ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ತಾಲ್ಲೂಕಿನ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾವಣದ ಸರ್ವೇ ನಂಬರ್ 196ರಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೊಗಾಗಿ ಮಂಜೂರಾದ 4 ಎಕರೆ 23 ಗುಂಟೆ ಕಂದಾಯ ಭೂಮಿಯನ್ನು ಕಂದಾಯ ಇಲಾಖೆಯು ಕೆ.ಎಸ್.ಆರ್.ಟಿ.ಸಿಗೆ ಹಸ್ತಾಂತರ ಮಾಡಿದರು.
ಇದನ್ನೂ ಓದಿ; ರಾಜ್ಯದ 106 ತಾಲ್ಲೂಕುಗಳಲ್ಲಿ ಕೃಷಿಭಾಗ್ಯ ಯೋಜನೆ ಜಾರಿ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

ಬಸ್ ಡಿಪೊಗಾಗಿ ಈ ಹಿಂದೆ ಬಾಳೆಹೊನ್ನೂರಿನ ಶಂಕರನಾರಾಯಣ ಭಟ್ ಬಳಕೆದಾರರ ವೇದಿಕೆ ಮೂಲಕ ಹೋರಾಟ ನಡೆಸಿದರು. ಮೆಣಸೆ ಗ್ರಾಮ ಪಂಚಾಯಿತಿಯ ಶಿಡ್ಲೆಯಲ್ಲಿ 5 ಎಕರೆ ಜಾಗ ಮಂಜೂರಾಗಿತ್ತು. ಆದರೆ, ಅರಣ್ಯ ಇಲಾಖೆಗೆ ಸೇರಿದ್ದರಿಂದ ಸಮಸ್ಯೆಯಾಗಿತ್ತು. ಇದೀಗ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತ್ಯಾವಣದಲ್ಲಿ 4 ಎಕರೆ 23 ಗುಂಟೆ ಕಂದಾಯ ಭೂಮಿಯನ್ನು ಕೆ.ಎಸ್.ಆರ್.ಟಿ.ಸಿಗೆ ಹಸ್ತಾಂತರಿಸಿದರು.
ಇದನ್ನೂ ಓದಿ; ಈ ಯೋಜನೆಯಲ್ಲಿ ಹೆಣ್ಣು ಮಕ್ಕಳಿಗೆ ಸಿಗಲಿದೆ 2 ಲಕ್ಷ; ಸರ್ಕಾರದ ಈ ಯೋಜನೆ ಬಗ್ಗೆ ತಿಳಿಯಿರಿ!
ವರ್ಷದೊಳಗೆ ಬಸ್ ಸೇವೆ ಲಭ್ಯ:
4 ಎಕರೆ 23 ಗುಂಟೆ ಕಂದಾಯ ಭೂಮಿಯನ್ನು ಮಂಜೂರು ಮಾಡಿರುವ ಸರ್ಕಾರ ಕೆ.ಎಸ್.ಆರ್.ಟಿ.ಸಿಗೆ ಹಸ್ತಾಂತರಿಸಿದ್ದು, 8 ಕೋಟಿ ವೆಚ್ಚದ ಅಂದಾಜು ಪಟ್ಟಿ ಅನುಮೋದನೆ ಆಗಿ ಟೆಂಡರ್ ಪ್ರಕ್ರಿಯೆ, ಕರಾರು ಒಪ್ಪಂದ ಮುಗಿದಿದೆ. ಇನ್ನು ಒಂದು ವರ್ಷದಲ್ಲಿ ಡಿಪೊ ನಿರ್ಮಾಣವಾಗಿ ಬಸ್ ಸೇವೆ ಆರಂಭವಾಗಲಿದೆ ಎಂದು ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ತಿಳಿಸಿದರು.
ಇದನ್ನೂ ಓದಿ; ಈ ಯೋಜನೆಯಲ್ಲಿ ಪ್ರತಿ ತಿಂಗಳು ಸಿಗಲಿದೆ 21,000; ಈಗಲೇ ಅರ್ಜಿ ಸಲ್ಲಿಸಿ
ಮೂಡಿಗೆರೆ: ಕಾಡುಕೋಣ ದಾಳಿಯಿಂದ ಮೂವರಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು
ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಪ್ರತ್ಯೇಕ ಪ್ರಕರಣಗಳಲ್ಲಿ ಕಾಡುಕೋಣ ದಾಳಿ ನಡೆಸಿ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಹೊರಟ್ಟಿಯಲ್ಲಿ ಬುಧವಾರ ನಡೆದಿದೆ.
