
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಹಾರ್ಡ್ ವೇರ್ ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ. ಅಡ್ಡಗದ್ದೆ ಮೂಲದ ಸುಧೀರ್ (50) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಇದನ್ನೂ ಓದಿ; ಬಿಪಿಎಲ್ ಕಾರ್ಡ್ ಇದ್ರೆ ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ!; ಹೇಗೆ.. ಏನು ನಿಯಮ..?

ಶೃಂಗೇರಿಯ ಮಂಜುನಾಥ ಹಾರ್ಡ್ ವೇರ್ ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದ ಸುಧೀರ್, ನಿನ್ನೆ ಮನೆಯಲ್ಲಿ ಯುಗಾದಿ ಹಬ್ಬ ಆಚರಿಸಿ ನಂತರ ಹೆಂಡತಿ ಮಕ್ಕಳನ್ನು ತವರು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಇಂದು ಬೆಳಗ್ಗೆ ಕೆಲಸಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಬಂದ ಸುಧೀರ್ 09-50 ಯಿಂದ 10-30 ಸುಮಾರಿಗೆ ಕುರುಬಗೆರೆಯ ಗೋಡೌನ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.


ಇದನ್ನೂ ಓದಿ; pm ಕಿಸಾನ್ ಯೋಜನೆಯ ನೋಂದಣಿ ಹೇಗೆ ಮಾಡೋದು..; ಸಿಂಪಲ್ ಸ್ಟೆಪ್ಸ್ ಇಲ್ಲಿವೆ!
ಸುಧೀರ್ ಅವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಕ್ಕರೆ ಖಾಯಿಲೆ ಇದ್ದು, ಚಿಕಿತ್ಸೆ ಪಡೆದರೂ ಗುಣಮುಖರಾಗದೇ ಇರುವ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದರು. ಇದರಿಂದಾಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ; svc ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ಉದ್ಯೋಗ;113 ಹುದ್ದೆಗಳಿಗೆ ಅರ್ಜಿ ಆಹ್ವಾನ
ಕಡೂರು: ಕಾರು-ಬೈಕ್ ನಡುವೆ ಭೀಕರ ಅಪಘಾತ: ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವು
ಕಡೂರು: (ನ್ಯೂಸ್ ಮಲ್ನಾಡ್ ವರದಿ) ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ತಂಗಲಿ ಅಂಡರ್ ಪಾಸ್ ನಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (44) ಸ್ಥಳದಲ್ಲೇ ಮೃತಪಟ್ಟ ಹೆಡ್ ಕಾನ್ಸ್ ಟೇಬಲ್.
ಕಡೂರು ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಲ್ಲಿಕಾರ್ಜುನ್, ಪ್ರಕರಣವೊಂದರ ಸ್ಥಳ ಮಹಜರ್ ಗೆ ಅಂಚೆಚೋಮನಹಳ್ಳಿಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದ್ದು, ಡಿಕ್ಕಿಯಾದ ರಭಸಕ್ಕೆ ಮಲ್ಲಿಕಾರ್ಜುನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.













