ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ರಸ್ತೆ ಬದಿಯ ಗೋಡೆ, ಸಾರ್ವಜನಿಕ ಸಂಸ್ಥೆ ಅಥವಾ ಶಾಲಾ ಆವರಣ ಗೋಡೆಗಳಿಗೆ ಭಿತ್ತಿಪ್ರತ, ಪೋಸ್ಟರ್ ಗಳನ್ನು ಅಂಟಿಸಿ ಅಂದಗೆಡಿಸುವವರೇ ಹೆಚ್ಚು. ಆದರೆ, ಚಿತ್ರ ಕಲಾವಿದರೊಬ್ಬರು ಶಾಲೆಯ ಆವರಣ ಗೋಡೆಯೊಂದರಲ್ಲಿ ಕಲಾ ಕುಂಚ ಅರಳಿಸುವ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಶೃಂಗೇರಿ ತಾಲೂಕಿನ ಗಂಡಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಗೋಡೆಯು ಇದೀಗ ವಿವಿಧ ಸಂದೇಶಗಳನ್ನು ಹೊತ್ತು ನಿಂತಿರುವ ಚಿತ್ರಗಳಿಂದ ಕಂಗೊಳಿಸುತ್ತಿದೆ.

ಇದನ್ನೂ ಓದಿ; ಕೃಷಿ ಯಂತ್ರೋಪಕರಣ ಖರೀದಿಗೆ ಸಹಾಯಧನ; ಈಗಲೇ ಅರ್ಜಿ ಸಲ್ಲಿಸಿ

ಉಪ್ಕೃತಿ ಸ್ವಯಂ ಸೇವಾ ಸಂಸ್ಥೆ ಬೆಂಗಳೂರು. ಸಂಸ್ಥೆಯ ಸಂಸ್ಥಾಪಕರಾದ ಶ್ರೀಯುತ ಚಂದನ್ ಹಾಗೂ 33 ಜನರನ್ನೊಳಗೊಂಡ ತಂಡವು ಎರಡು ದಿನಗಳ ಕಾಲ ಶಾಲೆಯಲ್ಲಿಯೇ ವಾಸ್ತವ್ಯ ಹೂಡಿ ಕಲಿಕೆಗೆ ಸಂಬಂಧಿಸಿದ ಆಕರ್ಷಕ ಚಿತ್ರಗಳನ್ನು ರಚಿಸಿದ್ದಾರೆ. ಕೊಠಡಿಯ ಹೊರಭಾಗದಲ್ಲಿ ಚಿತ್ರಿಸಿರುವ ಯಕ್ಷಗಾನದ ಚಿತ್ರವು ಪ್ರಧಾನ ಆಕರ್ಷಣೆಯಾಗಿದೆ. ಇದರ ಜೊತೆಗೆ ಶಾಲಾ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿಗಳು ಮತ್ತು ವಿಜ್ಞಾನ ಸರಳ ಮಾದರಿಗಳನ್ನು ವಿತರಿಸಿದರು.



ಇದನ್ನೂ ಓದಿ; ಅಂಚೆ ಕಚೇರಿಯಲ್ಲಿ ಮಹಿಳೆಯರಿಗಾಗಿ ವಿಶೇಷ ಯೋಜನೆ!; ಜನರಿಂದ ಭರ್ಜರಿ ರೆಸ್ಪಾನ್ಸ್, ಏನಿದು ಯೋಜನೆ?
ಶೃಂಗೇರಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಭಾಗೀರಥಿ ಉಪ್ಕೃತಿ ಸಂಸ್ಥೆಯ ಸಮಾಜಮುಖಿ ಕಾರ್ಯವನ್ನು ಪ್ರಶಂಸಿಸಿದರು. ಹಾಗೂ ಶಾಲಾವರಣದಲ್ಲಿ ಚಿತ್ರ ತಂಡದವರಿಗೆ ಸನ್ಮಾನ ಕಾರ್ಯಕ್ರಮವನ್ನು ನೆರವೇರಿಸಲಾಯಿತು.


ಇದನ್ನೂ ಓದಿ; ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್; ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ
ಈ ಸಂದರ್ಭದಲ್ಲಿ ಸಂಸ್ಥೆಯ ಸದಸ್ಯ ಶಶಾಂಕ್, ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಜಯರಾಮ್ ಎಂ.ವಿ, ಶಾಲೆಯ ಮುಖ್ಯ ಶಿಕ್ಷಕರಾದ ವಿಜಯ ಎಸ್.ವಿ. ಶಿಕ್ಷಕರು ಹಾಗೂ ಶಾಲೆಯ ಸದಸ್ಯರು, ಹಳೆಯ ವಿದ್ಯಾರ್ಥಿಗಳು ಇದ್ದರು.

