ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭಾರಿ ಕಸರತ್ತು ನಡೆಸುತ್ತಿರುವಂತೆಯೇ ಜಿಲ್ಲೆಗಳ ಕೆಲ ಗ್ರಾಮಸ್ಥರು ಮೂಲ ಸೌಕರ್ಯ ಕೊರತೆ ಆರೋಪಿಸಿ ಮತದಾನವನ್ನು ಬಹಿಷ್ಕರಿಸಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಲೋಕಸಭೆ ಚುನಾವಣೆ ಸೇರಿದಂತೆ ಮುಂಬರುವ ಯಾವುದೇ ಚುನಾವಣಾ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ನಿರಾಕರಿಸುವುದಾಗಿ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.


ಇದನ್ನೂ ಓದಿ; ಸಂಗೀತಾ ಶೃಂಗೇರಿ ಫಿಟ್ನೆಸ್ ಹಿಂದಿನ ಸೀಕ್ರೆಟ್ ಏನು ಗೊತ್ತಾ?; ಇವರ ಬೋಲ್ಡ್ ಲುಕ್ ಗೆ ಫ್ಯಾನ್ಸ್ ಫಿದಾ

ಅದೇ ರೀತಿ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮರ್ಕಲ್ ಗ್ರಾಮ ಪಂಚಾಯಿತಿಯ ಯಡದಾಳು ಗ್ರಾಮದಲ್ಲಿ ಅರಣ್ಯ ಕಾಯ್ದೆಯಿಂದ ಕೃಷಿಕರಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸಲು ನಿರ್ಧರಿಸಿದ್ದರು. ಈ ಕುರಿತು ತಹಶೀಲ್ದಾರ್, ವಲಯ ಅರಣ್ಯಾಧಿಕಾರಿ ಮತ್ತು ಚುನಾವಣಾಧಿಕಾರಿ ಭೇಟಿ ನೀಡಿ, ಚುನಾವಣೆ ಬಹಿಷ್ಕಾರ ನಿರ್ಧಾರದಿಂದ ಹಿಂದೆ ಸರಿಯುವಂತೆ ಸ್ಥಳೀಯರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ; ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಉದ್ಯೋಗ; 1113 ಹುದ್ದೆಗಳಿಗೆ ಅರ್ಜಿ ಆಹ್ವಾನ
435.8 ಎಕರೆ ಪರಿಭಾವಿತ ಅರಣ್ಯ ಎಂದು ಸುಳ್ಳು ದಾಖಲೆ ಸೃಷ್ಟಿ:
ಅರಣ್ಯ ಇಲಾಖೆ ಗ್ರಾಮದಲ್ಲಿ ಈಗಾಗಲೇ 435.8 ಎಕರೆ ಪ್ರದೇಶವನ್ನು ಅವೈಜ್ಞಾನಿಕವಾಗಿ ಮತ್ತು ಜನರಿಗೆ ಮಾಹಿತಿ ನೀಡದೆ ಸರ್ವೆ ಮಾಡಿ ಪರಿಭಾವಿತ ಅರಣ್ಯ 4(1) ಎಂದು ಘೋಷಿಸಿದೆ. ಅರಣ್ಯ ವ್ಯವಸ್ಥಾಪನ ಅಧಿಕಾರಿಗಳಿಗೆ ಗ್ರಾಮದಿಂದ 217 ಅಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಿದ್ದರೂ, ಒಂದೇ ದಿನ 435.8 ಎಕರೆ ಸರ್ವೆ ಮಾಡಿದ್ದೇವೆ ಎಂದು ಸುಳ್ಳು ದಾಖಲೆ ಸೃಷ್ಟಿಸಿ ಮೀಸಲು ಅರಣ್ಯದಿಂದ ಪರಿಭಾವಿತ ಅರಣ್ಯ ಮಾಡಲು ಹೋರಟಿದ್ದಾರೆ. ಜಿಲ್ಲಾಧಿಕಾರಿ ಮತ್ತು ಅರಣ್ಯ ವ್ಯವಸ್ಥಾಪನಾ ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಸಮಸ್ಯೆ ಸರಿಪಡಿಸದಿದ್ದರೆ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಹುಲುಗಾರು ಚಂದ್ರಶೇಖರ್ ರಾವ್ ಹೇಳಿದರು.

ಇದನ್ನೂ ಓದಿ; ಮತದಾರರೇ ಗಮನಿಸಿ; ವೋಟರ್ ಲಿಸ್ಟ್ ನಲ್ಲಿ ಹೆಸರು ಸೇರ್ಪಡೆಗೆ ಇನ್ನೂ ಇದೆ ಕಾಲಾವಕಾಶ
ರೈತರು ಜಮೀನಿನ ಪಕ್ಕದಲ್ಲಿರುವ ಜಾಗದಲ್ಲಿ ಕಾಳುಮೆಣಸು, ಕಾಫಿ ಬೆಳೆಸಿದ್ದಾರೆ. ಈಗಾಗಲೇ ಅರ್ಜಿ ನಮೂನೆ 50ಸಿ, 51ಸಿ, 52ಸಿ ಹಾಗೂ 57ಸಿ ಅಡಿ ಅಕ್ರಮ-ಸಕ್ರಮ ಸಮಿತಿಗೆ ಇಲ್ಲಿನ ಕೃಷಿಕರು ಅರ್ಜಿ ಸಲ್ಲಿಸಿದ್ದರೂ ಅರಣ್ಯ ಇಲಾಖೆಯವರು ಇದು ಅರಣ್ಯ ಪ್ರದೇಶ ಎನ್ನುತ್ತಿದ್ದಾರೆ. ಇಲಾಖೆಯವರು ಮತ್ತು ಅರಣ್ಯ ವ್ಯವಸ್ಥಾಪನಾಧಿಕಾರಿ ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಯಡದಾಳು ಮಂಜುನಾಥ್ ಹೇಳಿದರು.

ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಬಡ್ಡಿಯಿಲ್ಲದೆ ಸಿಗಲಿದೆ 5 ಲಕ್ಷ ರೂ.ವರೆಗೆ ಸಾಲ!
ಇನ್ನು ಚುನಾವಣೆ ಮುಗಿಯುವುದರೊಳಗೆ ಅರಣ್ಯ ವ್ಯವಸ್ಥಾಪನಾ ಅಧಿಕಾರಿ, ಜಿಲ್ಲಾಧಿಕಾರಿ, ಡಿಎಫ್ಒ ಯಡದಾಳು ಗ್ರಾಮಕ್ಕೆ ಬರಬೇಕು. ಇಲ್ಲದಿದ್ದಲ್ಲಿ ನಮ್ಮ ಹೋರಾಟ ಮತ್ತು ಚುನಾವಣಾ ಬಹಿಷ್ಕಾರ ನಿಲ್ಲುವುದಿಲ್ಲ ಗ್ರಾಮಸ್ಥರು ಪಟ್ಟುಹಿಡಿದಿದ್ದಾರೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆ; 8ನೇ ಕಂತಿನ ಹಣ ಈ ದಿನ ಬಿಡುಗಡೆ..!












