ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ 5 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು.
ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ!; ಸರ್ಕಾರದಿಂದ ಮಹತ್ವದ ಸುದ್ದಿ

ಶ್ರೀಮಠದ ಸುವರ್ಣಭಾರತೀ ಮಹೋತ್ಸವ ಯೋಜನೆಯಡಿ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಮಂಗಳವಾರ ಗುರು ನಿವಾಸದಲ್ಲಿ 5 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಸಂಘದ ಅಧ್ಯಕ್ಷೆ ಶೋಭಾ ಅನಂತಯ್ಯ ಅವರಿಗೆ ಹಸ್ತಾಂತರಿಸಿದರು.
ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿ ಸನ್ಯಾಸ ಸ್ವೀಕರಿಸಿ 50 ವರ್ಷವಾದ ಹಿನ್ನೆಲೆಯಲ್ಲಿ ಸುವರ್ಣಭಾರತೀ ಯೋಜನೆಯಡಿ ಶೃಂಗೇರಿ ಶಾರದಾಪೀಠವು ಶೈಕ್ಷಣಿಕ, ವೈದ್ಯಕೀಯ, ಸಾಮಾಜಿಕ, ಸಾಂಸ್ಕೃತಿಕ ಕ್ಷೇತ್ರಗಳಿಗೆ ಹಾಗೂ ಸಂಘ-ಸಂಸ್ಥೆಗಳಿಗೆ ಸಾಕಷ್ಟು ನೆರವು ನೀಡುತ್ತಿದೆ. ಇದೀಗ ಪತ್ರಕರ್ತರ ಸಂಘದ ಕಟ್ಟಡ ನಿರ್ಮಾಣ ಶೀಘ್ರದಲ್ಲಿ ನಿರ್ಮಾಣಗೊಂಡು ಪತ್ರಕರ್ತರಿಗೆ ಹೆಚ್ಚು ಸದುಪಯೋಗವಾಗಲಿ ಎಂದು ಅನುಗ್ರಹಿಸಿದರು.
ಇದನ್ನೂ ಓದಿ: ಮಾರುಕಟ್ಟೆಗೆ ಬಂದಿದೆ ನಕಲಿ ಕಲ್ಲಂಗಡಿ ಹಣ್ಣು!; ಹೀಗೆ ಪತ್ತೆ ಹಚ್ಚಿ…
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸಸಿಮನೆ ಶಿವಶಂಕರ್, ಉಪಾಧ್ಯಕ್ಷ ರಂಜಿತ್, ಪದಾಧಿಕಾರಿಗಳಾದ ಎಚ್.ಎಸ್.ಸುಬ್ರಹ್ಮಣ್ಯ, ರಾಘವೇಂದ್ರ, ಎನ್.ಕೆ.ಸುಬ್ರಹ್ಮಣ್ಯ ಆಚಾರ್ಯ, ಅಭಿನವ್, ಕೆ.ವಿ.ರಮೇಶ್ ಹಾಗೂ ರಾಘವೇಂದ್ರ ಇದ್ದರು.
ಇದನ್ನೂ ಓದಿ: ಈ ಬಾರಿ 10th ಪರೀಕ್ಷೆಯಲ್ಲಿ ಹೊಸ ರೂಲ್ಸ್!; ವಿದ್ಯಾರ್ಥಿಗಳಿಗೆ ಈ ನಿಯಮ ಕಡ್ಡಾಯ ಅಂದ್ರು ಶಿಕ್ಷಣ ಸಚಿವ












