ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶಾರದಾ ಪೀಠದಲ್ಲಿ ಜಗದ್ಗುರುಗಳ ದರ್ಶನಕ್ಕೆ ವಸ್ತ್ರ ಸಂಹಿತೆ ಜಾರಿಗೊಳಿಸಿ ಪ್ರಕಟಣೆ ಹೊರಡಿಸಲಾಗಿದೆ.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ KYC ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್

ಈಗಾಗಲೇ ಅನೇಕ ದೇವಾಲಯಗಳಲ್ಲಿ ಈ ವಸ್ತ್ರ ಸಂಹಿತೆ ಜಾರಿಗೊಳಿಸಿದ್ದು, ಇದೀಗ ಶೃಂಗೇರಿ ಶಾರದಾ ಪೀಠದ ಗುರುಭವನದಲ್ಲಿ ಜಗದ್ಗುರುಗಳ ದರ್ಶನಕ್ಕೆ ಆಗಮಿಸುವವರಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲಾಗಿದೆ. ಗುರು ಭವನದ ಒಳಗೆ ಪ್ರವೇಶಿಸುವ ಪುರುಷರು ಪಂಚೆ ಮತ್ತು ಶಲ್ಯ ಮಹಿಳೆಯರು ಸೀರೆ ಧರಿಸಿ ಬರಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಇದನ್ನೂ ಓದಿ; ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ; ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಏನು?
ಬಿಜೆಪಿ ಸಂಸದನನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕನ ಮನವಿ
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ.
ಶಿವಮೊಗ್ಗದ ಬೆಕ್ಕಿನ ಕಲ್ಮಟದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿದ್ದೇನೆ. ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯವಾಗಿದೆ.
ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಬಿ.ವೈ ರಾಘವೇಂದ್ರ ಅವರಂಥ ಲೋಕಸಭಾ ಸದಸ್ಯರನ್ನು ಪಡೆದಿರುವ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆಯಾಗಬೇಕು. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಮುಂಬರುವ ಚುನಾವಣೆಯಲ್ಲೂ ಗೆಲ್ಲಿಸಬೇಕು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿರುವ ಸಾಮಾನ್ಯ ಕಾರ್ಯಕರ್ತರು ಎಲ್ಲಾ ಪಕ್ಷಗಳ ಮುಖಂಡರುಗಳ ಹಣೆಬರಹ ಇದು, ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದಲ್ಲೂ ಸಹ ಇಂತಹ ವಾತಾವರಣ ಇದೆ, ಕಾರ್ಯಕರ್ತರನ್ನು ಮಾತ್ರ ಬಲಿಪಶು ಮಾಡುತ್ತಾರೆ, ಈಗಿನ ಘಟನೆ ದೊಡ್ಡವರ ಹೊಂದಾಣಿಕೆ ರಾಜಕಾರಣಕ್ಕೆ ಉದಾಹರಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.












