
ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ಅಡಿಕೆ ತೋಟಕ್ಕೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಸುಂದರ ಎಂಬವರ ಜಮೀನಿನಲ್ಲಿ ಕೆಲ ದಿನಗಳ ಹಿಂದೆ, ಮನೆಯವರು ಇಲ್ಲದ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ದುಷ್ಕರ್ಮಿಗಳು ಅಡಿಕೆ ತೋಟದಲ್ಲಿನ ಸುಮಾರು 205ರಿಂದ 300 ಮರಗಳಿಗೆ ಡ್ರಿಲ್ಲಿಂಗ್ ಯಂತ್ರದ ಮೂಲಕ ರಂಧ್ರಗಳನ್ನು ಕೊರೆದು ಔಷಧವನ್ನು ಹಾಕಿದ್ದಾರೆ. ಇದರಿಂದ ತೋಟಕ್ಕೆ ಭಾರೀ ನಷ್ಟ ಉಂಟಾಗಿದೆ.

ಈ ಕುರಿತು ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಆಸ್ತಿ ವಿಚಾರವೇ ಕಾರಣ ಇರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
















