ನಿನ್ನೆ ಶೃಂಗೇರಿಯ ರೋಟರಿ ಸಭಾಭವನದಲ್ಲಿ ತಾಲೂಕು ಯುವ ಒಕ್ಕಲಿಗರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ತಾಲೂಕು ಯುವ ಒಕ್ಕಲಿಗರ ವೇದಿಕೆ ನೂತನ ಅಧ್ಯಕ್ಷರಾಗಿ ಸಚೀಂದ್ರ ಹೊಸ್ತೋಟ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್

ಉಪಾಧ್ಯಕ್ಷರಾಗಿ ಶುಭಕೃತ ಹೆಗಡೆ ಯಡದಹಳ್ಳಿ, ಮದನ್ ತೆಕ್ಕುರ್, ಕಾರ್ಯದರ್ಶಿಯಾಗಿ ಶ್ರೇಯಸ್ ನೆಮ್ಮಾರ್, ಸಹ ಕಾರ್ಯದರ್ಶಿ ಆಗಿ ಪ್ರಜ್ವಲ್ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ರಮೇಶ್, ಶಂಕರಪ್ಪ ಗೇರ್ ಬೈಲ್, ಅಶೋಕ್ ಕಲ್ಕಟ್ಟೆ, ಮಾಜಿ ಅಧ್ಯಕ್ಷರಾದ ಸಂತೋಷ್ ಕಾಳ್ಯ, ರಾಜಣ್ಣ ತೆಕ್ಕುರ್, ಶಿರಾಂಕ ಕಲ್ಕುಳಿ ಹಾಗೂ ಅಭಿಲಾಷ್ ಹೆಗ್ಡೆ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಸಿಹಿಸುದ್ದಿ; ಮತ್ತೆ ಆಧಾರ್ ಸಂಖ್ಯೆ ಜೋಡಣೆಗೆ ದಿನಾಂಕ ವಿಸ್ತರಣೆ
ಭಾರೀ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಭಾನುವಾರವೂ ಕರಾವಳಿ, ಮಲೆನಾಡು ಸೇರಿದಂತೆ ಒಳನಾಡಿನ ಕೆಲವೆಡೆ ಮಳೆ ಅಬ್ಬರಿಸಿತ್ತು. ಚಿಕ್ಕಮಗಳೂರಿನಲ್ಲಿ ಬಿಟ್ಟುಬಿಡದೆ ಮಳೆ ಸುರಿಯುತ್ತಿದ್ದು, ರಸ್ತೆ ಬದಿ ಗುಡ್ಡ ಕುಸಿತ ಹೆಚ್ಚಾಗುತ್ತಿದೆ.
ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನ ಅಲೆಖಾನ್ ಬಳಿ ಭೂ ಕುಸಿತ ಉಂಟಾಗಿದ್ದು, ಘಟನಾ ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ಭೂಕುಸಿತ ಉಂಟಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಮೂಡಿಗೆರೆ ಸರ್ಕಲ್ ಇನ್ಸ್ಪೆಕ್ಟರ್, ಸೋಮೇಗೌಡ, ಬಣಕಲ್ ಸಬ್ ಇನ್ಸ್ಪೆಕ್ಟರ್ ರೇಣುಕಾ, ಹೈವೇ ಪೆಟ್ರೋಲ್ ಮತ್ತು ಪೊಲೀಸರು ಇದ್ದರು.












