ಶೃಂಗೇರಿ: ಪಟ್ಟಣದಲ್ಲಿ ಕಳೆದ 15–20 ವರ್ಷಗಳಿಂದ ಪೌರಕಾರ್ಮಿಕರಾಗಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಖಾಯಂ ನೇಮಕಾತಿ ಕುರಿತು ಚರ್ಚೆ ನಡೆಸಿದ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡರಿಗೆ ನೇರ ಪಾವತಿ ಅಧ್ಯಕ್ಷ ನಾಗೇಶ್ ಅವರು ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ: ರೈತರ ಮಕ್ಕಳಿಗೆ ‘ರೈತ ವಿದ್ಯಾನಿಧಿ ಸ್ಕಾಲರ್ಶಿಪ್; 2,000 ದಿಂದ 11,000ದ ವರೆಗೆ ಸಿಗಲಿದೆ ವಿದ್ಯಾರ್ಥಿವೇತನ

ಖಾಯಂ ನೇಮಕಾತಿ ಕುರಿತು ವಿಧಾನಸೌಧದಲ್ಲಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಹಲವು ಬಾರಿ ಚರ್ಚೆ ನಡೆಸಿ ಪೌರಕಾರ್ಮಿಕರ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಖಾಯಂ ಮಾಡಿಕೊಡುವ ಭರವಸೆಯನ್ನು ಸಚಿವರು ನೀಡಿದ್ದರು.
ಇದನ್ನೂ ಓದಿ: ಆಧಾರ್ ಸೇವಾ ಕೇಂದ್ರದಲ್ಲಿ ಜಾಬ್, ಅರ್ಜಿ ಆಹ್ವಾನ
ಮುಂದಿನ ಹಂತದಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಶಾಸಕರು ತಿಳಿಸಿದ್ದಾರೆ ಎಂದು ನೇರ ಪಾವತಿ ಅಧ್ಯಕ್ಷ ನಾಗೇಶ್ ಮಾಹಿತಿ ನೀಡಿದ್ದು, ಶಾಸಕ ಟಿ.ಡಿ. ರಾಜೇಗೌಡರಿಗೆ ಧನ್ಯವಾದ ತಿಳಿಸಿದ್ದಾರೆ.












