ಶೃಂಗೇರಿ: ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಕಳೆದೊಂದು ವಾರ ಅಬ್ಬರಿಸಿದ ಮಳೆ ಇದೀಗ ಕೊಂಚ ಕಡಿಮೆಯಾಗಿದೆ. ಕಳೆದ ಒಂದು ವಾರ ನಿರಂತರವಾಗಿ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರೀ ಹಾನಿ ಉಂಟಾಗಿತ್ತು. ಮಲೆನಾಡಿನ ಪ್ರಮುಖ ನದಿಗಳಾದ ಹೇಮಾವತಿ, ತುಂಗಾ, ಭದ್ರಾ ನದಿಗಳು ಅಪಾಯದ ಮಟ್ಟದಲ್ಲಿ ಹರಿದ ಪರಿಣಾಮ ನದಿ ಪಾತ್ರದ ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿದ್ದವು. ಮಲೆನಾಡು ಭಾಗದಲ್ಲಿ ಕೆಲ ಪ್ರಮುಖ ರಸ್ತೆ ಮಾರ್ಗಗಳು ಬಂದ್ ಆಗಿದ್ದು, ಹಲವು ಮನೆಗಳು ಜಖಂಗೊಂಡಿದ್ದವು.


ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ


ಅಲ್ಲದೇ ಮಳೆ ಸೃಷ್ಟಿಸಿದ ಅವಾಂತರಗಳಿಂದಾಗಿ ಶೃಂಗೇರಿ-ಮಂಗಳೂರಿನ ರಸ್ತೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ನೆಮ್ಮಾರು ಗ್ರಾಮ ಪ್ರದೇಶದಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದ್ದು, ರಸ್ತೆಯುದ್ದಕ್ಕೂ ಮಣ್ಣು ತುಂಬಿದೆ. ಜೊತೆಗೆ ಬೃಹತ್ ಬಿರುಕೊಂದು ಬಿಟ್ಟಿದೆ. ಇದೇ ರಸ್ತೆಯಲ್ಲೇ ವಾಹನಗಳು ಬಿಡುವಿಲ್ಲದೇ ಸಂಚಾರ ಮಾಡುತ್ತಿವೆ. ಗುಡ್ಡ ಕುಸಿತದಿಂದಾಗಿ ದೊಡ್ಡ ದೊಡ್ಡ ಮರಗಳು, ಕಲ್ಲು, ಬಂಡೆಗಳು ರಸ್ತೆಗೆ ಬಿದ್ದಿವೆ. ಹಾಗೆಯೇ ನೆಮ್ಮಾರಿನ ಹೊಳೆಹದ್ದು ಸೇತುವೆ ತುಂಗೆಯ ಅಬ್ಬರಕ್ಕೆ ಸಂಪೂರ್ಣ ಜಖಂ ಆಗಿದೆ.


ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ


ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ:
ಮಲೆನಾಡಲ್ಲಿ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಬೆಳೆ, ರಸ್ತೆ, ಮನೆಗಳು ಹಾನಿಯಾಗಿದ್ದು, ಶೃಂಗೇರಿಯ ಗಾಂದಿ ಮೈದಾನ, ನೆಮ್ಮಾರು ಸೇತುವೆ, ಶೃಂಗೇರಿ-ಮಂಗಳೂರಿಗೆ ರಸ್ತೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ಶೃಂಗೇರಿಯ ಕುರದಮನೆ ರಸ್ತೆಯ ಮೇಲೆ ನದಿ ನೀರು ಬರುವ ಸ್ಥಳಗಳನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಇದನ್ನೂ ಓದಿ: ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ


 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.