ತಮ್ಮನ ಸಾವಿನ ಸೇಡಿಗೆ ಅಣ್ಣನ ಬರ್ಬರ ಹತ್ಯೆ: ಇಬ್ಬರು ಆರೋಪಿಗಳು ಅಂದರ್
ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ಸೊರಬ ತಾಲೂಕಿನ ಉಡಿನೀರು ಗ್ರಾಮದ ರಫಿಕ್ (39) ನನ್ನು ಬರ್ಬರವಾಗಿ ಹತ್ಯೆ ಮಾಡಿ ಆರೋಪಿಗಳು ಎಸ್ಕೇಪ್ ಆಗಿದ್ದರು. ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನಾಯತ್ ಮತ್ತು ಕೊಲೆಯಾದ ರಫಿಕ್ ನ ಅಕ್ಕನ ಮಗ ಸಮೀರ್ ಬಂಧಿತ ಆರೋಪಿಗಳು.
ಇದನ್ನೂ ಓದಿ; ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
ಏನಿದು ಘಟನೆ:
ಒಂದೂವರೆ ವರ್ಷದ ಹಿಂದೆ ಆಸ್ತಿ ಮತ್ತು ವೈಯಕ್ತಿಕ ವಿಚಾರಕ್ಕೆ ಒಡಹುಟ್ಟಿದ ತಮ್ಮನನ್ನೇ ರಫಿಕ್ ಮರ್ಡರ್ ಮಾಡಿದ್ದನು. ಈ ಕೊಲೆ ಪ್ರಕರಣದಲ್ಲಿ ಜೈಲಿಗೆ ಸೇರಿದ್ದ ರಫಿಕ್ ಕೆಲವು ತಿಂಗಳ ಹಿಂದೆ ಬೇಲ್ ಮೇಲೆ ಹೊರ ಬಂದಿದ್ದನು. ಆಸ್ತಿ ವಿಚಾರ ಹಾಗೂ ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿದ ದ್ವೇಷಕ್ಕೆ ಇನಾಯತ್, ರಫಿಕ್ ಜೀವ ತೆಗೆಯಲು ಪ್ಲ್ಯಾನ್ ಮಾಡಿಕೊಂಡಿದ್ದ. ಈ ಸಂಬಂಧ ಶಿವಮೊಗ್ಗಕ್ಕೆ ಶಾಪಿಂಗ್ ನೆಪದಲ್ಲಿ ಕರೆತಂದಿದ್ದರು. ಊರಿಗೆ ವಾಪಸ್ ಹೋಗುವಾಗ ತಮ್ಮ ಸಲೀಂ ಕೊಲೆ ಪ್ರಕರಣದ ಸೇಡಿಗಾಗಿ ಅಣ್ಣ ರಫಿಕ್ ನನ್ನು ತಮ್ಮ ಇನಾಯತ್ ಮತ್ತು ಅಕ್ಕನ ಮಗ ಸಮೀರ್ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ.
ಇದನ್ನೂ ಓದಿ;HAL ಕಂಪನಿಯಲ್ಲಿದೆ ಬಂಪರ್ ಉದ್ಯೋಗಾವಕಾಶ: ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಕಣ್ಣಿಗೆ ಖಾರದ ಪುಡಿ ಎರಚಿ ಬಳಿಕ ತಂತಿಯಿಂದ ಕುತ್ತಿಗೆ ಬಿಗಿದು ಹತ್ಯೆ ಮಾಡಿದ್ದಾರೆ. ಕೊನೆಗೆ ಆತನ ಮೇಲೆ ಕಾರ್ ಕೂಡ ಹತ್ತಿಸಿದ್ದಾರೆ. ಆತ ಮೃತಪಟ್ಟಿರುವುದು ಖಚಿತವಾದ ಬಳಿಕ ಇಬ್ಬರು ಕಾರ್ ನಲ್ಲಿ ಎಸ್ಕೇಪ್ ಆಗಿದ್ದರು. ಮಗನ ಸಾವಿನ ಸುದ್ದಿ ತಿಳಿದ ತಂದೆ ಆಸ್ತಿಯಾಗಿ ರಫಿಕ್ ತಮ್ಮ ಇನಾಯತ್ ಮತ್ತು ಮಗಳ ಮಗ ಸಮೀರ್ ಸೇರಿ ದೊಡ್ಡ ಮಗ ರಫಿಕ್ ನನ್ನು ಹತ್ಯೆ ಮಾಡಿದ್ದಾರೆ. ಇವರಿಗೆ ತಕ್ಕ ಶಿಕ್ಷೆಯಾಗಬೇಕೆಂದು ಮೃತನ ತಂದೆ ಮಹ್ಮದ್ ಗೌಸ್ ಆಕ್ರೋಶ ಹೊರಹಾಕಿದ್ದರು.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
ಇನಾಯತ್ ಮತ್ತು ರಫಿಕ್ ನ ಅಕ್ಕನ ಮಗ ಸಮೀರ್ ಇಬ್ಬರನ್ನು ಬಂಧಿಸಲಾಗಿದ್ದು, ಇಬ್ಬರ ಮೇಲೂ ಆನಂದಪುರ ಪೊಲೀಸ್ ಠಾಣೆಯಲ್ಲಿ ಮರ್ಡರ್ ಕೇಸ್ ದಾಖಲಾಗಿದೆ. ಇತ್ತ ಕುಟುಂಬದಲ್ಲಿ ಶುರುವಾದ ಆಸ್ತಿ ವಿವಾದ ಇಬ್ಬರನ್ನು ಬಲಿ ಪಡೆದಿದೆ. ಅಣ್ಣನ ಕೊಲೆ ಕೇಸ್ ನಲ್ಲಿ ಈಗ ತಮ್ಮನು ಜೈಲು ಸೇರಿದ್ದಾನೆ.













