ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶೃಂಗೇರಿ, ಬ್ಲಾಕ್ ಎಜುಕೇಶನ್ ಆಫೀಸ್ ಶೃಂಗೇರಿ ಇವರ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ಮಕ್ಕಳಿಗಾಗಿ “ಪರೀಕ್ಷೆಯ ಯಶಸ್ಸಿನ ಸಲಹೆಗಳು” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇದನ್ನೂ ಓದಿ; ಕೃಷಿ ಉಪಕರಣ ಪಡೆಯಲು ಅರ್ಜಿ ಆಹ್ವಾನ

03.02.2024 ಶನಿವಾರದಂದು ಬೆಳಿಗ್ಗೆ 10.00 ಗಂಟೆಗೆ ಶ್ರೀ ಆದಿಚುಂಚನಗಿರಿ ಸಮುದಾಯ ಭವನ ಶೃಂಗೇರಿಯಲ್ಲಿ ಆಯೋಜಿಸಲಾಗಿದೆ. ಶೃಂಗೇರಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಮುಖ್ಯಸ್ಥರಾದ ಶ್ರೀ ಶ್ರೀ ಗುಣನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದು, ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿರುವ ರಾಜೇಂದ್ರ ಭಟ್ ಅವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಮಾರ್ಗದರ್ಶನ ನೀಡಲಿದ್ದಾರೆ. ತಾಲೂಕಿನ ಎಲ್ಲಾ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಅವಕಾಶ ಪಡೆಯಬಹುದಾಗಿದೆ.

ಇದನ್ನೂ ಓದಿ; ಇಸ್ರೊದಿಂದ ಉದ್ಯೋಗಾವಕಾಶ
ಕಾಡಾನೆ ದಾಳಿಯಿಂದ ಬೆಳೆ ನಾಶ | ಸರ್ಕಾರ, ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆಯ ಎಚ್ಚರಿಕೆ
ಖಾಂಡ್ಯ: (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳಿಂದ ಜಿಲ್ಲೆಯ ಕೆಲ ಭಾಗದಲ್ಲಿ ಕಾಡಾನೆಗಳ ಹಾವಳಿ ತೀವ್ರಗೊಂಡಿದ್ದು, ಜನವಸತಿ ಪ್ರದೇಶ, ಸಾರ್ವಜನಿಕ ಸ್ಥಳಗಳಲ್ಲಿ ಕಾಡಾನೆಗಳ ಹಿಂಡು ಪ್ರತ್ಯಕ್ಷಗೊಳ್ಳುತ್ತಿರುವುದು ಸಾರ್ವಜನಿಕರಲ್ಲಿ ಭಯ ಭೀತಿ ಉಂಟು ಮಾಡಿದೆ. ಕಾಡಾನೆಗಳ ಹಿಂಡು ತೋಟ, ಭತ್ತದ ಗದ್ದೆ, ಕಬ್ಬಿನ ಗದ್ದೆಗಳಲ್ಲಿ ರಾಜಾರೋಷವಾಗಿ ಓಡಾಡುತ್ತಿವೆ. ಅಲ್ಲದೇ ಅಪಾರ ಪ್ರಮಾಣದ ಕೃಷಿ, ಬೆಳೆ ನಾಶ ಮಾಡಿವೆ.
ಇತ್ತೀಚೆಗೆ ಖಾಂಡ್ಯ ಹೋಬಳಿಯ ಕರಾಗಣೆ, ಹುಯಿಗೆರೆ, ಬಿದರೆ ಅರಿಗೆ, ಖಾಂಡ್ಯದ ಮುಂತಾದ ಕಡೆಗಳಲ್ಲಿ ಆನೆಗಳ ದಾಳಿ ಮುಂದುವರಿದಿದ್ದು, ಅಡಿಕೆ, ಕಾಫಿ ಸೇರಿದಂತೆ ಅಪಾರ ಪ್ರಮಾಣದ ಬೆಳೆಗಳು ನಾಶ ಮಾಡಿದೆ. ಇದೇ ರೀತಿ ಕಾಡಾನೆ ಹಾವಳಿ ಮುಂದುವರಿದರೆ ಸರ್ಕಾರದ ವಿರುದ್ಧ ಹಾಗೂ ಅರಣ್ಯ ಇಲಾಖೆಯ ವಿರುದ್ಧ ದೊಡ್ಡ ಚಳುವಳಿ ಮಾಡುವುದಾಗಿ ಖಾಂಡ್ಯ ನಾಗರೀಕ ರಕ್ಷಣ ವೇದಿಕೆ ಕಾರ್ಯಕರ್ತ ಚಂದ್ರಶೇಖರ್ ರೈ ಎಚ್ಚರಿಕೆಯನ್ನು ನೀಡಿದ್ದಾರೆ.
ಚಿಕ್ಕಮಗಳೂರು: ಕೊನೆಗೂ ಸುಖಾಂತ್ಯ ಕಂಡ ಅಂತರ್ ಧರ್ಮದ ಯುವಕ ಯುವತಿಯರ ವಿವಾಹ
ಕ್ರೈಸ್ತ ಧರ್ಮದ ಯುವತಿ ಅಭಿಷಾಗ್, ವಿಶ್ವಕರ್ಮ ಬ್ರಾಹ್ಮಣ ಯುವಕ ವಿನಯ್ ಕಳೆದ ಕೆಲ ವರ್ಷಗಳಿಂದ ಪ್ರೀತಿಸಿ ಕಳೆದ ಭಾನುವಾರ ದೇವಸ್ಥಾನ ಒಂದರಲ್ಲಿ ಮದುವೆಯಾಗಿದ್ದಾರೆ. ವಿಷಯ ತಿಳಿದ ಯುವತಿಯ ತಂದೆ ತಾಯಿ ಮಗಳು ಮೈನರ್ ಎಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ಪೊಲೀಸರು ಯುವತಿಯನ್ನು ಠಾಣೆಗೆ ಕರೆಸಿ ಪೋಷಕರ ಜೊತೆಗೆ ಕಳುಹಿಸಿಕೊಟ್ಟಿದ್ದಾರೆ. ಈ ವೇಳೆ ಪೊಲೀಸರು ವಿವಾಹವಾಗಿ ಬಂದಿದ್ದ ಯುವತಿಯ ತಾಳಿ, ಕಾಲುಂಗುರ ಬಿಚ್ಚಿಸಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಯುವಕ ಯುವತಿ ಪೊಲೀಸ್ ವರಿಷ್ಟಾಧಿಕಾರಿ ಮೊರೆ ಹೋಗಿದ್ದು, ಮತ್ತೆ ಜೋಡಿಯನ್ನು ಠಾಣೆಗೆ ಕರೆಸಿದ ಪೊಲೀಸರು ಇಬ್ಬರ ಹೇಳಿಕೆ ಪಡೆದು ಕಳುಹಿಸಿಕೊಟ್ಟಿದ್ದಾರೆ. ಕೊನೆಗೂ ಅಂತರ್ ಧರ್ಮದ ಯುವಕ ಯುವತಿಯ ವಿವಾಹ ಸುಖಾಂತ್ಯ ಕಂಡಿದೆ.















