ಶೃಂಗೇರಿ: ಶಕ್ತಿ ಯೋಜನೆ ಎಫೆಕ್ಟ್ | ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಸಂಕಷ್ಟ

ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಾಂಗ್ರೆಸ್ ನ 5 ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆ ಯಶಸ್ವಿಯಾಗುತ್ತಿದೆ. ರಾಜ್ಯದಲ್ಲಿ ಲಕ್ಷಾಂತರ ಮಹಿಳೆಯರು ಈ ಯೋಜನೆ ಲಾಭ ಪಡೆದು ಉಚಿತವಾಗಿ ಪ್ರಯಾಣ ಮಾಡುತ್ತಿದ್ದಾರೆ. ಆದರೆ ಈ ಯೋಜನೆ ಎಷ್ಟು ಲಾಭದಾಯಕವಿದಿಯೋ ಅಷ್ಟೇ ಅನಾನುಕೂಲ ಸೃಷ್ಟಿಸಿದೆ.

 

ಇದನ್ನೂ ಓದಿ; ಪೊಲೀಸ್ ಹಾಗೂ ನಕ್ಸಲರ ನಡುವೆ ಮತ್ತೆ ಫೈರಿಂಗ್, ಮೂರು ರೈಫಲ್ ವಶ

ಹೌದು, ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆ ಸಂಬಂಧ ವಿದ್ಯಾರ್ಥಿಗಳಿಗೆ ಸಂಕಷ್ಟ ಎದುರಾಗಿದೆ. ಬಾಳೆಹೊನ್ನೂರು ಮಾರ್ಗದಿಂದ ಶೃಂಗೇರಿ ಗೆ ಸಂಚರಿಸುವ ಕೆ.ಎಸ್.ಆರ್.ಟಿ,ಸಿ ಬಸ್ ಗಳಲ್ಲಿ ವಿಪರೀತ ಪ್ರಯಾಣಿಕರು ಸಂಚರಿಸುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಸಾಧ್ಯವಾಗದ ಪರಿಸ್ಥಿತಿ ಎದುರಾಗಿದೆ.

 

ಇದನ್ನೂ ಓದಿ; ನಿಮ್ಹಾನ್ಸ್‌ ನಲ್ಲಿ ವಾಕ್ ಇನ್ ಇಂಟರ್ವ್ಯೂ; 32 ನರ್ಸಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಇದರಿಂದ ಅನೇಕ ವಿದ್ಯಾರ್ಥಿಗಳು ಕಾಲೇಜಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ. ಇವರುಗಳಲ್ಲಿ ಅನೇಕ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಂದ ಬರುತ್ತಿರುವುದರಿಂದ ಈ ಸಮಸ್ಯೆಯನ್ನು ಕೂಡಲೇ ಪರಿಹರಿಸಿ ಈ ಮಾರ್ಗದ ಕಾಲೇಜು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಳಗ್ಗಿನ ಕಾಲೇಜು ವೇಳೆಗೆ ಇನ್ನೊಂದು ಬಸ್ ನ ಸೌಕರ್ಯವನ್ನು ಒದಗಿಸಿಕೊಡುವಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಶೃಂಗೇರಿ ಕ್ಷೇತ್ರದ ಶಾಸಕ ಟಿ. ಡಿ. ರಾಜೇಗೌಡ ಇವರಿಗೆ ಮನವಿ ಸಲ್ಲಿಸಿದ್ದಾರೆ.

 

ಮೂಡಿಗೆರೆ: ಬೈಕ್ ಗೆ ತರಕಾರಿ ತುಂಬಿದ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಮೂಡಿಗೆರೆ: (ನ್ಯೂಸ್ ಮಲ್ನಾಡ್ ವರದಿ) ಬೈಕ್ ಗೆ ತರಕಾರಿ ತುಂಬಿದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಪಟ್ಟಣದಲ್ಲಿ ನಡೆದಿದೆ. ತಾಲೂಕಿನ ಕೆಂಜಿಗೆ ಸಮೀಪದ ಬಾಳೆಹಳ್ಳಿ ನಿವಾಸಿ ಮಂಜುನಾಥ್ (30) ಮೃತ ವ್ಯಕ್ತಿ.

 

ತರಕಾರಿ ತುಂಬಿಕೊಂಡು ರಾಷ್ಟ್ರೀಯ ಹೆದ್ದಾರಿ ಮೂಲಕ ಮಂಗಳೂರಿಗೆ ಹೋಗುತ್ತಿದ್ದ ಲಾರಿ ಬೈಕ್ ಗೆ ಡಿಕ್ಕಿಯಾಗಿದೆ. ಪರಿಣಾಮ ತಂದೆ ಜೊತೆ ಬೈಕ್ ನಲ್ಲಿ ಹೋಗುತ್ತಿದ್ದ ಮಂಜುನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಂದೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಚಾಲಕನ ಅವಸರದಿಂದಾ ಅಪಘಾತದ ರಭಸಕ್ಕೆ ಮೃತದೇಹವನ್ನ 1 ಕಿ.ಮೀ. ಎಳೆದೊಯ್ದ ಲಾರಿಯೂ ಪಲ್ಟಿಯಾಗಿದೆ.

ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. 

Public Desclimer

This media platform, News Malnad Digital Media, operates with strict ethical standards. If any person, staff member, or individual uses our media name for personal matters, threats, influence, or any activity not related to official work, we request the public and viewers to report it immediately to us at newsmalnadmedia@gmail.com or to the nearest Police Station.

News Malnad is not responsible for any misuse of our media identity by unauthorized persons.