ಶೃಂಗೇರಿ: ಅಂಬೇಡ್ಕರ್ ವಸತಿ ಶಾಲೆಯಲ್ಲಿ ಪ್ರಾಂಶುಪಾಲರಿಂದ ಕಿರುಕುಳ : ನೊಂದ ನೌಕರರ ಆರೋಪ

ಶೃಂಗೇರಿ:  (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ಗೋಚವಳ್ಳಿಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಹೊರಗುತ್ತಿಗೆ ನೌಕರರ ಮೇಲೆ ಪ್ರಾಂಶುಪಾಲರು ಮಾನಸಿಕ ಹಾಗೂ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ಶೃಂಗೇರಿ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲರಾದ ಶಂಕರಗೌಡ್ರ ಗಂಗನಗೌಡ್ರರು ಹೊರಗುತ್ತಿಗೆ ನೌಕರರು 8 ಗಂಟೆ ಕೆಲಸ ಮಾಡಬೇಕಾದ ಸಮಯವನ್ನು ದಿನಪೂರ್ತಿ ಮಾಡಬೇಕು ಎಂದು ಒತ್ತಡ ಹೇರುತ್ತಾರೆ. ಈ ಹಿಂದೆ ಪ್ರಾಂಶುಪಾಲರು ಕೆಲಸ ಮಾಡಿದ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಅವ್ಯಾಚ ಪದಗಳ ಉಚ್ಚಾರ ಮಾಡಿ ಅಸಭ್ಯ ವರ್ತನೆ ತೋರಿದ್ದರು. ಈ ವರ್ತನೆಯಿಂದ ಇಲ್ಲಿಯಾ ಮಹಿಳಾ ನೌಕರರಿಗೆ ಅವರೋಂದಿಗೆ ಕೆಲಸ ಮಾಡಲು ಬಯಾ ಉಂಟು ಮಾಡುವಂತೆ ಮಾಡಿದೆ. ಪ್ರಾಂಶುಪಾಲರು ಈ ವಸತಿ ಶಾಲೆಗೆ ಕರ್ತವ್ಯಕ್ಕೆ ಬಂದ ನಂತರ 23 ಜನ ನೌಕರರನ್ನು ಕೆಲಸದಿಂದ ತೆಗೆದಿದ್ದಾರೆ. ಅಲ್ಲದೆ ಮಾನಸಿಕ ಒತ್ತಡ ಮತ್ತು ಕಿರುಕುಳವನು ನೀಡಿದ್ದಾರೆ. ಇದರಿಂದಾಗಿ ಸರಿಯಾದ ಕ್ರಮ ಜರುಗಿಸಬೇಕು ಎಂದು ನೌಕರರು ದೂರು ಪತ್ರದಲ್ಲಿ `ನ್ಯೂಸ್ ಮಲ್ನಾಡ್’ಗೆ ತಿಳಿಸಿದ್ದಾರೆ.

ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!

`ನನಗೆ ಇದುವರೆಗೂ ಯಾವುದೇ ದೂರುಗಳು ಬಂದಿಲ್ಲ. ನಾನು ಇಂದೇ ಶೃಂಗೇರಿ ತಾಲ್ಲೂಕಿನ ಗೋಚವಳ್ಳಿಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಭೇಟಿ ನೀಡಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುತ್ತೇನೆ’ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಯೋಗಿಶ್ ಎಸ್.ಬಿ ತಿಳಿಸಿದ್ದಾರೆ.

ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ

ಮೂಡಿಗೆರೆ: ಕಾಡುಕೋಣ ದಾಳಿಯಿಂದ ಮೂವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪ್ರತ್ಯೇಕ ಪ್ರಕರಣಗಳಲ್ಲಿ ಕಾಡುಕೋಣ ದಾಳಿ ನಡೆಸಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೊರಟ್ಟಿಯಲ್ಲಿ ಬುಧವಾರ ನಡೆದಿದೆ.

ಇದನ್ನೂ ಓದಿ; ಸರಳ ವಿವಾಹವಾಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ 50 ಸಾವಿರ ಪ್ರೋತ್ಸಾಹಧನ

ಗ್ರಾ.ಪಂ ಸದಸ್ಯ ಪ್ರಕಾಶ್ ಅವರ ಪತ್ನಿ ಸರೋಜ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿ ಕಾಲಿನ ತೊಡೆಯ ಎರಡು ಭಾಗಕ್ಕೆ ತಿವಿದಿದ್ದು, ಕಾಲಿನ ಬಲಭಾಗ ಗಂಭೀರ ಗಾಯವಾಗಿದೆ. ಮೂಡಿಗೆರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಉಪವಲಯ ಅರಣ್ಯಾಧಿಕಾರಿ ಚರಣ್, ಮೋಸಿನ್, ಗ್ರಾಮಸ್ಥ ರಘುಪತಿ ಭೇಟಿ ನೀಡಿ ದಾಳಿಯಾದ ಸ್ಥಳ ಪರಿಶೀಲನೆ ಮಾಡಿ ಪರಿಹಾರದ ಭರವಸೆ ನೀಡಿದ್ದಾರೆ.

ಇದನ್ನೂ ಓದಿ; ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ; ಸೇನೆ ಬಿಟ್ಟು ಸಂಘಕ್ಕೇಕೆ ಸೇರಿದ್ರು ಬ್ರಿಜೇಶ್ ಚೌಟ..?

ಇನ್ನೊಂದೆಡೆ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳಗೂರು ಸಂಪ್ಲಿಯಲ್ಲಿ ಕಾಡು ಕೋಣವೊಂದು ಟಿಂಬರ್ ಕಾರ್ಮಿಕನ ಮೇಲೆ ದಾಳಿ ಮಾಡಿ ಆದಂ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಬಲಗಾಲು ತೋಡೆ ಸಮೀಪ ತುಂಡಗಿದ್ದು ಬಣಕಲ್ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಉದ್ಯೋಗ; 152 ಹುದ್ದೆಗಳಿಗೆ ನೇರ ನೇಮಕಾತಿ

ಕಳೆದ ವಾರ ಜಾವಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರತೀಶ್ ಅವರ ಮೇಲೆ ಕಾಡುಕೋಣ ದಾಳಿ ಮಾಡಿ ಗಂಭೀರವಾಗಿ ಗಾಯಗೊಂಡಿದ್ದು, ಬಲಭಾಗದ ಪಕ್ಕೆ ಮುರಿದಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಈ ಯೋಜನೆಯಡಿಯಲ್ಲಿ ಸಿಗುತ್ತೆ ಬಡ್ಡಿ ರಹಿತ ಸಾಲ

ಇನ್ನು ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು, ಜನರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆಯಿಂದ ಕಾಡಾನೆ ಹಾವಳಿ, ಮತ್ತೊಂದೆಡೆ ಕಾಡುಕೋಣಗಳ ಹಾವಳಿಯಿಂದ ಜನರು ಹೈರಾಣಾಗಿದ್ದಾರೆ.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.

ಕಾಫಿನಾಡು ಚಿಕ್ಕಮಗಳೂರು ಹುಟ್ಟೂರು. ಬರವಣಿಗೆ, ಪ್ರವಾಸ ಆಸಕ್ತ ವಿಷಯಗಳು. ಕನ್ನಡ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಸುಮಾರು 5 ವರ್ಷಗಳ ಅನುಭವ.