ಶೃಂಗೇರಿ: ಜ್ಞಾನ ಜ್ಯೋತಿ ಕೇಂದ್ರದ ವಾರ್ಷಿಕೋತ್ಸವ: ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಬಿಸಿ ಟ್ರಸ್ಟ್) ಶೃಂಗೇರಿ ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಶೃಂಗೇರಿ ವಲಯದ ತೋರಣಗದ್ದೆ ಕಾರ್ಯಕ್ಷೇತ್ರದ ಗಂಡಘಟ್ಟ ಶಾಲೆಯಲ್ಲಿ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಲ್ಲಿ ಜ್ಞಾನ ಜ್ಯೋತಿ ಕೇಂದ್ರದ ವಾರ್ಷಿಕೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಕೀಲರಾದ ನಟಶೇಖರ ವಿ.ಆರ್. ಅವರು ಮಹಿಳೆಯರ ಹಕ್ಕುಗಳು, ಮಹಿಳೆಯರಿಗೆ ಇರುವ ವಿವಿಧ ಕಾನೂನುಗಳು ಹಾಗೂ ಅವುಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ಮಹಿಳೆಯರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿದ್ದು, ಅಗತ್ಯ ಸಂದರ್ಭದಲ್ಲಿ ಕಾನೂನಿನ ನೆರವು ಪಡೆಯುವ ಕುರಿತು ಅವರು ವಿವರಿಸಿದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರಾದ ಬಾಬು, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸುನಿತಾ, ಲೆಕ್ಕಪರಿಶೋಧಕಿ ಸುಜಾತಾ, ಸೇವಾ ಪ್ರತಿನಿಧಿ ವಿನುತಾ ಹಾಗೂ ಜ್ಞಾನ ಜ್ಯೋತಿ ಕೇಂದ್ರದ ಸದಸ್ಯೆಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.