ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ನೆಮ್ಮಾರಿನ ಶಂಕರಪ್ಪ ಎಂಬುವವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಹಾಗೂ ಚಿನ್ನ ಕಳ್ಳತನ ಆಗಿರುವ ಘಟನೆ ನಡೆದಿದೆ.
ಇದನ್ನೂ ಓದಿ; ನಿಮ್ಮ ವಾಹನದ ಫಾಸ್ಟ್ ಟ್ಯಾಗ್ KYC ಆಗಿದ್ಯಾ?;ಈ ದಿನದೊಳಗೆ ಫಾಸ್ಟ್ ಟ್ಯಾಗ್ ಗಳ ಕೆವೈಸಿ ಪೂರ್ಣಗೊಳಿಸಲು ಡೆಡ್ ಲೈನ್

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಅಂದಾಜು 1.50 ಲಕ್ಷ ನಗದು ಹಾಗೂ ಚಿನ್ನ ಕಳ್ಳತನ ಮಾಡಿದ್ದಾರೆ.
ಇದನ್ನೂ ಓದಿ; ಶಿವಮೊಗ್ಗ GTTC ಯಲ್ಲಿ ಉದ್ಯೋಗವಕಾಶ; ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆ ಏನು?
ನೆಮ್ಮಾರಿನ ಮುಖ್ಯ ರಸ್ತೆಯಲ್ಲಿರುವ ಶಂಕರಪ್ಪ ಅವರ ಮನೆಯ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು ಕಳ್ಳತನ ಎಸಗಿ ಪರಾರಿಯಾಗಿದ್ದಾರೆ, ಮನೆಯ ಮಾಲೀಕರು ಸಂಜೆ ಮನೆಗೆ ಹಿಂದಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಪ್ರಾರಂಭಿಸಿದ್ದಾರೆ.
ಇದನ್ನೂ ಓದಿ; 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
ಜಯಪುರ ಭಾಗದಲ್ಲೂ ಸರಣಿ ಕಳ್ಳತನ;
ಇದೇ ಕಳ್ಳತನ ಮಾದರಿಯಲ್ಲಿ ಇದೇ ತಿಂಗಳ 19ನೇ ತಾರೀಖಿನಂದು ಜಯಪುರ ಠಾಣಾ ವ್ಯಾಪ್ತಿಯ ಹೆಗ್ಗಾರುಕೊಡಿಗೆಯಲ್ಲಿ ಸಹ ಕಳ್ಳತನ ನಡೆದಿತ್ತು. ಇದಾದ ಬಳಿಕ ಎರಡು-ಮೂರು ದಿನದ ಆಸುಪಾಸಿನಲ್ಲಿ ಅಗಳಗಂಡಿಯ ಮಾರಿಕಾಂಬಾ ದೇವಸ್ಥಾನ ಹಾಗೂ ಅಗಳಗಂಡಿಯ ಹೈಸ್ಕೂಲ್ ನಲ್ಲಿ ಕೂಡ ಕಳ್ಳತನ ನಡೆದಿತ್ತು. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಸಂಸದನನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕನ ಮನವಿ
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನುಂಟು ಮಾಡಿದೆ.
ಶಿವಮೊಗ್ಗದ ಬೆಕ್ಕಿನ ಕಲ್ಮಟದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿದ್ದೇನೆ. ಉತ್ತಮ ಸಂಸದರನ್ನು ಆಯ್ಕೆ ಮಾಡಿದ್ದೀರಿ. ಮುಂದೆಯೂ ಇವರನ್ನು ಆಯ್ಕೆ ಮಾಡಬೇಕಿರುವುದು ಸಾರ್ವಜನಿಕರ ಕರ್ತವ್ಯವಾಗಿದೆ.
ಇದನ್ನೂ ಓದಿ; ಹುತಾತ್ಮ ಯೋಧ ಕ್ಯಾ. ಪ್ರಾಂಜಲ್ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
ಬಿ.ವೈ ರಾಘವೇಂದ್ರ ಅವರಂಥ ಲೋಕಸಭಾ ಸದಸ್ಯರನ್ನು ಪಡೆದಿರುವ ನೀವೇ ಧನ್ಯರು. ಜಿಲ್ಲೆಯಲ್ಲಿ ಆಗಬೇಕಿರುವ ಎಲ್ಲ ಕೆಲಸಗಳನ್ನು ಪೂರ್ಣ ಮಾಡಿ ಮುನ್ನಡೆಯುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಕೆಲಸ ಆಗಬೇಕಿರುವುದು ಮೊದಲ ಆದ್ಯತೆಯಾಗಬೇಕು. ಜನರ ಅಭಿಲಾಷೆಯಂತೆ ಕೆಲಸ ಮಾಡಿರುವ ಲೋಕಸಭಾ ಸದಸ್ಯರನ್ನು ಮುಂಬರುವ ಚುನಾವಣೆಯಲ್ಲೂ ಗೆಲ್ಲಿಸಬೇಕು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ.
ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಕಿಡಿಕಾರಿರುವ ಸಾಮಾನ್ಯ ಕಾರ್ಯಕರ್ತರು ಎಲ್ಲಾ ಪಕ್ಷಗಳ ಮುಖಂಡರುಗಳ ಹಣೆಬರಹ ಇದು, ತಾಲ್ಲೂಕು ಮಟ್ಟದಿಂದ ರಾಜ್ಯ ಮಟ್ಟದಲ್ಲೂ ಸಹ ಇಂತಹ ವಾತಾವರಣ ಇದೆ, ಕಾರ್ಯಕರ್ತರನ್ನು ಮಾತ್ರ ಬಲಿಪಶು ಮಾಡುತ್ತಾರೆ, ಈಗಿನ ಘಟನೆ ದೊಡ್ಡವರ ಹೊಂದಾಣಿಕೆ ರಾಜಕಾರಣಕ್ಕೆ ಉದಾಹರಣೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.












