
ಶೃಂಗೇರಿ:(ನ್ಯೂಸ್ ಮಲ್ನಾಡ್ ವರದಿ) ಹಿಂದೂ ಸಮಾಜೋತ್ಸವದ ಪೂರ್ವಭಾವಿ ಸಭೆಗಳಲ್ಲಿ ಭಾಗವಹಿಸಿರುವ ಹಿನ್ನಲೆಯಲ್ಲಿ ಬಿ.ಎಸ್.ಪಿ ಜಿಲ್ಲಾ ಸಂಯೋಜಕರಾದ ಕೆ.ಎಂ. ಗೋಪಾಲ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ. ರಾಧಾಕೃಷ್ಣ ಹೇಳಿದರು.
ಶೃಂಗೇರಿ ತಾಲೂಕು ಆಚರಣಾ ಸಮಿತಿ ಸದಸ್ಯರಾಗಿ ಹಿಂದೂ ಸಮಾಜೋತ್ಸವದ ಪೂರ್ವಭಾವಿ ಸಭೆಗಳಲ್ಲಿ ಭಾಗವಹಿಸಿರುವ ಹಿನ್ನಲೆಯಲ್ಲಿ ಅಮಾನತುಗೊಳಿಸಲಾಗಿದೆ.

ಇದನ್ನೂ ಓದಿ: ರೈತರಿಗೆ ಸಿಹಿ ಸುದ್ದಿ ಕೊಟ್ಟ ರಾಜ್ಯ ಸರ್ಕಾರ; ಬೆಂಬಲ ಬೆಲೆ ಯೋಜನೆಯಡಿಯಲ್ಲಿ ವಿವಿಧ ಬೆಳೆಗಳ ಖರೀದಿ ಅವಧಿ ವಿಸ್ತರಣೆ

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಧಾಕೃಷ್ಣ ಜಾತಿವಾದ, ಕೋಮುವಾದವನ್ನು ಬೆಂಬಲಿಸುತ್ತಾ ಬಂದಿರುವ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಯಾವದೋ ಹಿಡನ್ ಅಜೆಂಡಾ ಇಟ್ಟುಕೊಂಡು ಭಾಗಿಯಾಗಿರುವ ಸಾಧ್ಯತೆ ಇದೆ. ಹೀಗಾಗಿ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದರು.
ಹಿಂದೂ ಸಮಾಜೋತ್ಸವದ ಸಭೆಯಲ್ಲಿ ಬಾಗಿಯಾಗಿರುವ ವಿಚಾರ ತಿಳಿದ ಮೇಲೆ ಪಕ್ಷದ ರಾಜ್ಯ ಮುಖಂಡರು ಸ್ಪಷ್ಟಿಕರಣ ಕೇಳಿದ್ದರು. ಆಗ ನನ್ನಿಂದ ತಪ್ಪಾಗಿದೆ ಎಂದು ಸಮಜಾಯಿಷಿ ನೀಡಿದ್ದರು. ಆದರೆ ನಂತರವೂ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸಿದ್ದಾರೆ. ಇಂತಹ ಚಟುವಟಿಕೆ ಬಹುಜನ ಸಮಾಜ ಪಕ್ಷದ ರಾಷ್ಟ್ರೀಯ ಸಿದ್ದಾಂತಕ್ಕೆ ವಿರುದ್ದವಾಗಿದೆ ಎಂದರು.
ಪಬ್ರುವರಿ 8 ರಂದು ನಡೆದ ರಾಜ್ಯ ಸಮಿತಿ ಸಭೆಯಲ್ಲಿ ಕೆ.ಎಂ ಗೋಪಾಲ ಅವರನ್ನು ಪಕ್ಷ ವಿರೋದಿ ಚಟುವಟಿಕೆ ನಡೆಸಿದ್ದಾರೆ ಎಂದು ಪರಿಗಣಿಸಿ ಪದಾಧಿಕಾರಿ ಹುದ್ದೆಯಿಂದ ಅಮಾನತುಪಡಿಸಲಾಗಿದೆ.
ಬಿಎಸ್ಪಿ ಮುಖಂಡರಾದ ಕೆ. ಆರ್. ಗಂಗಾಧರ್, ಬಾಬು, ವಿಜಯಕುಮಾರ್ ಗೋಷ್ಠಿಯಲ್ಲಿ ಇದ್ದರು.
ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಸಾಕಷ್ಟು ಪರ ವಿರೋಧ ಚರ್ಚೆಗಳಿಗೆ ಕಾರಣವಾಗಿದೆ.
Public Desclimer
This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.
News Malnad is not responsible for any misuse of our media identity by unauthorized persons.















