ಶೃಂಗೇರಿ ಪೌರ ಕಾರ್ಮಿಕರ ಮುಷ್ಕರ: ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಬೆಂಬಲ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ)  ನಗರದಲ್ಲಿ ಪೌರಕಾರ್ಮಿಕರ ಮುಷ್ಕರಕ್ಕೆ ಜೆಡಿಎಸ್ ರಾಜ್ಯ ಹಿರಿಯ ಉಪಾಧ್ಯಕ್ಷರಾದ ಸುಧಾಕರ್ ಶೆಟ್ಟಿ ಅವರು ಬೆಂಬಲ ಸೂಚಿಸಿದರು.

ಕಳೆದ ಮೂರು ದಿನಗಳಿಂದ ಶೃಂಗೇರಿ ಪಟ್ಟಣದ ಕಸ ಹಾಗೂ ನಗರ ನೈರ್ಮಲೀಕರಣ ಕೆಲಸ ಮತ್ತು ನಗರದಲ್ಲಿ ನೀರು ಸರಬರಾಜು ಸ್ಥಗಿತಗೊಳಿಸಿ ಪೌರ ಕಾರ್ಮಿಕರು, ಚಾಲಕರು ಹಾಗೂ ನೀರು ಸರಬರಾಜುದಾರರು ಮುಷ್ಕರ ಮಾಡುತ್ತಿದ್ದಾರೆ.


ಇದನ್ನೂ ಓದಿ: SSLC ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 3,500 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಮುಷ್ಕರದಲ್ಲಿ ಭಾಗವಹಿಸಿದ ಸುಧಾಕರ್ ಶೆಟ್ಟಿ ಅವರು ಕಳೆದ ಡಿಸೆಂಬರ್ ತಿಂಗಳಲ್ಲಿ ಸರ್ಕಾರ ಬಗೆಹರಿಸುವ ಭರವಸೆ ನೀಡಿತ್ತು ಆದರೆ ದುರಾದೃಷ್ಟವಶಾತ್ ಲೋಕಸಭಾ ಚುನಾವಣೆ ಮುಗಿದ ಮೇಲೆ, ಅಧಿಕಾರಿಗಳಾಗಲಿ, ಸ್ಥಳೀಯ ಶಾಸಕರಾಗಲಿ ಪೌರಕಾರ್ಮಿಕರ ಸಮಸ್ಯೆಯನ್ನು ಆಲಿಸಿಲ್ಲ.

ಪೌರಕಾರ್ಮಿಕರು ಮುಷ್ಕರ ನಡೆಸುತ್ತಿದ್ದರು ಸಹ ಅವರ ಮನವಿಗೆ ಸ್ಪಂದಿಸದೆ ಇರುವುದು ದುರದೃಷ್ಟಕರವೆಂದರು. ಇದೇ ಸಮಯದಲ್ಲಿ ಪೌರಾಡಳಿತ ಕಾರ್ಯ ಸಚಿವರ ಕಾರ್ಯದರ್ಶಿ ಶ್ರೀಮತಿ ದೀಪ ಚೋಳನ್ ರವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಸಮಸ್ಯೆಯನ್ನು ಮನವರಿಕೆ ಮಾಡಿಕೊಟ್ಟರು.


ಇದನ್ನೂ ಓದಿ: 9 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 1,000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಶೃಂಗೇರಿ ನಗರದ ಕುಡಿಯುವ ನೀರಿನ ಸಮಸ್ಯೆ ಮತ್ತು ಕಸ ವಿಲೇವಾರಿ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ಒತ್ತಾಯಿಸಿದರು