ಇದನ್ನೂ ಓದಿ; ಸರಳ ವಿವಾಹವಾಗುವವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ 50 ಸಾವಿರ ಪ್ರೋತ್ಸಾಹಧನ
ಗ್ರಾ.ಪಂ ಸದಸ್ಯ ಪ್ರಕಾಶ್ ಅವರ ಪತ್ನಿ ಸರೋಜ ಅವರು ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣ ದಾಳಿ ನಡೆಸಿ ಕಾಲಿನ ತೊಡೆಯ ಎರಡು ಭಾಗಕ್ಕೆ ತಿವಿದಿದ್ದು, ಕಾಲಿನ ಬಲಭಾಗ ಗಂಭೀರ ಗಾಯವಾಗಿದೆ. ಮೂಡಿಗೆರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಚಿಕ್ಕಮಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅರಣ್ಯ ಉಪವಲಯ ಅರಣ್ಯಾಧಿಕಾರಿ ಚರಣ್, ಮೋಸಿನ್, ಗ್ರಾಮಸ್ಥ ರಘುಪತಿ ಭೇಟಿ ನೀಡಿ ದಾಳಿಯಾದ ಸ್ಥಳ ಪರಿಶೀಲನೆ ಮಾಡಿ ಪರಿಹಾರದ ಭರವಸೆ ನೀಡಿದ್ದಾರೆ.
ಇದನ್ನೂ ಓದಿ; ಭಾರತೀಯ ಸೇನೆಯ ನಿವೃತ್ತ ಅಧಿಕಾರಿ ಈಗ ಬಿಜೆಪಿ ಅಭ್ಯರ್ಥಿ; ಸೇನೆ ಬಿಟ್ಟು ಸಂಘಕ್ಕೇಕೆ ಸೇರಿದ್ರು ಬ್ರಿಜೇಶ್ ಚೌಟ..?
ಇನ್ನೊಂದೆಡೆ ಜಾವಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಳಗೂರು ಸಂಪ್ಲಿಯಲ್ಲಿ ಕಾಡು ಕೋಣವೊಂದು ಟಿಂಬರ್ ಕಾರ್ಮಿಕನ ಮೇಲೆ ದಾಳಿ ಮಾಡಿ ಆದಂ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರ ಬಲಗಾಲು ತೋಡೆ ಸಮೀಪ ತುಂಡಗಿದ್ದು ಬಣಕಲ್ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ; ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಉದ್ಯೋಗ; 152 ಹುದ್ದೆಗಳಿಗೆ ನೇರ ನೇಮಕಾತಿ
ಕಳೆದ ವಾರ ಜಾವಳಿ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರತೀಶ್ ಅವರ ಮೇಲೆ ಕಾಡುಕೋಣ ದಾಳಿ ಮಾಡಿ ಗಂಭೀರವಾಗಿ ಗಾಯಗೊಂಡಿದ್ದು, ಬಲಭಾಗದ ಪಕ್ಕೆ ಮುರಿದಿದ್ದು ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ; ಕೇಂದ್ರ ಸರ್ಕಾರದ ಯೋಜನೆ; ಈ ಯೋಜನೆಯಡಿಯಲ್ಲಿ ಸಿಗುತ್ತೆ ಬಡ್ಡಿ ರಹಿತ ಸಾಲ
ಇನ್ನು ಈ ಭಾಗದಲ್ಲಿ ಕಾಡುಕೋಣಗಳ ಹಾವಳಿ ವಿಪರೀತವಾಗಿದ್ದು, ಜನರು ತಮ್ಮ ಜಮೀನುಗಳಿಗೆ ಹೋಗಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆಯಿಂದ ಕಾಡಾನೆ ಹಾವಳಿ, ಮತ್ತೊಂದೆಡೆ ಕಾಡುಕೋಣಗಳ ಹಾವಳಿಯಿಂದ ಜನರು ಹೈರಾಣಾಗಿದ್ದಾರೆ.












