ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಸಂತೆ ಮಾರುಕಟ್ಟೆ ಕಟ್ಟಡ ಇದ್ದರೂ ಅಲ್ಲಿ ವಾರದ ಸಂತೆ ವ್ಯಾಪಾರ ಮಾಡದೆ, ರಸ್ತೆಯಲ್ಲಿ ಗೊಚ್ಚೆಯ ನಡುವೆ ವ್ಯಾಪಾರ ಮಾಡಿ ಜನರಿಗೆ ಗೊಚ್ಚೆ ತರಕಾರಿ ತಿನ್ನಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯಿತಿ ಸದಸ್ಯ ರಫೀಕ್ ಅಹ್ಮದ್ ಪಟ್ಟಣ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್!; ಕೃಷಿ ಉಪಕರಣ ಖರೀದಿಗೆ 50% ಸಬ್ಸಿಡಿ

ಕಳೆದ ಹಲವು ವರ್ಷಗಳ ಹಿಂದೆಯೇ ಸಂತೆ ಮಾರುಕಟ್ಟೆ ನಿರ್ಮಾಣ ಮಾಡಲಾಗಿದೆ, ಆದರೆ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವೈಫಲ್ಯದಿಂದ ಅಲ್ಲಿ ವ್ಯಾಪಾರ ಮಾಡದೆ ರಸ್ತೆಯಲ್ಲಿ ಮಾಡುತ್ತಿದ್ದಾರೆ, ಇದರಿಂದ 35 ಲಕ್ಷ ಅನುದಾನದಲ್ಲಿ ಕಟ್ಟಿದ ಕಟ್ಟಡ ಉಪಯೋಗಕ್ಕೆ ಇಲ್ಲದಾಗಿದೆ.
ಈ ಬಗ್ಗೆ ಹಲವು ಬಾರಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ದೂರು ನೀಡಿದ್ದರೂ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಬಗ್ಗೆ ಮುಖ್ಯಾಧಿಕಾರಿಗಳು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರು ಕ್ರಮ ವಹಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತೆ ಪ್ರತಿಭಟನೆ ಮಾಡಲಾಗುವುದು ಎಂದಿದ್ದಾರೆ
ಇದನ್ನೂ ಓದಿ: ರೈಲ್ವೆ NTPC ಗ್ರಾಜುವೇಟ್ ನೇಮಕಾತಿ; 30,307 ಹುದ್ದೆಗೆ ಅರ್ಜಿ ಆಹ್ವಾನ












