ಮಾಹಿತಿ ಅಪ್ಲೋಡ್ ಮಾಡಲು ಸೂಚನೆ; ಹೇಗೆ ಅಪ್ ಲೋಡ್ ಮಾಡುವುದು, ಯಾವ ಆ್ಯಪ್ ಮೂಲಕ ಮಾಡುವುದು?

ಏಕಾಏಕಿ ಪಟಾಕಿ ಹಚ್ಚಿದ್ದರಿಂದ ಕೆಲ ಪೊಲೀಸರಿಗೆ ಗಾಯವಾಗಿದೆ. ಹೀಗಾಗಿ ಹಲ್ಲೆಗೆ ಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ತುಡುಕೂರು ಮಂಜು, ಸುನಿಲ್ ಸೇರಿದಂತೆ 7 ಜನರ ಮೇಲೆ FIR ದಾಖಲಿಸಲಾಗಿದೆ.

ಇದನ್ನೂ ಓದಿ; ಬಿಜೆಪಿ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳ ನೇಮಕ; ಮಲೆನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಯವರಿಗಿಲ್ಲ ಸ್ಥಾನಮಾನ

ಇನ್ನು ಈ ಶೋಭಾಯಾತ್ರೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಮಾಜಿ ಶಾಸಕ ಸಿ.ಟಿ ರವಿ ಅವರು ಭಾಗಿಯಾಗಿದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.