ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಜೆಸಿಐ ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೆಸಿಬಿಎಂ ಕಾಲೇಜಿನಲ್ಲಿ ನಡೆಯಿತು.
2024 ನೇ ಸಾಲಿನ ಜೆಸಿಐ ಘಟಕದ ನೂತನ ಅಧ್ಯಕ್ಷರಾಗಿ ರಾಘವೇಂದ್ರ ಪದಗ್ರಹವನ್ನು ಸ್ವೀಕರಿಸಿದರು. ಕಾರ್ಯದರ್ಶಿಯಾಗಿ ರಮೇಶ್ ಎಸ್.ಎಮ್, ಖಜಾಂಚಿಯಾಗಿ ರಾಜೇಶ್, ಉಪಾಧ್ಯಕ್ಷರಾಗಿ ಅಶೋಕ್, ಸುಜಿತ್, ಶ್ರೀಕಾಂತ್, ಭುವನೇಂದ್ರ, ಚಂದ್ರನಾಯ್ಕ ಹಾಗೂ ನಿರ್ದೇಶಕರಾಗಿ ಅನ್ವಿತ್ ಕಾಮತ್, ಮೋಹನ್, ಅನಂತಕೃಷ್ಣ, ಪೂರ್ಣಚಂದ್ರ, ರಾಘವೇಂದ್ರ ಕೆ ಎನ್, ವಿಘ್ನೇಶ್, ನಿತೀಶ್ ನಾಯಕ್ ಅವರು ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ; ರೈತರೇ ಗಮನಿಸಿ; PM KISAN ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
ಈ ಕಾರ್ಯಕ್ರಮದ ಕುರಿತು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮಾತನಾಡಿ, ಜೆಸಿಐ ಸಂಸ್ಥೆ ಒಂದು ವ್ಯಕ್ತಿತ್ವ ವಿಕಸನ ಹೊಂದಿಸುವ ಸಂಸ್ಥೆ. ಪ್ರಸ್ತುತ ದೇಶ ಅಥವಾ ವಿಶ್ವ ಕೊರತೆಯ ವಿಕಸನವನ್ನು ರೂಪಿಸಿದೆ. ಮಕ್ಕಳ ವ್ಯಕ್ತಿತ್ವ ವಿಕಸನ ಮತ್ತು ಅವರಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಜೆಸಿಐ ಸಂಸ್ಥೆ ಶ್ರಮಿಸುತ್ತದೆ. ವ್ಯಕ್ತಿತ್ವ ವಿಕಾಸನದ ಕುರಿತು ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ತಿಳಿಸಿದರು.
ಇದನ್ನೂ ಓದಿ; ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ
ಮೂಡಿಗೆರೆ: ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಸ್ತೆ ಬದಿ ಮಲಗಿದ್ದ ಗೋವನ್ನು ಮಧ್ಯರಾತ್ರಿ ಕದ್ದೊಯ್ದಿದ್ದಾರೆ. ಕಾರಿನಲ್ಲಿ ಒಂದು ಗೋವನ್ನು ತುಂಬಿಕೊಳ್ಳುತ್ತಿದ್ದಂತೆ ಮತ್ತೊಂದು ಗೋವು ಕಾರಿನ ಹಿಂದೆಯೇ ಓಡಿದೆ. ಆ ಗೋವನ್ನು ರಕ್ಷಿಸಲು ಯತ್ನಿಸಿದೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.












