
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಚಿಕ್ಕಮಂಗಳೂರು ಜಿಲ್ಲೆಯ 6 ಮೋಸ್ಟ್ ವಾಂಟೆಡ್ ನಕ್ಸಲರು ಶರಣಾಗತಿಯಾಗಿದ್ದರು ಬಳಿಕ ಕೆಲವು ದಿನಗಳ ಹಿಂದೆ ನಕ್ಸಲ್ ರವೀಂದ್ರ ಕೂಡ ಚಿಕ್ಕಮಗಳೂರು ಜಿಲ್ಲಾಡಳಿತದ ಎದುರು ಶರಣಾಗತಿಯಾಗಿದ್ದ. ಇದರ ಬೆನ್ನಲ್ಲೇ ಕಾಡಿನಲ್ಲಿ 1 ನಾಡ ಬಂದೂಕು 19 ಕಾರ್ಟ್ರಿಜ್ ಗಳು ಪತ್ತೆಯಾಗಿದೆ.
ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಹುಲಗಾರುಬೈಲು ಸಮೀಪದ ಅರಣ್ಯದಲ್ಲಿ ಒಂದು ನಾಡ ಬಂದೂಕು, 10 ಖಾಲಿ ಕಾಟ್ರೇಜ್ ಪತ್ತೆಯಾಗಿದ್ದು.ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಶೃಂಗೇರಿ ಪೊಲೀಸರು ಒಂದು ನಾಡ ಬಂದೂಕು ಸೇರಿದಂತೆ 19 ಖಾಲಿ ಕಾಟ್ರೇಜ್ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮದುವೆಗೆ ಸರ್ಕಾರದಿಂದ ಸಿಗಲಿದೆ 60,000 ಸಹಾಯಧನ!; ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ
ಕಳೆದ ಶನಿವಾರ ಶರಣಾಗತಿಯಾದ ನಕ್ಸಲ್ ರವೀಂದ್ರ ಶಸ್ತ್ರಾಸ್ತ್ರ ರಹಿತವಾಗಿ ಶರಣಾಗತಿಯಾಗಿದ್ದ.ಶರಣಾಗತಿಗೂ ಮುನ್ನ ರವೀಂದ್ರ ತನ್ನ ಬಳಿ ಇದ್ದ ಶಸ್ತ್ರಾಸ್ತ್ರ ವನ್ನು ಕಾಡಿನಲ್ಲಿ ಎಸೆದಿರುವ ಶಂಕೆ ಮೂಡಿದೆ. ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