ಶೃಂಗೇರಿ ನಗರಕ್ಕೆ ಕೇವಲ ನಗರವಾಸಿಗಳು ಅಲ್ಲದೆ ಸಾವಿರಾರು ಪ್ರವಾಸಿಗರು ಪ್ರತಿ ದಿನ ಬರುವುದರಿಂದ ಈ ಸಮಸ್ಯೆಗೆ ಮೊದಲ ಆದ್ಯತೆ ಕೊಡಬೇಕು ಎಂದು ಒತ್ತಾಯಿಸಿದರು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಸ್ಥಳೀಯ ಕಾಂಗ್ರೆಸ್ ಶಾಸಕರು ಈ ಸಮಸ್ಯೆಗೆ ಸ್ಪಂದಿಸಿ, ಸಮಸ್ಯೆಯನ್ನು ಅತಿ ಶೀಘ್ರ ಬಗೆಹರಿಸುವ ಭರವಸೆಯನ್ನು ಹೊಂದಿದ್ದೇನೆ. ಅಕಸ್ಮಾತ್ ನೀವು ಬಗೆಹರಿಸದಿದ್ದರೆ ಪೌರಕಾರ್ಮಿಕರೊಂದಿಗೆ ಉಪವಾಸ ಸತ್ಯಾಗ್ರಹ ಕೂರುವುದರಲ್ಲಿ ನಾನು ಮೊದಲಿಗನಾಗುತ್ತೇನೆ ಎಂದರು.

ಮುಷ್ಕರ ಸ್ಥಳದಲ್ಲಿ ಮುಷ್ಕರಕ್ಕೆ ಬೆಂಬಲ ಸೂಚಿಸಿ, ಶೃಂಗೇರಿ ತಾಲೂಕು ಜೆಡಿಎಸ್ ನ ಅಧ್ಯಕ್ಷರಾದ ಭರತ್ ಗಿಣಿಕಲ್, ಮುಖಂಡರುಗಳಾದ, ವಿವೇಕಾನಂದರ ಭಟ್, ಸತೀಶ್ ಮಾಕಾರು, ದಿನೇಶ್ ಹೆಗ್ಡೆ , ಕಾರ್ಯದರ್ಶಿ ಸೂರ್ಡಿ ಚಂದ್ರಶೇಖರ್, ವೆಂಕಪ್ಪ ಆಚಾರ್, ಆನಂದ್ ಭಾಗವಹಿಸಿದ್ದರು.


ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ


ಕಡೂರು: ಸರ್ಕಾರಿ ಕಚೇರಿ ಸೇರಿದಂತೆ ವಿವಿಧೆಡೆ ಪ್ರಿಂಟರ್ ಕಳವು: ಆರೋಪಿ ಬಂಧನ

ಕಡೂರು: (ನ್ಯೂಸ್ ಮಲ್ನಾಡ್ ವರದಿ) ಪಟ್ಟಣದ ಮೆಸ್ಕಾಂ ಕಚೇರಿಯಲ್ಲಿ 3 ಪ್ರಿಂಟರ್ ಕಳವು ಮಾಡಿದ್ದ ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ವಿವಿಧೆಡೆ ಕಳವು ಮಾಡಿದ್ದ ಪ್ರಿಂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಚಿಕ್ಕಮಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿರುವ ಸರ್ಕಾರಿ ಕಚೇರಿ, ಮೆಸ್ಕಾಂ ಮತ್ತು ಬೆಸ್ಕಾಂ ಕಛೇರಿ, ನ್ಯಾಯಾಲಯ ಮತ್ತು ಕಾಲೇಜುಗಳಿಂದ ಪ್ರಿಂಟರ್ ಗಳನ್ನು ಕಳವು ಮಾಡಿದ್ದು, ಸುಮಾರು 6.22 ಲಕ್ಷ ಬೆಲೆಯ 79 ಪ್ರಿಂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ತಂಡದಲ್ಲಿ ಸಿಪಿಐ ಕಡೂರು ದುರುಗಪ್ಪ ಕೆ, ಪಿ.ಎಸ್.ಐ ನವೀನ್ ಎನ್. ಪಿ ಮತ್ತು ಪವನ್ ಕುಮಾರ್ ಸಿ . ಸಿ, ಸಿಬ್ಬಂದಿಗಳಾದ ಮಂಜುನಾಥಸ್ವಾಮಿ, ಕುಚೇಲ, ಸ್ವಾಮಿ, ದೇವರಾಜ್, ಬೀರೇಶ, ಮಧು, ಹರೀಶ, ಮಹಮ್ಮದ್ ರಿಯಾಜ್, ಈಶ್ವರಪ್ಪ, ಕಿಶೋರ್, ರವಿ ಕುಮಾರ್, ಧನಪಾಲನನಾಯ್ಕ ಮತ್ತು ಜಯಮ್ಮ ಇದ್ದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.